kalaburagi

ನಿಜಾಮುದ್ದೀನ್ ಮರ್ಕಜ್ ಮಸೀದಿಗೆ ತೆರಳಿದ್ದ ಕಲಬುರಗಿಯ 26 ಮಂದಿಯಲ್ಲಿ ಕೊರೋನಾ ವೈರಸ್ ಸೋಂಕಿಲ್ಲ: ಜಿಲ್ಲಾಧಿಕಾರಿ ಶರತ್
ಇತ್ತೀಚೆಗೆ ದೆಹಲಿಯ ನಿಜಾಮುದ್ದೀನ್‍ನಲ್ಲಿ ಜರುಗಿದ ತಬ್ಲೀಗ್ ಜಮಾತ್ ನ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಜಿಲ್ಲೆಗೆ ಮರಳಿದ್ದ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಹೇಳಿದ್ದಾರೆ.

ಕಲಬುರಗಿ: ಲಾಕ್‌ಡೌನ್ ನಿಂದ ಹಣ್ಣು ಮಾರಾಟ ಮಾಡಲಾಗದೆ ರೈತ ಆತ್ಮಹತ್ಯೆ
ಕೊರೊನಾ ಸೋಂಕು ತಡೆಗಟ್ಟಲು ದೇಶವನ್ನೇ ಲಾಕ್ ಡೌನ್ ಮಾಡಿದ ಹಿನ್ನೆಲೆಯಲ್ಲಿ ಹಣ್ಣು ಸರಬರಾಜು ಮಾಡಲಾಗದೆ ರೈತನೋರ್ವ ಆತ್ಮಹತ್ಯೆ ಗೆ ಶರಣಾಗಿದ್ದಾರೆ.

ಕಲಬುರಗಿ: ನಿರ್ಬಂಧದ ನಡುವೆಯೂ ಹೊರಬಂದ ಯುವಕರಿಗೆ ಖಾಕಿ ಪಾಠ, ವಿಡಿಯೋ ವೈರಲ್!
ದೇಶವನ್ನೇ ಲಾಕ್ ಡೌನ್ ಮಾಡಿದ್ದರೂ ಇದನ್ನು ಪಾಲಿಸದೆ ಹೊರಬಂದವರಿಗೆ ಕರ್ನಾಟಕ ಪೊಲೀಸರು ರಸ್ತೆ ಗುಡಿಸುವ ಶಿಕ್ಷೆ ನೀಡಿದ್ದಾರೆ.

ಕಲಬುರಗಿ: ಮಾಸ್ಕ್ ,ಸ್ಯಾನಿಟೈಸರ್ ಗಳು ಅಧಿಕ ಬೆಲೆಗೆ ಮಾರಾಟ ಮಾಡುವಂತಿಲ್ಲ; ಜಿಲ್ಲಾಧಿಕಾರಿ ಎಚ್ಚರಿಕೆ
ಕೊರೋನಾ ಸೊಂಕಿನಿಂದ ಪಾರಾಗಲು ಜನರು ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳ ಮೊರೆ ಹೋಗುತ್ತಿದ್ದು, ಔಷಧಿ ವ್ಯಾಪಾರಿಗಳು ಮತ್ತು ಮಾರಾಟಗಾರರು ಯಾವುದೇ ಕಾರಣಕ್ಕೂ ನಿಗದಿತ ಎಂ.ಆರ್.ಪಿ.ಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಬಾರದು ಎಂದು ಜಿಲ್ಲಾಧಿಕಾರಿ ಶರತ್ ಬಿ. ಆದೇಶಿಸಿದ್ದಾರೆ.

ಕೊರೋನಾ ವೈರಸ್: ಬಯೋಮೆಟ್ರಿಕ್ ಬದಲು ಮೊಬೈಲ್ ಓ.ಟಿ.ಪಿ ಮೂಲಕ ಪಡಿತರ ವಿತರಣೆ
ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರ ಬಯೋ ಮೆಟ್ರಿಕ್ ಬದಲು ಮೊಬೈಲ್ ಓಟಿಪಿ ಆಧಾರದ ಮೇಲೆ ಪಡಿತರ ವಿತರಿಸಲು ತೀರ್ಮಾನಿಸಲಾಗಿದೆ.

ಕಲಬುರಗಿಯಲ್ಲಿ ಮತ್ತೆ ಮೂರು ದಿನ 144 ನಿಷೇಧಾಜ್ಞೆ: ಜಿಲ್ಲಾಧಿಕಾರಿ ಶರತ್. ಬಿ
ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕಿಗೆ ವೃದ್ಧರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಇದೇ ತಿಂಗಳ 19ರಂದು ರಾತ್ರಿಯಿಂದ ಭಾನುವಾರ ರಾತ್ರಿ 8ಗಂಟೆವರೆಗೆ ಒಟ್ಟು ಮೂರು ದಿನಗಳ ಕಾಲ 144 ನಿಷೇಧಾಜ್ಞೆ ಹೇರಲಾಗಿತ್ತು ಎಂದು ಹೇಳಿದ್ದಾರೆ.

ಹೊರದೇಶದಿಂದ ಬಂದು ಮಾಹಿತಿ ನೀಡದಿದ್ದರೆ ಕಾನೂನು ಕ್ರಮ: ಡಿಸಿ ಶರತ್
ಎಲ್ಲೆಡೆ ಕೊರೊನಾ ಭೀತಿ ಹೆಚ್ಚಾದ ಹಿನ್ನೆಲೆಯಲ್ಲಿ ಹೊರದೇಶದಿಂದ ಬಂದವರು ತಪಾಸಣೆಗೆ ಒಳಪಡದೆ ಮನೆಯಲ್ಲಿ ಗೌಪ್ಯವಾಗಿದ್ದರೇ, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಶರತ್.ಬಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಸೋಂಕಿತ ವೈದ್ಯ ಸಾವು ವದಂತಿ: ಸ್ಪಷ್ಟನೆ ನೀಡಿದ ಕಲಬುರಗಿ ವೈದ್ಯ; ಸಂಪರ್ಕದಲ್ಲಿದ್ದವರ ಮೇಲೆ ತೀವ್ರ ನಿಗಾ!
ಕಲಬುರಗಿಯಲ್ಲಿ ಕೊರೋನಾದಿಂದ ಮೃತ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯ ಸಾವನ್ನಪ್ಪಿದ್ದಾನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವದಂತಿಯೊಂದು ಹರಿದಾಡುತ್ತಿದೆ.

ಕಲಬುರಗಿ: ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಸೋಂಕು
ಬಿಸಿಲು ನಗರಿ ಕಲಬುರಗಿಯಲ್ಲಿ ಕೊರೊನಾ ವೈರಸ್ ಗೆ ತುತ್ತಾಗಿದ್ದ ವೃದ್ಧನಿಗೆ ಚಿಕಿತ್ಸೆ ನೀಡಿದ್ದ ವೈದ್ಯನಿಗೂ ಸೋಂಕು ಹತ್ತಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

