Kashmir

ಕಾಂಗ್ರೆಸ್ ಲಡಾಕ್ ನ್ನು ಸಂಪೂರ್ಣ ಕಡೆಗಣಿಸಿದ್ದರಿಂದ ಚೀನಾ ಡೆಮ್ಚೋಕ್ ನ್ನು ಆಕ್ರಮಣ ಮಾಡಿತು: ಬಿಜೆಪಿ ಸಂಸದ ನಮ್ಗ್ಯಾಲ್
ಸಂಸತ್ತಿನ ನೂತನ ಯುವ ಸದಸ್ಯ ಲಡಾಕ್ ನ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಇತ್ತೀಚೆಗೆ ಭಾರೀ ಸುದ್ದಿಯಾಗಿದ್ದರು.

ಕಾಶ್ಮೀರ ಪರಿಸ್ಥಿತಿ: 'ನಿಮ್ಮ ಸಹವಾಸ ಬೇಡ' ಇಮ್ರಾನ್ ಖಾನ್ಗೆ ಟ್ರಂಪ್ ಖಡಕ್ ಎಚ್ಚರಿಕೆ
ಕಾಶ್ಮೀರದ ಬಿಗುವಿನ ಪರಿಸ್ಥಿತಿ ತಿಳಿಗೊಳಿಸಲು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿಯೇ ಪ್ರಯತ್ನ ನಡೆಸಬೇಕು, ಮೂರನೆಯವರಿಗೆ ಜಾಗವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ;ದಾಳಿಯಲ್ಲಿ ಲ್ಯಾನ್ಸ್ ನಾಯಕ್ ಸಂದೀಪ್ ಥಾಪಾ ಹುತಾತ್ಮ
ಪಾಕಿಸ್ತಾನ ಸೇನೆ ಮತ್ತೊಮ್ಮೆ ಕದನ ವಿರಾಮ ಉಲ್ಲಂಘಿಸಿದ್ದು ಇದಕ್ಕೆ ಭಾರತೀಯ ಸೇನಾ ಯೋಧರು ನಡೆಸಿದ ಪ್ರತಿದಾಳಿ ಸಂದರ್ಭದಲ್ಲಿ ಉಂಟಾದ ಗುಂಡಿನ ಚಕಮಕಿಯಲ್ಲಿ ಲ್ಯಾನ್ಸೆ ನಾಯಕ್ ಸಂದೀಪ್ ತಾಪಾ ಹುತಾತ್ಮರಾಗಿದ್ದಾರೆ.

ಕಾಶ್ಮೀರದಲ್ಲಿ ನಿರ್ಬಂಧಗಳು ಮುಂದುವರಿಕೆ, ಬಂಧನ ಪರಿಶೀಲನೆ: ಮುಖ್ಯ ಕಾರ್ಯದರ್ಶಿ
ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಕಣಿವೆಯಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳು ಮುಂದುವರೆಯಲಿವೆ ಎಂದು ಕಾಶ್ಮೀರ ಮುಖ್ಯ ಕಾರ್ಯದರ್ಶಿ...

ಮುಂದಿನ ವಾರದಿಂದ ಕಾಶ್ಮೀರದಲ್ಲಿ ಶಾಲೆಗಳು ಪುನರ್ ಆರಂಭ- ಅಧಿಕಾರಿಗಳ ಹೇಳಿಕೆ
ಮುಂದಿನ ವಾರದಿಂದ ಶಾಲೆಗಳು ಪುನರ್ ಆರಂಭವಾಗಲಿವೆ ಎಂದು ಜಮ್ಮು- ಕಾಶ್ಮೀರ ಮುಖ್ಯ ಕಾರ್ಯದರ್ಶಿ ಬಿ. ವಿ. ಆರ್. ಸುಬ್ರಮಣ್ಯಂ ತಿಳಿಸಿದ್ದಾರೆ.

ಕಾಶ್ಮೀರ ವಿಮೋಚನಾ ಹೋರಾಟ ಹತ್ತಿಕ್ಕುವ ಮೋದಿ ಸರ್ಕಾರದ ಫ್ಯಾಸಿಸ್ಟ್ ತಂತ್ರ ವಿಫಲವಾಗಲಿದೆ: ಇಮ್ರಾನ್ ಖಾನ್
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ ಮತ್ತೊಮ್ಮೆ ಹರಿಹಾಯ್ದಿರುವ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವಾದ ಸಂವಿಧಾನ ವಿಧಿ 370ನ್ನು ತೆಗೆದುಹಾಕಿರುವುದು ಉಗ್ರಗಾಮಿ ಕ್ರಮ ಎಂದು ಆರೋಪಿಸಿದ್ದಾರೆ.

ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಶುಕ್ರವಾರ ಕಾಶ್ಮೀರ ಕುರಿತು ರಹಸ್ಯ ಸಭೆ
ಭಾರತ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದಕ್ಕೆ ಸಂಬಂಧಿಸಿದಂತೆ ಶುಕ್ರವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಯಲಿದೆ ಎಂದು ಗುರುವಾರ ಮಾಧ್ಯಮಗಳು ವರದಿ ಮಾಡಿವೆ.

ಕಾಶ್ಮೀರ ಜನತೆಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು: ಕೇಂದ್ರಕ್ಕೆ ದೇವೇಗೌಡ ಆಗ್ರಹ
ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸಂವಿಧಾನ 370ನೇ ವಿಧಿಯಡಿ ಕಲ್ಪಿಸಲಾಗಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ನಿಷ್ಕ್ರಿಯಗೊಳಿಸಿರುವುದರಿಂದ ರಾಜ್ಯದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಬಿಕ್ಕಟ್ಟು ಉಂಟಾಗಿದೆ.

ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು: ಗಡಿ ನಿಯಂತ್ರಣ ರೇಖೆ ಸಂಬಂಧ ಪರಿಣಾಮ ಬೀರದು: ಜೈಶಂಕರ್
ವಿಧಿ 370 ರದ್ದು ಭಾರತದ ಆಂತರಿಕ ವಿಚಾರವಾಗಿದ್ದು, ಗಡಿ ನಿಯಂತ್ರಣ ರೇಖೆ ಸಂಬಂಧ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಜೈಶಂಕರ್ ಹೇಳಿದ್ದಾರೆ.

