ರಾಜ್ಯಬೆಂಗಳೂರಿಗೆ ದೆಹಲಿ ದುಸ್ಥಿತಿ ಎದುರಾಗುವುದು ಬೇಡ: ವಿದ್ಯುತ್ ಚಾಲಿತ ವಾಹನಗಳಿಗೆ ಮಾತ್ರ ಅನುಮತಿ ನೀಡಿ; ಗುಂಡೂರಾವ್ ಮನವಿ
ಪರಿಸರದ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಮಿತಿಗೊಳಿಸುವ ನಿಟ್ಟಿನಲ್ಲಿ ವಾಯು ಮಾಲಿನ್ಯವನ್ನು ನಿಯಂತ್ರಿಸಲು ನಮ್ಮ ತಲೆಮಾರು ಕ್ರಮ ಕೈಗೊಳ್ಳಲೇಬೇಕಿದ್ದು, ಸರ್ಕಾರ ಈ ಬಗ್ಗೆ ಉತ್ತರದಾಯಿತ್ವವನ್ನು ಕೂಡ ಹೊಂದಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಸಾರಿಗೆಯ ಬಳಕೆಯನ್ನು ಹೆಚ್ಚಿಸುವುದು ಅತ್ಯಗತ್ಯವಾಗಿರುತ್ತದೆ.