• Tag results for land

ನಾಳೆಯಿಂದ ಎರಡನೇ ಟೆಸ್ಟ್: ಗೆಲುವಿನ ಒತ್ತಡದಲ್ಲಿ ಟೀಂ ಇಂಡಿಯಾ

ಮೊದಲ ಪಂದ್ಯದಲ್ಲಿ 10 ವಿಕೆಟ್‌ಗಳ ಹೀನಾಯ ಸೋಲು ಅನುಭವಿಸಿದ್ದ ಭಾರತ ತಂಡ ನಾಳೆ ನ್ಯೂಜಿಲೆಂಡ್ ವಿರುದ್ಧ ಎರಡನೇ ಹಾಗೂ ಅಂತಿಮ ಹಣಾಹಣಿಯಲ್ಲಿ ಸೆಣಸಲು ಸಜ್ಜಾಗಿದೆ.  ಈಗಾಗಲೇ 0-1 ಹಿನ್ನಡೆ ಅನುಭವಿಸಿರುವ ಕೊಹ್ಲಿ ಪಡೆ ನಾಳೆಯಿಂದ ಆರಂಭವಾಗುವ ಪಂದ್ಯದಲ್ಲಿ ಗೆದ್ದು ಸರಣಿ ಡ್ರಾ ಮಾಡಿಕೊಳ್ಳುವ ಒತ್ತಡಕ್ಕೆ ಸಿಲುಕಿದೆ.

published on : 28th February 2020

ಆರ್. ಅಶ್ವಿನ್ ಬ್ಯಾಟಿಂಗ್ ಸುಧಾರಣೆಯಾಗಬೇಕು- ರವಿಶಾಸ್ತ್ರಿ

ನ್ಯೂಜಿಲೆಂಡ್ ವಿರುದ್ಧ ನಾಳೆ ನಡೆಯುವ ಎರಡನೇ ಟೆಸ್ಟ್ ಪಂದ್ಯಕ್ಕೆ ಭಾರತ ಸಿದ್ದವಾಗುತ್ತಿದೆ. ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿಅವರು ರವಿಚಂದ್ರನ್ ಅಶ್ವಿನ್ ಅವರು ಬ್ಯಾಟಿಂಗ್ ನಲ್ಲಿ ಸುಧಾರಣೆ ಕಂಡುಕೊಳ್ಳಬೇಕು ಎಂದು ಹೇಳಿದ್ದಾರೆ.

published on : 28th February 2020

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದು: ಜಗದೀಶ್ ಶೆಟ್ಟರ್ 

ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 109ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಇದರಿಂದ ಯೋಜನೆಯೊಂದಕ್ಕೆ ಒಪ್ಪಿಗೆ ಸಿಗಲು ಈಗಿರುವ 60 ದಿನಗಳಿಂದ 30 ದಿನಗಳಿಗೆ ಇಳಿಕೆಯಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

published on : 28th February 2020

2ನೇ ಟೆಸ್ಟ್: ದಾಖಲೆ ಸನಿಹದಲ್ಲಿ ಮಯಾಂಕ್ ಅಗರ್ವಾಲ್

ಭಾರತದ ಉದಯೋನ್ಮಖ ಆಟಗಾರ ಮಯಾಂಕ್ ಅಗರ್ವಾಲ್ ದಾಖಲೆಯ ಸನಿಹದಲ್ಲಿದ್ದು, ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಮಯಾಂಕ್ ಈ ದಾಖಲೆ ಬರೆಯುವ ಸಾಧ್ಯತೆ ಇದೆ.

published on : 28th February 2020

ಮತ್ತೊಂದು ದಾಖಲೆಯ ಸನಿಹದಲ್ಲಿ ಇಶಾಂತ್ ಶರ್ಮಾ

ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲು ಕಂಡು ಮುಖಭಂಗ ಅನುಭವಿಸಿದೆ. ಈ ಪಂದ್ಯದಲ್ಲಿ ಸ್ಟಾರ್ ಬೌಲರ್ ಇಶಾಂತ್ ಶರ್ಮಾ ಬಿಗುವಿನ ದಾಳಿ ನಡೆಸಿ ಗಮನ ಸೆಳೆದಿದ್ದರು. ಶನಿವಾರದಿಂದ ಆರಂಭವಾಗುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಶಾಂತ್ ಮತ್ತೊಂದು ಮೈಲುಗಲ್ಲು ತಲುಪುವ ಕನಸಿನಲ್ಲಿದ್ದಾರೆ.

published on : 28th February 2020

ಎರಡನೇ ಪಂದ್ಯದಲ್ಲಿಯೂ ಕೊಹ್ಲಿ ಪಡೆಯನ್ನು ಸುಲಭವಾಗಿ ಬಗ್ಗು ಬಡಿಯುತ್ತೇವೆ: ಲಥಾಮ್

ಪ್ರಸ್ತುತ ಸಾಗುತ್ತಿರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ರನ್ ಮಶೀನ್ ಎಂದೇ ಖ್ಯಾತಿ ಗಳಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಲಯ ಮುಂದುವರಿಸುವಲ್ಲಿ ಎಡವುತ್ತಿದ್ದಾರೆ.

published on : 27th February 2020

ಬ್ಯಾಟಿಂಗ್ ವೈಫಲ್ಯ: ಚೇತೇಶ್ವರ ಪೂಜಾರ ಪರ ಬ್ಯಾಟ್ ಬೀಸಿದ ಉಪ ನಾಯಕ ಅಜಿಂಕ್ಯ ರಹಾನೆ

ನ್ಯೂಜಿಲೆಂಡ್ ವಿರುದ್ಧ ಸೋಲು ಅನುಭವಿಸಿದ್ದ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಮಂಧಗತಿಯ ಬ್ಯಾಟಿಂಗ್ ಮಾಡಿ ಟೀಕೆಗೆ ಗುರಿಯಾಗಿದ್ದ ಚೇತೇಶ್ವರ ಪೂಜಾರ ಅವರನ್ನು ಭಾರತ ತಂಡದ ಉಪ ನಾಯಕ ಅಜಿಂಕ್ಯಾ ರಹಾನೆ ಸಮರ್ಥಿಸಿಕೊಂಡಿದ್ದಾರೆ.

published on : 27th February 2020

ಮಹಿಳೆಯರ ಟಿ20 ವಿಶ್ವಕಪ್ ನಲ್ಲಿ ದಾಖಲೆ ಬರೆದ ಭಾರತದ ಶಫಾಲಿ ವರ್ಮಾ!

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳೆಯರ ಟಿ20 ವಿಶ್ವಕಪ್ ನಲ್ಲಿ ಭಾರತದ ಸ್ಫೋಟಕ ಆಟಗಾರ್ತಿ ಕೇವಲ 16 ವರ್ಷದ ಶಫಾಲಿ ವರ್ಮಾ ದಾಖಲೆ ನಿರ್ಮಾಣ ಮಾಡಿದ್ದಾರೆ.

published on : 27th February 2020

ಮಹಿಳಾ ಟಿ20 ವಿಶ್ವಕಪ್: ನ್ಯೂಜಿಲೆಂಡ್ ಮಣಿಸಿದ ಭಾರತ ಸೆಮಿಫೈನಲ್ ಗೆ ಲಗ್ಗೆ

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭಾರತೀಯ ವನಿತೆಯರ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಇಂದು ನಡೆದ ನ್ಯೂಜಿಲೆಂಡ್ ವಿರುದ್ದ ಪಂದ್ಯದಲ್ಲೂ ಗೆದ್ದ ಭಾರತ ತಂಡ ಸೆಮಿಫೈನಲ್ ಗೆ ಲಗ್ಗೆ ಇಟ್ಟಿದೆ.

published on : 27th February 2020

70 ವರ್ಷದ ಹಳೆಯ ಶಾಲೆ: 3 ವರ್ಷವಾದರೂ ದುರಸ್ತಿ ಕೆಲಸ ಅಪೂರ್ಣ ಭೂದಾನಿಯ ಮಗನಿಂದಲೇ ಅಡ್ಡಿ! 

ಭೂದಾನಿಯ ಮಗ ಬಂದು ಶಾಲೆಯ ಜಮೀನು ಇಲ್ಲಿ ಬರಲ್ಲ ನಿಮ್ಮ ಜಮೀನು ಬೇರೆಡೆಗೆ ಬರುತ್ತೆ ಎಂದು ಶಾಲೆಯ ದುರಸ್ತಿ ಕಾಮಗಾರಿಯನ್ನು ಸ್ಥಗಿತಗೊಳಿಸಿದ್ದಾರೆ ಪರಿಣಾಮ ಮಕ್ಕಳು ಬಿಸಲಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಘಟನೆ ರಾಯಬಾಗ ತಾಲೂಕಿನ ಖೆಮಲಾಪುರ ಗ್ರಾಮದಲ್ಲಿ ನಡೆದಿದೆ.

published on : 25th February 2020

ಐಸಿಸಿ ಮಹಿಳಾ ಟಿ20 ವಿಶ್ವಕಪ್: ಸೋಲಿನ ಸುಳಿಯಲ್ಲಿದ್ದರೂ 'ಮಂಕಡ್ ರನೌಟ್' ಮಾಡದ ಬೌಲರ್, ವಿಡಿಯೋ ವೈರಲ್!

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯವೊಂದರಲ್ಲಿ ತಂಡ ಸೋಲಿನ ಸುಳಿಯಲ್ಲಿದ್ದರೂ ಎದುರಾಳಿ ತಂಡದ ಬ್ಯಾಟ್ಸ್ ಮನ್ ಕ್ರೀಸ್ ಬಿಟ್ಟು ಮುಂದೆ ಹೋಗಿದ್ದರು. ಮಂಕಡ್ ರನೌಟ್ ಮಾಡದೇ ಕ್ರೀಡಾ ಸ್ಪೂರ್ತಿ ಮೆರೆದಿದ್ದು ಟ್ವೀಟರಿಗರು ಆರ್ ಅಶ್ವಿನ್ ರ ಕಾಳೆಯುತ್ತಿದ್ದಾರೆ.

published on : 24th February 2020

ಸ್ಪರ್ಧಾತ್ಮಕ ಕ್ರಿಕೆಟ್ ಆಡುವಲ್ಲಿ ವಿಫಲ: ಕಿವೀಸ್ ವಿರುದ್ಧದ ಸೋಲನ್ನು ಒಪ್ಪಿಕೊಂಡ ವಿರಾಟ್ ಕೊಹ್ಲಿ

ನ್ಯೂಜಿಲೆಂಡ್‌ ವಿರುದ್ಧ 10 ವಿಕೆಟ್‌ಗಳ ಸೋಲು ಅನುಭವಿಸಿದ ಭಾರತ ತಂಡದ ನೀರಸ ಪ್ರದರ್ಶನವನ್ನು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ

published on : 24th February 2020

ನ್ಯೂಜಿಲೆಂಡ್ ಎದುರು ಭಾರತಕ್ಕೆ 10 ವಿಕೆಟ್‌ಗಳ ಹೀನಾಯ ಸೋಲು

ಟಿಮ್ ಸೌಥಿ ಹಾಗೂ ಟ್ರೆಂಟ್ ಬೌಲ್ಟ್ ಅವರ ಮಾರಕ ದಾಳಿಯ ನೆರವಿನಿಂದ ನ್ಯೂಜಿಲೆಂಡ್ ತಂಡ ಮೊದಲನೇ ಟೆಸ್ಟ್‌ ಪಂದ್ಯದಲ್ಲಿ ಭಾರತದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಆ ಮೂಲಕ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಆತಿಥೇಯರು 1-0 ಮುನ್ನಡೆ ಗಳಿಸಿದರು.

published on : 24th February 2020

ನಾಯಕ ವಿರಾಟ್ ಕೊಹ್ಲಿ ಔಟ್ ಮಾಡಲು ರೂಪಿಸಿದ್ದ ಯೋಜನೆ ಬಹಿರಂಗಪಡಿಸಿದ ಟ್ರೆಂಟ್ ಬೌಲ್ಟ್ 

ಭಾನುವಾರ ಬ್ಯಾಟಿಂಗ್ ಹಾಗೂ ಬೌಲಿಂಗ್‌ ಎರಡರಲ್ಲೂ ಟ್ರೆಂಟ್ ಬೌಲ್ಟ್ ತೋರಿದ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಇಲ್ಲಿನ ಬೇಸಿನ್ ರಿವರ್ ಅಂಗಳದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯದ ಮೂರನೇ ದಿನವೂ ಆತಿಥೇಯ ನ್ಯೂಜಿಲೆಂಡ್‌ ಮುನ್ನಡೆ ಸಾಧಿಸಿತು.

published on : 23rd February 2020

ವೆಲ್ಲಿಂಗ್ಟನ್ ಟೆಸ್ಟ್: ಅಗರ್ವಾಲ್ ಅರ್ಧಶತಕದ ಹೊರತಾಗಿಯೂ ಸಂಕಷ್ಟದಲ್ಲಿ ಟೀಂ ಇಂಡಿಯಾ

ಆರಂಭಿಕ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್( 58 ರನ್) ಅವರ ಅರ್ಧಶತಕದ ಹೊರತಾಗಿಯೂ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದ ಮೂರನೇ ದಿನವೂ ನ್ಯೂಜಿಲೆಂಡ್ ವಿರುದ್ಧ ಹಿನ್ನಡೆ ಅನುಭವಿಸಿದೆ.

published on : 23rd February 2020
1 2 3 4 5 6 >