ದೇಶಯಾವಾಗಲೂ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಆತಂಕ ಬೇಡ: ಕೇಂದ್ರ ಆರೋಗ್ಯ ಸಚಿವಾಲಯ ಜಂಟಿ ಕಾರ್ಯದರ್ಶಿ
ಮಾರಣಾಂತಿಕ ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಯಾವಾಗಲೂ ಮಾಸ್ಕ್ ಧರಿಸುವ ಅಗತ್ಯವಿಲ್ಲ, ಸಮಾಜದಿಂದ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಮಾಸ್ಕ್ ಹಾಕಿಕೊಳ್ಳುವ ಅಗತ್ಯತೆ ಇಲ್ಲ. ಈ ಬಗ್ಗೆ ಸಾರ್ವಜನಿಕರು ಆತಂಕಪಡಬೇಕಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲಾವ್ ಅಗರ್ ವಾಲ್ ತಿಳಿಸಿದ್ದಾರೆ.