JDS

ಕಾಂಗ್ರೆಸ್ ಗೆ ನಮ್ಮ ಅಗತ್ಯವಿಲ್ಲ; ಬಿಜೆಪಿ ಜೊತೆ ಜೆಡಿಎಸ್ ವಿಲೀನ ಇಲ್ಲ; ಕೇಂದ್ರದಲ್ಲಿ ಸಚಿವ ಸ್ಥಾನ ಕೇಳಿಲ್ಲ: ಎಚ್.ಡಿಕೆ
ಹಿರಿಯ ನಾಯಕ ಎಚ್ಡಿ ಕುಮಾರಸ್ವಾಮಿ ಅವರಿಗೆ ಶಾಸಕರು ಸಂಪೂರ್ಣ ಅಧಿಕಾರ ನೀಡಿ, ಪಕ್ಷವನ್ನು ಉಳಿಸಲು ನೀವು ಏನು ಮಾಡುತ್ತೀರೋ ಅದನ್ನು ಮಾಡಿ ಎಂದು ಹೇಳಿದ್ದಾರೆ. 19 ಶಾಸಕರು ಮತ್ತು 7 ಎಂಎಲ್ಸಿಗಳು ಯಾವುದೇ ಆಕ್ಷೇಪಣೆಯಿಲ್ಲದೆ ಕುಮಾರಸ್ವಾಮಿಗೆ ಅಧಿಕಾರ ನೀಡಿದ್ದಾರೆ.

ಬಿಎಂಐಸಿ ಯೋಜನೆ ಅಕ್ರಮಗಳ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ
ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ (ಬಿಎಂಐಸಿ) ಯೋಜನೆ ಹಾಗೂ ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ ಪ್ರೈಸ್ (ಎನ್ಐಸಿಇ) ವಿರುದ್ಧ ಜಂಟಿ ಹೋರಾಟ ಮಾಡುವುದಾಗಿ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಘೋಷಿಸಿವೆ.

ಬಿಜೆಪಿ ಸಖ್ಯಕ್ಕೆ ಜೆಡಿಎಸ್ 'ಒಡೆದ ಮನೆ': ಮೈತ್ರಿಗೆ ಎಚ್.ಡಿ ರೇವಣ್ಣ ವಿರೋಧ; ಎತ್ತು ಏರಿಗೆ, ಕೋಣ ನೀರಿಗೆ!
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಹಲವು ಜೆಡಿಎಸ್ ಶಾಸಕರು ವಿರೋಧ ವ್ಯಕ್ತ ಪಡಿಸಿದ್ದಾರೆ ಎನ್ನಲಾಗಿದೆ. ಇದರಿಂದ ಜೆಡಿಎಸ್ ಉನ್ನತ ನಾಯಕರು ಗೊಂದಲಕ್ಕೊಳಗಾಗಿದ್ದಾರೆ.

ಬಿಜೆಪಿ, ಜೆಡಿಎಸ್, ಒಟ್ಟಾಗಿ ಕೆಲಸ ಮಾಡುವ ನಿರ್ಧಾರ: ಜಂಟಿ ಸುದ್ದಿಗೋಷ್ಠಿಯಲ್ಲಿ ಎಚ್ ಡಿಕೆ, ಬೊಮ್ಮಾಯಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಕೆಲಸ ಮಾಡುವ ನಿರ್ಧಾರ ಮಾಡಿವೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ...

ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್.. ನಾಗವಲ್ಲಿಯ ತರ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಕುರಿತ ಮಾತುಗಳು ಹಲವು ದಿನಗಳಿಂದ ಓಡಾಡುತ್ತಿವೆ. ಕಳೆದ ಬಾರಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ಈ ಬಾರಿ ಬಿಜೆಪಿಯೊಂದಿಗೆ ಸ್ನೇಹ ಬೆಳೆಸಲಿದೆ ಎನ್ನಲಾಗುತ್ತಿದೆ.

'INDIA' ಸಮಾವೇಶದಲ್ಲಿ ಸರ್ಕಾರಿ ಅಧಿಕಾರಿಗಳ ಭಾಗವಹಿಸುವಿಕೆ: ಸರ್ಕಾರದ ವಿವರಣೆ ಕೇಳಲು ಬಿಜೆಪಿ-ಜೆಡಿಎಸ್ ರಾಜ್ಯಪಾಲರಿಗೆ ಒತ್ತಾಯ
ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಮಾವೇಶದಲ್ಲಿ ಭಾಗವಹಿಸಲು ಬಂದಿದ್ದ ರಾಜಕೀಯ ನಾಯಕರನ್ನು ಸ್ವಾಗತ ಮಾಡಲು ಕೆಲವು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿರುವ ರಾಜ್ಯ ಸರ್ಕಾರದ ನಿರ್ಧಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಕೇಳುವಂತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ನಿನ್ನೆ ಗುರುವಾರ ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪವನ್ನು ಬಹಿ

ಎನ್ಡಿಎನೂ ಇಲ್ಲ, ಯುಪಿಎನೂ ಇಲ್ಲ, ಸ್ವತಂತ್ರವಾಗಿ ಹೋರಾಡಿ ಪ್ರಾದೇಶಿಕ ಪಕ್ಷ ಉಳಿಸುತ್ತೇವೆ: ಹೆಚ್ ಡಿ ದೇವೇಗೌಡ
2023ರ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್, 2024ರ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿವೆ, ಇದಕ್ಕೆ ವೇದಿಕೆ ಸಿದ್ಧವಾಗುತ್ತಿದ್ದು ದೇವೇಗೌಡರು ಮತ್ತು ಬಿಜೆಪಿ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂಬ ಊಹಾಪೋಹ ಇಷ್ಟು ದಿನ ಕೇಳಿಬರುತ್ತಿತ್ತು.

ನಮ್ಮ ಪಕ್ಷದ ವರಿಷ್ಠರು ಮತ್ತು ದೇವೇಗೌಡರ ಮಧ್ಯೆ ಮಾತುಕತೆ ನಡೆಯುತ್ತಿದೆ; ಜು.18ರ ನಂತರ ವಿರೋಧ ಪಕ್ಷ ನಾಯಕನ ಆಯ್ಕೆ: ಬೊಮ್ಮಾಯಿ
ಕರ್ನಾಟಕ ರಾಜಕೀಯ ಅಂಗಳದಲ್ಲಿ ಈಗ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಬಹಳ ಚರ್ಚೆಯಾಗುತ್ತಿದೆ. ನಾಡಿದ್ದು ಜುಲೈ 18ರಂದು ದೆಹಲಿಯಲ್ಲಿ ಎನ್ ಡಿಎ ಸಭೆಯಿದ್ದು ಅದಕ್ಕೆ ಮುನ್ನ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೋಗಿ ಬಿಜೆಪಿ ವರಿಷ್ಠರ ಜೊತೆ ಮಾತುಕತೆ ನಡೆಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಕಮಲ-ದಳ ಮೈತ್ರಿ ಲೆಕ್ಕಾಚಾರ; ಶೀಘ್ರದಲ್ಲೇ ದೆಹಲಿಗೆ ಕುಮಾರಸ್ವಾಮಿ, ಎನ್ಡಿಎ ಸಭೆಯಲ್ಲಿ ಭಾಗಿಯಾಗ್ತಾರಾ?
ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಜೆಡಿಎಸ್ ಸಂಭಾವ್ಯ ಮೈತ್ರಿಯ ಸುಳಿವು ಬಿಟ್ಟುಕೊಟ್ಟಿದ್ದು, ಅವರು ಶೀಘ್ರದಲ್ಲೇ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಲಿದ್ದಾರೆ ಮತ್ತು ಈ ನಿಟ್ಟಿನಲ್ಲಿ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸುತ್ತಿದ್ದಾರೆ ಎಂದು ರಾಜಕೀಯ ವಲಯದಿಂದ ಸುದ್ದಿ ಕೇಳಿಬರುತ್ತಿದೆ.

