karnataka govt

ಅನ್ನಭಾಗ್ಯ: ಬಿಪಿಎಲ್ ಫಲಾನುಭವಿಗಳಿಗೆ ಹಣ ವರ್ಗಾವಣೆಗೆ ಸರ್ಕಾರ ಆದೇಶ, ಜೂನ್ ತಿಂಗಳ ಅಕ್ಕಿ ಪಡೆಯದವರಿಗಿಲ್ಲ ಹಣ!!
‘ಅನ್ನ ಭಾಗ್ಯ’ ಯೋಜನೆಯಡಿ ಹೆಚ್ಚುವರಿ ಐದು ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆಗೆ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.

ಪಿಎಸ್ಐ ಮರುಪರೀಕ್ಷೆ: ಆಯ್ಕೆಯಾದ ಅಭ್ಯರ್ಥಿಗಳಿಗೆ ವಿಶೇಷ ಪರೀಕ್ಷೆ ಅಸಾಧ್ಯ; ಹೈಕೋರ್ಟ್ಗೆ ರಾಜ್ಯ ಸರ್ಕಾರ ವಿವರಣೆ
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿ ಅಕ್ರಮದಲ್ಲಿ (PSI Recruitment Scam) ಭಾಗಿಯಾರುವ 35 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ವಿಶೇಷ ಪರೀಕ್ಷೆ ನಡೆಸಲು ಸಾಧ್ಯವಿಲ್ಲವೆಂದು ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ ತಿಳಿಸಿದೆ.

ಕರಾವಳಿಯಲ್ಲಿ ವರುಣಾರ್ಭಟ: ಉಡುಪಿಯಲ್ಲಿ 2 ಸಾವು, ಬೋಟ್ ಮಗುಚಿ ಕೊಚ್ಚಿ ಹೋಗುತ್ತಿದ್ದ ಯುವಕನ ಸಿನಿಮೀಯ ರಕ್ಷಣೆ
ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಬುಧವಾರವೂ ಮುಂದುವರೆದಿದ್ದು, ಒಂದೇ ದಿನ ಉಡುಪಿಯಲ್ಲಿ 2 ಮಳೆ ಸಂಬಂಧಿತ ಸಾವುಗಳು ದಾಖಲಾಗಿವೆ.

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್
ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ಕರ್ನಾಟಕ ಸರ್ಕಾರ, ಜಿವಿಕೆ ಇಎಂಆರ್ ಐ ನಡುವಿನ ತಿಕ್ಕಾಟ: ಆಂಬ್ಯುಲೆನ್ಸ್ ಸೇವೆಗೆ ಸಂಕಟ
ರಾಜ್ಯ ಸರ್ಕಾರ ಮತ್ತು ಸೇವಾ ಪೂರೈಕೆದಾರರಾದ ಜಿವಿಕೆ ಇಎಂಆರ್ಐ ನಡುವಿನ ಭಿನ್ನಾಭಿಪ್ರಾಯದಿಂದಾಗಿ ‘108’ ಆಂಬ್ಯುಲೆನ್ಸ್ ಸೇವೆಗಳ ಮೇಲೆ ಪರಿಣಾಮ ಬೀರಿದೆ.

ಶಕ್ತಿ ಯೋಜನೆ ಎಫೆಕ್ಟ್?: 5 ಗಂಟೆಯಿಂದ ಕೇವಲ 40 ರೂ ಸಂಪಾದನೆ, ಪ್ರಯಾಣಿಕರಿಲ್ಲದೇ ಕಣ್ಣೀರು ಹಾಕಿದ ಆಟೋ ಚಾಲಕ!; ವಿಡಿಯೋ ವೈರಲ್
ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹಿಳೆಯ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ಆರಂಭವಾದ ಬಳಿಕ ಆಟೋದಲ್ಲಿ ಪ್ರಯಾಣಿಸುವವರ ಸಂಖ್ಯೆ ಕುಸಿತವಾಗಿದೆ ಎಂದು ಆರೋಪಿಸಿ ಆಟೋ ಚಾಲಕರೊಬ್ಬರು ಕಣ್ಣೀರು ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ.

ಕೇರಳದಲ್ಲಿ ಸದ್ಯಕ್ಕಿಲ್ಲ ನಂದಿನಿ ಮಳಿಗೆ; ವಿಸ್ತರಣೆ ಯೋಜನೆ ಸ್ಥಗಿತಗೊಳಿಸಿದ ಕರ್ನಾಟಕ ಸರ್ಕಾರ!
ಕೇರಳದಲ್ಲಿ ನಂದಿನಿ (Nandini Milk) ಹಾಲಿನ ಡೈರಿಯ ವಿಸ್ತರಣೆ ಮಾಡುವ ಕೆಎಂಎಫ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ವಿಸ್ತರಣೆ ಯೋಜನೆ ಸ್ಥಗಿತಗೊಳಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯ; ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಶೀಘ್ರದಲ್ಲೆ: ರಾಮಲಿಂಗಾ ರೆಡ್ಡಿ
ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ 'ಸ್ಮಾರ್ಟ್ ಕಾರ್ಡ್' ಕಡ್ಡಾಯವಾಗಲಿದ್ದು, ಶೀಘ್ರ ಕಾರ್ಡ್ ವಿತರಣೆಗೆ ಹೊಸ ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಮಂಗಳವಾರ ಹೇಳಿದ್ದಾರೆ.

ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

