ದೇಶಲಾಕ್ ಡೌನ್ ಮಾಡಿಯೂ ವಿಫಲವಾದ ಏಕೈಕ ದೇಶ ಭಾರತ: ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ಕೊವಿಡ್-19 ಲಾಕ್ ಡೌನ್ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಸಂದರ್ಭದಲ್ಲೇ ಲಾಕ್ ಡೌನ್ ಸಡಿಲಗೊಳಿಸಿದ ಏಕೈಕ ದೇಶ ಭಾರತ ಎಂದು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.