karnataka police

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಕೇರಳದಲ್ಲಿ ಮೂರು ಪ್ರಮುಖ ಆರೋಪಿಗಳ ಬಂಧನ: ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆಗೆ PFI ನಂಟು?: ಕೆಲವರಿಂದ ಆರೋಪಿಗಳ ರಕ್ಷಣೆ; ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ: ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ
ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂದಿಸಿದ ಆರೋಪಿಗಳನ್ನು ಕೆಲವರು ರಕ್ಷಣೆ ಮಾಡುತ್ತಿದ್ದು, ಆರೋಪಿಗಳಿಗೆ ನೆರವಾದವರ ಆಸ್ತಿ ಮುಟ್ಟುಗೋಲಿಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಎಡಿಜಿಪಿ ಆಲೋಕ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕಬಾಬ್ ರುಚಿಯಾಗಿಲ್ಲ ಎಂದು ಪತ್ನಿಗೆ ಚಾಕು ಇರಿದು ನೇಣು ಬಿಗಿದುಕೊಂಡ 'ಪತಿ ಮಹಾಶಯ'
ಪತ್ನಿ ಮಾಡಿದ ಕಬಾಬ್ ರುಚಿಯಾಗಿಲ್ಲ ಎಂದು ಆರೋಪಿಸಿ 'ಪತಿ ಮಹಾಶಯ'ನೊಬ್ಬ ಆಕೆಗೆ ಚಾಕು ಇರಿದು ತಾನೂ ಕೂಡ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮಂಗಳೂರು ಹತ್ಯೆ: ಮೃತ ಮಸೂದ್, ಫಾಜಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ ಆರ್ಥಿಕ ನೆರವು ಘೋಷಣೆ: ಮುಸ್ಲಿಂ ಸಮಿತಿ
ಇತ್ತೀಚೆಗಷ್ಟೇ ಹತ್ಯೆಗೀಡಾದ ಬಿ ಮಸೂದ್ ಮತ್ತು ಮೊಹಮ್ಮದ್ ಫಾಜಿಲ್ ಅವರ ಕುಟುಂಬಕ್ಕೆ ತಲಾ 30 ಲಕ್ಷ ರೂಪಾಯಿ ಪರಿಹಾರವನ್ನು ಅವಳಿ ಜಿಲ್ಲೆಗಳ ಎಲ್ಲಾ ಮುಸ್ಲಿಂ ವೇದಿಕೆಗಳ ಸಂಘಟನೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಂ ಕೇಂದ್ರ ಸಮಿತಿ ಶನಿವಾರ ಘೋಷಿಸಿದೆ.

21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧ: ಎಡಿಜಿಪಿ ಅಲೋಕ್ ಕುಮಾರ್ ಸೂಚನೆ
21 ವರ್ಷದೊಳಗಿನ 'ಅಪ್ರಾಪ್ತ'ರಿಗೆ ಬಾರ್-ಪಬ್ ಪ್ರವೇಶ ನಿಷೇಧಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಸೂಚನೆ ಹೊರಡಿಸಿದ್ದಾರೆ.

ಭರ್ಜರಿ ಬೇಟೆ: ನೀರಿನ ಸಂಪ್ ನಲ್ಲಿ ಬಚ್ಚಿಟ್ಟಿದ್ದ 2.68 ಕೋಟಿ ರೂ. ಮೌಲ್ಯದ 1693 ಕೆ.ಜಿ ರಕ್ತ ಚಂದನ ವಶಕ್ಕೆ, ಓರ್ವ ಆರೋಪಿ ಬಂಧನ
ಫಾರ್ಮ್ ಹೌಸ್ ನ ನೀರಿನ ಸಂಪ್ ನಲ್ಲಿ ಶೇಖರಿಸಿಡಲಾಗಿದ್ದ ಸುಮಾರು 2.68 ಕೋಟಿ ರೂ ಮೌಲ್ಯದ ಸಾವಿರಾರು ಕೆಜಿ ರಕ್ತಚಂದನ ತುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಭೀಕರ ವಿಡಿಯೋ: ದೇವಸ್ಥಾನದ ರಸ್ತೆ ಮೇಲೆ ಮಲಗಿದ್ದವರ ಮೇಲೆ ಹರಿದ ಗೂಡ್ಸ್ ಗಾಡಿ; ಓರ್ವ ಸ್ಥಳದಲ್ಲೇ ಸಾವು, ಹಲವರಿಗೆ ಗಾಯ
ದೇವಸ್ಥಾನದ ರಸ್ತೆ ಮೇಲೆ ಮಲಗಿದ್ದವರ ಮೇಲೆ ಗೂಡ್ಸ್ ಗಾಡಿಯೊಂದು ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರಿಗೆ ಗಾಯವಾಗಿವೆ.

ಕಲಬುರಗಿ: ಸ್ಥಳ ಮಹಜರು ವೇಳೆ ಲೇಡಿ PSI ಗೆ ಗುಂಡೇಟು; ಕೊಲೆ ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು
ಕೊಲೆ ಪ್ರಕರಣದ ಆರೋಪಿಯನ್ನು ಸ್ಥಳ ಮಹಜರಿಗೆ ಕರೆತಂದಿದ್ದ ವೇಳೆ ಆತ ಅಧಿಕಾರಿ ಮೇಲೆಯೇ ಗುಂಡು ಹಾರಿಸಿ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಅತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಸಲಿಂಗಕಾಮಿ ಸಂಗಾತಿಯ ಸಾವು: ಲ್ಯಾಬ್ ಟೆಕ್ನೀಷಿಯನ್ ಬಂಧನ
ಸಲಿಂಗಕಾಮಿ ಸಂಗಾತಿಯ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಲ್ಯಾಬ್ ಟೆಕ್ನೀಷಿಯನ್ ನನ್ನು ಬಂಧಿಸಲಾಗಿದೆ.

