karnataka police

ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್‌ಗಳನ್ನು ಗುರಿಯಾಗಿಸಿಕೊಂಡು ಹಣ ಸುಲಿಗೆಗೆ ಸಂಚು ರೂಪಿಸಿದ್ದ ಗ್ಯಾಂಗ್ ಬಂಧನ
ಕಲಬುರಗಿಯಲ್ಲಿ ಸ್ತ್ರೀರೋಗ ತಜ್ಞರೊಬ್ಬರ ಕೊಲೆ ಯತ್ನ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಮಂಗಳವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯದ ಸ್ತ್ರೀರೋಗ ತಜ್ಞರು, ಫೈನಾನ್ಶಿಯರ್‌ಗಳನ್ನು ಗುರಿಯಾಗಿಸಿಕೊಂಡು ಅವರಿಂದ ಭಾರಿ ಹಣ ಸುಲಿಗೆಗೆ ಸಂಚು ರೂಪಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಖಾಸಗಿ ಗನ್ ಮ್ಯಾನ್ ಬಂಧನ
ಸಹೋದ್ಯೋಗಿ ಮೇಲೆ ಗುಂಡು ಹಾರಿಸಿದ ಆರೋಪದ ಮೇರೆಗೆ ಖಾಸಗಿ ಗನ್ ಮ್ಯಾನ್ ಒಬ್ಬರನ್ನು ಬೆಂಗಳೂರು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಟಿಕ್ ಟಾಕ್ ಸ್ಟಾರ್ ಕೊಲೆಗೆ ಬಿಗ್ ಟ್ವಿಸ್ಟ್: ಕರ್ನಾಟಕ ಪೊಲೀಸರಿಂದ 8 ಮಂದಿ ವಶಕ್ಕೆ
ಬೆಂಗಳೂರು ಮೂಲದ ಟಿಕ್ ಟಾಕ್ ಸ್ಟಾರ್ ನವೀನ್ ಅಪಹರಣ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ದೊರೆತಿದ್ದು, ಈ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.

ಮಂಗಳೂರು: ಚಲಿಸುತ್ತಿದ್ದ ಬಸ್ ನಿಂದ ಬಿದ್ದು 23 ವರ್ಷದ ಕಂಡಕ್ಟರ್ ಸಾವು
ಕಂಡಕ್ಟರ್ ವೊಬ್ಬರು ಚಲಿಸುತ್ತಿದ್ದ ಬಸ್ ನಿಂದ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಯುವ ವಿಜ್ಞಾನಿಯ ಅಟ್ಟಾಡಿಸಿ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು, FIR ದಾಖಲು
ಯುವ ವಿಜ್ಞಾನಿಯೊಬ್ಬರ ಮೇಲೆ ಬೆಂಗಳೂರಿನಲ್ಲಿ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಕರ್ನಾಟಕ ಪೊಲೀಸರು!
ತೆಲಂಗಾಣದ ಕಾಂಗ್ರೆಸ್ ನಾಯಕನ ವಿರುದ್ಧ ಕರ್ನಾಟಕ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕುಂಭಂ ಶಿವಕುಮಾರ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರೆಡ್ಡಿ ಅವರು ತೆಲಂಗಾಣದ ನಾರಾಯಣಪೇಟೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿದ್ದ ಅತ್ಯಾಚಾರ ಆರೋಪಿ 24 ಗಂಟೆಗಳಲ್ಲೇ ಬಂಧನ
ಜೈಲಿನಿಂದ ತಪ್ಪಿಸಿಕೊಳ್ಳಲು 40 ಅಡಿ ಬೃಹತ್ ಗೋಡೆ ಹಾರಿ ಪರಾರಿಯಾಗಿದ್ದ ಪೋಕ್ಸೋ ಪ್ರಕರಣದ ಆರೋಪಿಯೊಬ್ಬನನ್ನು ಕೇವಲ 24 ಗಂಟೆಗಳ ಅಂತರದಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಹಿಂಸಾತ್ಮಕ ಪ್ರಕರಣಗಳಲ್ಲಿ ಇಳಿಕೆ, ಸೈಬರ್-ಆರ್ಥಿಕ ಕ್ರೈಂಗಳಲ್ಲಿ ಹೆಚ್ಚಳ: ಡಿಜಿ-ಐಜಿಪಿ ಅಲೋಕ್ ಮೋಹನ್ (ಸಂದರ್ಶನ)
ಅಪರಾಧವನ್ನು ತಡೆಗಟ್ಟಲು ಮತ್ತು ಇಲಾಖೆಯನ್ನು ನಾಗರಿಕ ಕೇಂದ್ರಿತಗೊಳಿಸಲು ಪೊಲೀಸ್ ಇಲಾಖೆ ಕೈಗೊಂಡ ಕ್ರಮಗಳ ಬಗ್ಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮಾತನಾಡಿದ್ದಾರೆ. ಅವರ ಜೊತೆ ನಡೆಸಿದ ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ.

ಬೆಳಗಾವಿ: ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜ ಹಾರಿಸುವ ಪ್ರಯತ್ನವನ್ನು ತಡೆದ ಪೊಲೀಸರು
ಬೆಳಗಾವಿ ಜಿಲ್ಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ತ್ರಿವರ್ಣ ಧ್ವಜದ ಜೊತೆಗೆ ಕೇಸರಿ ಧ್ವಜವನ್ನೂ ಹಾರಿಸುವ ಪ್ರಯತ್ನವನ್ನು ಪೊಲೀಸರು ಮಂಗಳವಾರ ತಡೆದಿದ್ದಾರೆ.

