JDS

ಶಿವಸೇನೆಯಂತೆ ಇಬ್ಬಾಗವಾಗುತ್ತಾ ಜೆಡಿಎಸ್? NDA ಸೇರುವ ದೇವೇಗೌಡರ ನಿರ್ಧಾರವನ್ನು ಧಿಕ್ಕರಿಸಿದ ರಾಜ್ಯಾಧ್ಯಕ್ಷ ಇಬ್ರಾಹಿಂ
ಲೋಕಸಭೆ ಚುನಾವಣೆ ಹಿನ್ನಲೆ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ನಿರ್ಧಾರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಧಿಕ್ಕರಿಸಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಜೆಡಿಎಸ್ ಸೇರುವುದಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಐಟಿ ಇಲಾಖೆ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ: ಡಿಕೆ ಶಿವಕುಮಾರ್
ಗುತ್ತಿಗೆದಾರರೊಬ್ಬರ ಮನೆ ಮೇಲೆ ದಾಳಿ ನಡೆಸಿದಾಗ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡ 42 ಕೋಟಿ ರೂ. ಹಣವನ್ನು ಕಾಂಗ್ರೆಸ್ ಸರ್ಕಾರ ಮತ್ತು ಅದರ ನಾಯಕರಿಗೆ ಲಿಂಕ್ ಮಾಡಿದ್ದಕ್ಕಾಗಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜೆಡಿಎಸ್ ಹಾಗೂ ಬಿಜೆಪಿ ಮುಖಂಡರು ಐಟಿ ಇಲಾಖೆಯ ಪ್ರತಿನಿಧಿಗಳಂತೆ ಏಕೆ ವರ್ತಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

ಐಟಿ ದಾಳಿಯಲ್ಲಿ ಸಿಕ್ಕಿದ್ದು ಕಮಿಷನ್ ಹಣ, ತೆಲಂಗಾಣ ಚುನಾವಣೆಗೆ ಕಾಂಗ್ರೆಸ್ ತೆಗೆದಿಟ್ಟ ಹಣ; ಬಿಜೆಪಿ, ಜೆಡಿಎಸ್ ಆರೋಪ
ಬೆಂಗಳೂರಿನ ಗುತ್ತಿಗೆದಾರರೊಬ್ಬರ ಮನೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ 42 ಕೋಟಿ ರುಪಾಯಿಗಳನ್ನು ವಶಕ್ಕೆ ಪಡೆದಿದ್ದು, ಈ ಐಟಿ ದಾಳಿ ಪ್ರಕರಣ ಇದೀಗ ರಾಜಕೀಯ ಪಕ್ಷಗಳ ನಡುವೆ ಜಟಾಪಟಿಗೆ ಕಾರಣವಾಗಿದೆ.

ಶಿವಸೇನೆ, ಮುಸ್ಲಿಂ ಲೀಗ್ ಜೊತೆ ಮೈತ್ರಿ ಮಾಡಿಕೊಂಡಿದ್ದೀರಿ, ನಿಮ್ಮ ಜಾತ್ಯಾತೀತತೆಯನ್ನು ಪ್ರಶ್ನಿಸಿಕೊಳ್ಳಿ: ಕಾಂಗ್ರೆಸ್'ಗೆ ಜೆಡಿಎಸ್ ತಿರುಗೇಟು
ಬಿಜೆಪಿ ಜತೆ ಮೈತ್ರಿ ಮಾಡಿಕೊಂಡರೆ ನಮ್ಮನ್ನು ಕೋಮುವಾದಿ ಎಂದು ಜರೆಯುವ ಕಾಂಗ್ರೆಸ್, ಶಿವಸೇನೆ ಹಾಗೂ ಮುಸ್ಲಿಂ ಲೀಗ್ ಜೊತೆ ಮೈತ್ರಿ ಮಾಡಿಕೊಂಡಿದರ ಕುರಿತು ಏನು ಹೇಳಬೇಕು? ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

ಮೂಲ ಕಾಂಗ್ರೆಸ್ಸಿಗರ ಕುಕ್ಕಿ ತಿನ್ನುತ್ತಿರುವ ರಣಹದ್ದು! ಕುತಂತ್ರ, ಷಡ್ಯಂತ್ರ, ಕ್ಷುದ್ರ ವಿದ್ಯೆಗಳಿಗೆಲ್ಲ ಕೇರಾಫ್ ಅಡ್ರಸ್ಸೇ ಡಿಕೆಶಿ; ಖರ್ಗೆಯನ್ನು ದೆಹಲಿಗೆ ಅಟ್ಟಿದ್ಯಾರು?
'ಕೈ’ ಅಭಯದ ಸಂಕೇತವೆಂದು ನಂಬಿದ್ದರು ಕುಮಾರಸ್ವಾಮಿ. ಆದರೆ, ಡಿ.ಕೆ.ಶಿವಕುಮಾರ್ ಅವರದ್ದು ‘ಕೈ’ ಎತ್ತುವುದಷ್ಟೇ ಅಲ್ಲ, ‘ಕೈ’ ಕೊಡುವುದರಲ್ಲೂ ಎತ್ತಿದ ‘ಕೈ’ ಎಂದು ಅವರಿಗೆ ಗೊತ್ತಾಗಲೇ ಇಲ್ಲ. ಅಸೆಂಬ್ಲಿಯಲ್ಲಿ ‘ಕೈ’ ಎತ್ತಿದರು, ಮಂಡ್ಯದಲ್ಲೂ ‘ಕೈ’ ಎತ್ತಿದರು.

ಬಿಜೆಪಿ-ಜೆಡಿಎಸ್ ಮೈತ್ರಿ: ಸೀಟು ಹಂಚಿಕೆ ಇನ್ನೂ ನಿರ್ಧಾರವಾಗಿಲ್ಲ- ಹೆಚ್ ಡಿ ದೇವೇಗೌಡ
ಸೀಟು ಹಂಚಿಕೆ ಕುರಿತು ಬಿಜೆಪಿ ಜೊತೆಗೆ ಇನ್ನೂ ಯಾವುದೇ ಮಾತುಕತೆಗಳು ನಡೆಸಿಲ್ಲ. ದಸರಾ ಕಳೆದ ಬಳಿಕ ಚರ್ಚೆ ನಡೆಯಲಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್'ಡಿ.ದೇವೇಗೌಡ ಅವರು ಸೋಮವಾರ ಹೇಳಿದರು.

ಕಿತ್ತೂರು ಕರ್ನಾಟಕದ ಕಡೆ ಜೆಡಿಎಸ್ ನಡೆ: ಅಕ್ಟೋಬರ್ 11 ರಿಂದ ಮೂರು ದಿನಗಳ ಸಭೆ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ಅಕ್ಟೋಬರ್ 11 ರಿಂದ ಮೂರು ದಿನಗಳ ಕಾರ್ಯಕ್ರಮ ನಡೆಸುವುದಾಗಿ ಜೆಡಿಎಸ್ ನಾಯಕರು ತಿಳಿಸಿದ್ದಾರೆ.

ಸರ್ಕಾರ ಪತನವಾಗಲಿದೆ, ಡಿಕೆಎಸ್ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತ: ಹೆಚ್ ಡಿ ಕುಮಾರಸ್ವಾಮಿ
ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ.

ಎನ್ಡಿಎ ಸೇರುವ ನಿರ್ಧಾರ ತಿರಸ್ಕರಿಸಿದ ಜೆಡಿಎಸ್ನ ಕೇರಳ ಘಟಕ, ರಾಜ್ಯದಲ್ಲಿ ಎಡರಂಗದೊಂದಿಗೆ ಮುಂದುವರಿಕೆ
ಎನ್ಡಿಎ ಸೇರುವ ಪಕ್ಷದ ನಾಯಕತ್ವದ ನಿರ್ಧಾರವನ್ನು ಜೆಡಿಎಸ್ನ ಕೇರಳ ಘಟಕ ಶನಿವಾರ ತಿರಸ್ಕರಿಸಿದ್ದು, ರಾಜ್ಯದಲ್ಲಿ ಎಡರಂಗದೊಂದಿಗೆ ದೃಢವಾಗಿ ನಿಲ್ಲುವುದಾಗಿ ಹೇಳಿದೆ.

