Kumaraswamy

2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್ ಒಳಗಿನ ನಾಯಕರೇ ತಡೆದಿದ್ದರು: ಹೆಚ್.ಡಿ.ಕುಮಾರಸ್ವಾಮಿ
2018ರಲ್ಲಿ ಖರ್ಗೆ ಮುಖ್ಯಮಂತ್ರಿಯಾಗುವುದನ್ನು ಕಾಂಗ್ರೆಸ್'ನ ಒಳಗಿನ ನಾಯಕರೇ ತಡೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದಾರೆ.

'ವರ್ಷ ಪೂರೈಸುತ್ತಿರೋ ರಾಜ್ಯ ಬಿಜೆಪಿ ಸರ್ಕಾರಕ್ಕೆ ಕಣ್ಣು, ಕಿವಿಗಳೇ ಇಲ್ಲ': ಅಂಗೈ ಹುಣ್ಣಿಗೆ ಕನ್ನಡಿ ಬೇಕೆ?
ಸವಾಲುಗಳ ವರ್ಷ, ಪರಿಹಾರದ ಸ್ಪರ್ಶ ಎಂಬ ಬೀಜ ಮಂತ್ರ ಪಠಿಸುತ್ತಿರುವ ಬಿಜೆಪಿ ಸರ್ಕಾರದ ಬಡವರ ವಿರೋಧಿ ನೀತಿಗೆ ಪಿಂಚಣಿ ಹಣಕ್ಕಾಗಿ ಕಳೆದ 5 ತಿಂಗಳಿಂದ ಫಲಾನುಭವಿಗಳೂ ಅಲೆದಾಡುತ್ತಿರುವುದೇ ಸಾಕ್ಷಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

'ಹೌದು ಬ್ರದರ್ ಕೊರೋನಾ ಬಂದಿದ್ದಳು, ನೋಡಿದೆ ಎನ್ನುತ್ತಿದ್ದರು ಕುಮಾರಸ್ವಾಮಿ'
ರಾಜ್ಯದಲ್ಲಿ ಈ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೋವಿಡ್ ಕಾಲದಲ್ಲಿ 50,000 ಜನ ಸಾವನ್ನಪ್ಪಿರುತ್ತಿದ್ದರು. ಏಕೆಂದರೆ ಸಮನ್ವಯವಿಲ್ಲದ ಸಮ್ಮಿಶ್ರ ಸರ್ಕಾರವಿರುತ್ತಿತ್ತು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದ್ದಾರೆ.

ಮುಂಬೈನಿಂದ ಬಂದ 7000 ಜನರನ್ನೇಕೆ ಕ್ವಾರಂಟೈನ್ ಮಾಡಲಿಲ್ಲ: ಮಂಡ್ಯ ಜಿಲ್ಲಾಧಿಕಾರಿಗಳ ವಿರುದ್ಧ ಹೆಚ್'ಡಿಕೆ ಕಿಡಿ
ಮುಂಬೈನಿಂದ ಸುಮಾರು 7000 ಮಂದಿ ಮಂಡ್ಯ ಜಿಲ್ಲೆಗೆ ಹಿಂದುರುಗಿದ್ದು, ಅವರನ್ನೆಲ್ಲಾ ಜಿಲ್ಲಾಡಳಿತ ಸರಿಯಾಗಿ ಕ್ವಾರಂಟೈನ್ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಆರೋಪಿಸಿದ್ದಾರೆ.

ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿರುವುದರ ಹಿಂದೆ ಎಡಿಜಿಪಿ ಕೈವಾಡ: ಕುಮಾರಸ್ವಾಮಿ
ಪಾದರಾಯನಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿರುವುದರ ಹಿಂದೆ ಎಡಿಜಿಪಿಯೊಬ್ಬರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ-ರೇವತಿ ವಿವಾಹ: ಕುಮಾರಸ್ವಾಮಿ ವಿರುದ್ಧ ಹರಿಹಾಯ್ದ ರವೀನಾ!ಕಾರಣ ಏನು ಗೊತ್ತಾ?
ಲಾಕ್ ಡೌನ್ ಮಧ್ಯೆಯೂ ತನ್ನ ಮಗ ನಿಖಿಲ್ ಕುಮಾರಸ್ವಾಮಿ ವಿವಾಹವನ್ನು ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಬಾಲಿವುಡ್ ನಟಿ ರವೀನಾ ಟಂಡನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ

ಕೊನೆಗೂ ಈಡೇರಲಿಲ್ಲ ಮಾಜಿ ಸಿಎಂ ಎಚ್.ಡಿ ಕೆ ಕನಸು: ನಿಖಿಲ್ ಮದುವೆ ಪ್ಲಾನ್ ಚೇಂಜ್!
ಕೊರೋನಾ ವೈರಸ್ ಎಫೆಕ್ಟ್ ಕೇವಲ ಜನಸಾಮಾನ್ಯರಿಗೆ ಮಾತ್ರ ಆಗುತ್ತಿಲ್ಲ, ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಅವರ ಕುಟುಂಬಕ್ಕೆ ಕೊರೋನಾ ಭಾರೀ ತೊಂದರೆ ಉಂಟು ಮಾಡುತ್ತಿದೆ. ಕೊರೋನಾದಿಂದಾಗಿ ನಿಖಿಲ್ ವಿವಾಹ ಸರಳವಾಗಿ ನೆರವೇರಿಸಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಭದ್ರತೆ ವಾಪಸ್!
ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಪೈಲಟ್ ವಾಹನ ಸೇವೆಯನ್ನು ರಾಜ್ಯ ಸರ್ಕಾರ ವಾಪಸ್ ಪಡೆದುಕೊಂಡಿದ್ದು, ಕೇವಲ ಎಸ್ಕಾರ್ಟ್ ಮಾತ್ರ ಮುಂದುವರಿಸಿದೆ.

ರೈತರ ಸಾಲ ಮನ್ನಾ ಯೋಜನೆಗೆ ತಿಲಾಂಜಲಿ: ಕುಮಾರಸ್ವಾಮಿ ಆರೋಪಕ್ಕೆ ಯಡಿಯೂರಪ್ಪ ಸ್ಪಷ್ಟನೆ
ರೈತರ ಸಾಲ ಮನ್ನಾ' ಯೋಜನೆಗೆ ತಿಲಾಂಜಲಿ ಇಡಲು ಬಿಜೆಪಿ ಸರ್ಕಾರ ಅಡ್ಡ ದಾರಿ ತುಳಿಯುತ್ತಿರುವುದು ಖಂಡನೀಯ. ರೈತರ ಬಾಳಿಗೆ ರಾಜ್ಯ ಬಿಜೆಪಿ ಸರ್ಕಾರ ಕೊಳ್ಳಿ ಇಡಲು ಮುಂದಾಗಿದೆ. ದಾಖಲೆಗಳ ನೆಪವೊಡ್ಡಿ ಸಾಲ ಮನ್ನಾ ಯೋಜನೆಯಿಂದ ಒಂದು ಲಕ್ಷಕ್ಕೂ ಹೆಚ್ಚು ರೈತರನ್ನು ಕೈ ಬಿಡುವ ಮೂಲಕ ಬಿಜೆಪಿ ಸರ್ಕಾರ ರೈತರಿಗೆ ದೋಖಾ ಮಾಡುತ್ತಿದೆ.

