karnataka govt

ಕೊನೆಗೂ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಸರ್ಕಾರ ಆದೇಶ
ಕೊನೆಗೂ ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿದೆ. ನಿವೃತ್ತ ಐಎಎಸ್ ಅಧಿಕಾರಿ ಪಿ ಎಸ್ ವಸ್ತ್ರದ್ ಅವರನ್ನ ಮುರುಘಾಮಠದ ಆಡಳಿತಾಧಿಕಾರಿ ನೇಮಕ ಮಾಡಿ ಮಂಗಳವಾರ ಆದೇಶ...

ಚಂದಾಪುರ ಕೆರೆ ರಕ್ಷಿಸಲು ವಿಫಲ: 500 ಕೋಟಿ ರೂ. ದಂಡ ಆದೇಶ ಮಾರ್ಪಾಡು ಕೋರಿದ್ದ ಸರ್ಕಾರದ ಮನವಿ ವಜಾಗೊಳಿಸಿದ ಎನ್‌ಜಿಟಿ
ಬೆಂಗಳೂರಿನ ಚಂದಾಪುರ ಕೆರೆ ಸಂರಕ್ಷಿಸಲು ವಿಫಲವಾದ ಕಾರಣಕ್ಕೆ 500 ಕೋಟಿ ರೂ ದಂಡ ವಿಧಿಸಿರುವ ಆದೇಶ ಮಾರ್ಪಾಡು ಮಾಡುವಂತೆ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯು (ಎನ್‌ಜಿಟಿ) ವಜಾ ಮಾಡಿದೆ.

ಓಲಾ-ಉಬರ್ ವಿವಾದ: ಸರ್ಕಾರದ ಹೊಸ ದರಪಟ್ಟಿಗೂ ವಿರೋಧ, ಮುಂದುವರೆದ ಗೊಂದಲ!
ಅಗ್ರಿಗೇಟರ್ ಆಧಾರಿತ ಆಟೋರಿಕ್ಷಾ ಸೇವೆಗೆ ಇತ್ತೀಚೆಗೆ ರಾಜ್ಯ ಸರ್ಕಾರ ವಿಧಿಸಿದ್ದ ನೂತನ ದರ ಪಟ್ಟಿಗೂ ಓಲಾ-ಉಬರ್ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿದ್ದು ಮತ್ತೆ ಗೊಂದಲ ಮುಂದುವರೆಯುವಂತಾಗಿದೆ.

ರಾಜ್ಯ ಸರ್ಕಾರದಿಂದ 2023ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟ
ರಾಜ್ಯ ಸರ್ಕಾರ 2023ನೇ ಸಾಲಿಗೆ ಮಂಜೂರು ಮಾಡಿರುವ ಸಾರ್ವತ್ರಿಕ ರಜಾದಿನಗಳ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ನಾಡ ದೇವಿ ಭುವನೇಶ್ವರಿ ತಾಯಿಯ ಪ್ರಮಾಣಿತ ಹಾಗೂ ಅಧಿಕೃತ ಚಿತ್ರ ಜಾರಿಗೆ ಸರ್ಕಾರದ ಸಮಿತಿ ಶಿಫಾರಸು!
ನಾಡ ದೇವಿ ಭುವನೇಶ್ವರಿ ಪ್ರಮಾಣಿತ ಹಾಗೂ ಅಧಿಕೃತ ಚಿತ್ರವನ್ನು ಜಾರಿಗೆ ತರುವಂತೆ ಸಮಿತಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಗೆ ಶಿಫಾರಸು ಸಲ್ಲಿಸಿದೆ.

ಬದುಕು ಕಸಿದ ಕೋವಿಡ್; ಸಾಂಕ್ರಾಮಿಕ ನಂತರದ ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಲ ಕಾರ್ಮಿಕ ಪ್ರಕರಣಗಳು!
ಕೋವಿಡ್ ಸಾಂಕ್ರಾಮಿಕ ಕರ್ನಾಟಕದಲ್ಲಿ ಬಾಲ ಕಾರ್ಮಿಕ ಪ್ರಕರಣಗಳಲ್ಲಿ ಹೆಚ್ಚಳ ಉಂಟು ಮಾಡಿದ್ದು, ಕರ್ನಾಟಕದ ಸಾವಿರಾರು ಮಕ್ಕಳು ಮುಖ್ಯವಾಹಿನಿಯಿಂದ ಹೊರಗುಳಿದಿದ್ದಾರೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಓಲಾ, ಉಬರ್ ಆಟೋರಿಕ್ಷಾ ಸೇವೆ: ದರ ಹೆಚ್ಚಳ ಕೋರಿಕೆಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಆ್ಯಪ್ ಮೂಲಕ ನೀಡಲಾಗುತ್ತಿರುವ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ಸಲ್ಲಿಸಿರುವ ಮಧ್ಯಪ್ರವೇಶ ಮನವಿಗೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಬುಧವಾರ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದ್ದು, ಮಧ್ಯಂತರ ತಡೆಯಾಜ್ಞೆ ಮುಂದುವರಿಸಿದೆ.

4 ವರ್ಷಗಳ ನಂತರವೂ ಕೊಡಗನ್ನು ಬಿಟ್ಟೂ ಬಿಡದೆ ಕಾಡುತ್ತಿದೆ ಭೂ ಕುಸಿತ ಭೂತ!!
2018ರಲ್ಲಿ ಮಡಿಕೇರಿಯಲ್ಲಿ ಸಂಭವಿಸಿದ್ದ ಭೂಕುಸಿತ ದುರಂತ 4 ವರ್ಷಗಳ ಬಳಿಕವೂ ಸ್ಥಳೀಯರನ್ನು ಇನ್ನೂ ಕಾಡುತ್ತಿದ್ದು, ಇಂದಿಗೂ ಭೂಕುಸಿತ ಆತಂಕ ಸ್ಥಳೀಯರಲ್ಲಿ ಮನೆ ಮಾಡಿದೆ.

ಎಸ್ ಸಿ, ಎಸ್ ಟಿ ಮೀಸಲಾತಿ ಹೆಚ್ಚಳ: ಇಂದಿನಿಂದಲೇ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ
ಕನ್ನಡ ರಾಜ್ಯೋತ್ಸವ ದಿನದಿಂದಲೇ ಅನ್ವಯವಾಗುವಂತೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಗೆ ಶೇ. 17 ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ. 7 ರಷ್ಟು ಮೀಸಲಾತಿ ಹೆಚ್ಚಳ ಮಾಡಿ ಅಧಿಸೂಚನೆ ಹೊರಡಿಸಿದೆ.

