karnataka police

ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯವೇಳೆ ಮಣ್ಣು ಕುಸಿದು ಕಾರ್ಮಿಕ ಸಾವು
ಕಟ್ಟಡ ನಿರ್ಮಾಣ ಕಾರ್ಯವೇಳೆ ಮಣ್ಣು ಕುಸಿದು ಕಾರ್ಮಿಕನೋರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ: ಸಿಬ್ಬಂದಿಗೆ ಬೆದರಿಕೆ; ಪುನೀತ್ ಕೆರೆಹಳ್ಳಿ ವಿರುದ್ಧ FIR
ಕ್ರಿಸ್ ಮಸ್ ಹಿನ್ನಲೆಯಲ್ಲಿ ಮಾಲ್ ನಲ್ಲಿ ಕ್ರಿಸ್ ಮಸ್ ಟ್ರೀ ಹಾಕಿದ ಕಾರಣಕ್ಕೆ ಸಿಬ್ಬಂದಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಹಿಂದೂಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಪ್ರೇಮಿಗಳು ಪರಾರಿ: ಯುವತಿಯ ಕಡೆಯವರಿಂದ ಯುವಕನ ತಂದೆಗೆ ಥಳಿತ, ನಡುರಸ್ತೆಯಲ್ಲಿ ಹೈಡ್ರಾಮಾ
ಪ್ರೇಮಿಗಳಿಬ್ಬರು ಮನೆ ಬಿಟ್ಟು ಪರಾರಿಯಾದ್ದರಿಂದ ಆಕ್ರೋಶಗೊಂಡ ಯುವತಿ ಕಡೆಯವರು ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕನ ತಂದೆ ಮೇಲೆ ಹಲ್ಲೆ ಮಾಡಿರುವ ಧಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಗರ್ಭಪಾತ ಮಾಡಿಸಿಕೊಳ್ಳುವಂತೆ ಪ್ರೇಮಿಯಿಂದ ಒತ್ತಾಯ; ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಸಂತ್ರಸ್ತೆ!
ತನ್ನ ಸಂಗಾತಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸಿದ ಆರೋಪದ ಮೇಲೆ ಪ್ರೇಮಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಈ ಕುರಿತು ಸಂತ್ರಸ್ತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಸಿಎಂ, ಉಪಮುಖ್ಯಮಂತ್ರಿ, ಹಾಸನ ಜಿಲ್ಲಾ ಪೊಲೀಸ್, ಬೆಂಗಳೂರು ಪೊಲೀಸ್ ಕಮಿಷನರ್‌ರನ್ನು ಟ್ಯಾಗ್ ಮಾಡಿದ್ದಾರೆ.

ಉಡುಪಿ: ಸಮಾಜ ಸೇವಕ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ ದಂಪತಿ ಶವವಾಗಿ ಪತ್ತೆ, ಆತ್ಮಹತ್ಯೆ ಶಂಕೆ
ಸಮಾಜ ಸೇವಕ, ರಾಜಕೀಯ ಮುಖಂಡ, ನಾಟಕಕಾರ ಕಾಪು ಲೀಲಾಧರ ಶೆಟ್ಟಿ (68) ಮತ್ತು ಅವರ ಪತ್ನಿ ವಸುಂಧರಾ ಶೆಟ್ಟಿ (59) ದಂಪತಿ ಶವವಾಗಿ ಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗುತ್ತಿದೆ.

ಮೈಸೂರು: ಜೀತ ಮಾಡುತ್ತಿದ್ದ ನೇಪಾಳ ಮೂಲದ ಮಹಿಳೆ, ಇಬ್ಬರು ಮಕ್ಕಳ ರಕ್ಷಣೆ
ಕರ್ನಾಟಕದಲ್ಲಿ ಜೀತಪದ್ದತಿ ಆರೋಪವೊಂದು ಕೇಳಿಬಂದಿದ್ದು, ಜಮೀನೊಂದರಲ್ಲಿ ಬಲವಂತವಾಗಿ ಕೂಲಿಗಳಾಗಿ ದುಡಿಯುತ್ತಿದ್ದ ನೇಪಾಳ ಮೂಲದ ಮಹಿಳೆ ಮತ್ತು ಇಬ್ಬರು ಮಕ್ಕಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.

ನೆಲಮಂಗಲ ATM ಗೆ ಕನ್ನ; ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆಯುವ ವೇಳೆ ಅಪಾರ ಪ್ರಮಾಣದ ಹಣ ಸುಟ್ಟು ಕರಕಲು!
ಎಟಿಎಂಗೆ ಕನ್ನ ಹಾಕಿದ್ದ ಕದೀಮರು ಎಟಿಎಂ ತೆರೆಯಲು ಗ್ಯಾಸ್ ಕಟರ್ ಬಳಸಿದ ಪರಿಣಾಮ ಅದರ ಬೆಂಕಿಗೆ ಎಟಿಎಂ ಮಶೀನ್ ನಲ್ಲಿದ್ದ ಅಪಾರ ಪ್ರಮಾಣದ ಹಣ ಸುಟ್ಟು ಕರಕಲಾಗಿದೆ.

ವಂಚನೆ ಪ್ರಕರಣ: ಬಿಟಿವಿ ವಾಹಿನಿ ಎಂಡಿ ಕುಮಾರ್‌ಗೆ 14 ದಿನ ನ್ಯಾಯಾಂಗ ಬಂಧನ
ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಕುಮಾರ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಧಾರವಾಡ: ಸ್ಥಳ ಮಹಜರು ವೇಳೆ ಪೊಲೀಸರ ಮೇಲೆ ಹಲ್ಲೆ; ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ ಬಂಧನ
ಕೊಲೆ ಯತ್ನ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಸತೀಶ ಗೋನಾ ವ್ಯಕ್ತಿಯೊಬ್ಬರ ಕೊಲೆಗೆ ಸಂಚು ರೂಪಿಸಿ ಶನಿವಾರ ಕೈಯಲ್ಲಿ ತಲವಾರು ಹಿಡಿದು ಹುಬ್ಬಳ್ಳಿ-ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ಕಾಯುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪಟ್ಟಣ ಠಾಣೆ ಇನ್‌ಸ್ಪೆಕ್ಟರ್ ರಫೀಕ್ ತಹಶೀಲ್ದಾರ್ ನೇತೃತ್ವದ ಪೊಲೀಸ್ ತಂಡ ಆತನನ್ನು ಸಿನಿಮೀಯ ಶೈಲಿಯಲ್ಲಿ ಬಂಧಿಸಿತ್ತು.

