JDS

ಭ್ರಮನಿರಸನಗೊಂಡಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಹತಾಶರಾಗಿದ್ದಾರೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು 'ಹತಾಶ'ರಾಗಿದ್ದಾರೆ ಎಂದು ಬಣ್ಣಿಸಿದ್ದಾರೆ.

ಕುಮಾರಸ್ವಾಮಿ ನನ್ನ ಸಹೋದರನಿದ್ದಂತೆ ಆದರೆ, ಅಮಿತ್ ಶಾ ಭೇಟಿಯಾಗಿದ್ದು ನೋವು ತಂದಿದೆ: ಸಿಎಂ ಇಬ್ರಾಹಿಂ
ಹೆಚ್'ಡಿ.ಕುಮಾರಸ್ವಾಮಿ ಅವರು ನನಗೆ ಕಿರಿಯ ಸಹೋದರರಿದ್ದಂತೆ. ಆದರೆ, ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು ನೋವು ನನಗೆ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಶನಿವಾರ ಹೇಳಿದ್ದಾರೆ.

ನಿತೀಶ್, ಮಮತಾ, ಸ್ಟಾಲಿನ್, ಮುಫ್ತಿ, ಠಾಕ್ರೆ, ವೈಕೋ, ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಮರೆತಿರಾ ಛದ್ಮವೇಷಧಾರಿ?
ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ. ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು.

ಕರ್ನಾಟಕ ಬಂದ್: ಬಂಧಿತರನ್ನು ಬಿಡುಗಡೆ ಮಾಡಿ; ಈ ಒಗ್ಗಟ್ಟು ನೆರೆ ರಾಜ್ಯಕ್ಕೆ ಎಚ್ಚರಿಕೆ ಗಂಟೆಯಾಗಬೇಕು- ಎಚ್‌ಡಿ ಕುಮಾರಸ್ವಾಮಿ
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ನಡೆಸುತ್ತಿರುವ ಕರ್ನಾಟಕ ಬಂದ್ ವೇಳೆ ಬಂಧಿತರಾಗಿರುವ ವಿವಿಧ ಸಂಘಟನೆಗಳ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಶುಕ್ರವಾರ ಒತ್ತಾಯಿಸಿದ್ದಾರೆ.

ವಿಧಾನಸಭೆ ಚುನಾವಣೆ: ಅಲ್ಪಸಂಖ್ಯಾತರಿಂದ ತಿರಸ್ಕೃತಗೊಂಡಿದ್ದೇ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಗೆ ಕಾರಣ!
ಮುಸ್ಲಿಂ ಸಮುದಾಯದ ವಿಶ್ವಾಸವನ್ನು ಮರಳಿ ಪಡೆಯಲು ಸಾಧ್ಯವಾಗದ ಸ್ಥಿತಿಗೆ ತಲುಪಿರುವ ಕಾರಣ ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದೆ.

ಬಿಜೆಪಿ ಜೊತೆಗಿನ ಮೈತ್ರಿ: ಅತ್ತ ಪುಲಿ, ಇತ್ತ ದರಿ; ಮುಂದಿನ ದಾರಿ ಯಾವುದಯ್ಯ ಜೆಡಿಎಸ್ ಗೆ?
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದು, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಜೆಡಿಎಸ್ ವರಿಷ್ಠರು ಕಳೆದ ಕೆಲವು ದಿನಗಳಿಂದ ಮುಸ್ಲಿಂ ಮುಖಂಡರಿಗೆ ಕರೆ ಮಾಡಿ ಪಕ್ಷ ತೊರೆಯದಂತೆ ಮನವಿ ಮಾಡುತ್ತಿದ್ದಾರೆ.

ಮೈತ್ರಿಯಿಂದಾಗಿ ಜೆಡಿಎಸ್, ಬಿಜೆಪಿ ನಾಯಕರು ಕಾಂಗ್ರೆಸ್'ನತ್ತ ಮುಖ ಮಾಡುತ್ತಿದ್ದಾರೆ: ಡಿಕೆ.ಶಿವಕುಮಾರ್
ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ತಪ್ಪು ಸಂದೇಶವನ್ನು ಜೆಡಿಎಸ್-ಬಿಜೆಪಿ ಮೈತ್ರಿಕೂಟ ರವಾನಿಸಿದೆ' ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದರು.

ಬಿಜೆಪಿ-ಜೆಡಿಎಸ್ ಮೈತ್ರಿ, ಸೀಟು ಹಂಚಿಕೆ ಕುರಿತು ಪ್ರಧಾನಿ ಮೋದಿಯೊಂದಿಗೆ ಮಾತನಾಡಿಲ್ಲ: ಹೆಚ್'ಡಿ.ದೇವೇಗೌಡ
2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಹಾಗೂ ಸೀಟು ಹಂಚಿಕೆ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ ಇನ್ನೂ ಮಾತನಾಡಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಬುಧವಾರ ಸ್ಪಷ್ಟಪಡಿಸಿದ್ದಾರೆ.

ಮೈತ್ರಿ ಸಂಬಂಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಜೊತೆ ಚರ್ಚಿಸಲಾಗಿದೆ: ಎಚ್.ಡಿ. ಕುಮಾರಸ್ವಾಮಿ
ಬಿಜೆಪಿ ಜೊತೆಗಿನ ಪಕ್ಷದ ಮೈತ್ರಿಯ ಹಿಂದಿನ ಉದ್ಧೇಶವನ್ನು ಮುಸ್ಲಿಂ ಮುಖಂಡರು ಅರ್ಥ ಮಾಡಿಕೊಳ್ಳಬೇಕು ಎಂದು ವಿನಂತಿಸಿರುವ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ, ಮೈತ್ರಿ ಕುರಿತಾದ ಎಲ್ಲಾ ವಿಚಾರಗಳನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

