Maharashtra

ಕೋವಿಡ್ ನಿಂದಾಗಿ ಪೋಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕ ಮನ್ನಾ ಮಾಡಿದ ಮಹಾರಾಷ್ಟ್ರ ಸರ್ಕಾರ
ಕೊರೋನಾ ವೈರಸ್ ಸೋಂಕಿನಿಂದ ಪೋಷಕರನ್ನು ಕಳೆದುಕೊಂಡಿರುವ 10 ಮತ್ತು 12ನೇ ತರಗತಿಯ ರಾಜ್ಯ ಪರೀಕ್ಷಾ ಮಂಡಳಿಯ ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕವನ್ನು ಮನ್ನಾ ಮಾಡಲು ಮಹಾರಾಷ್ಟ್ರ ಸರ್ಕಾರ ಗುರುವಾರ ನಿರ್ಧರಿಸಿದೆ.

ದಕ್ಷಿಣ ಆಫ್ರಿಕಾ, ಇತರ ಹೈ-ರಿಸ್ಕ್ ದೇಶಗಳಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ ಆರು ಪ್ರಯಾಣಿಕರಿಗೆ ಕೊರೋನಾ ಪಾಸಿಟಿವ್
ದಕ್ಷಿಣ ಆಫ್ರಿಕಾ ಮತ್ತು ಇತರ ಹೆಚ್ಚು ಅಪಾಯಕಾರಿ ದೇಶಗಳಿಂದ ಮಹಾರಾಷ್ಟ್ರಕ್ಕೆ ಆಗಮಿಸಿದ ಆರು ಪ್ರಯಾಣಿಕರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಅವರ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗಿದೆ...

ಮಹಾ ವಿಕಾಸ್ ಅಘಾಡಿ ಸರ್ಕಾರಕ್ಕೆ 2 ವರ್ಷ: ಸಿಎಂ ಉದ್ಧವ್ ಠಾಕ್ರೆ ಹೇಳಿದ್ದೇನು?
ತಮ್ಮ ಸರ್ಕಾರದ ಈ ಎರಡು ವರ್ಷಗಳ ಅವಧಿಯಲ್ಲಿ ಬಹುತೇಕ ಸಮಯವನ್ನು ಕೋವಿಡ್-19 ನಿರ್ವಹಣೆಯಲ್ಲಿ ತೊಡಗಿದ್ದು ಮಹಾ ವಿಕಾಸ ಅಘಾಡಿ(MVA) ಸಮಸ್ಯೆ ಮತ್ತು ಬಿಕ್ಕಟ್ಟನ್ನು ಅವಕಾಶವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿದೆ ಎಂದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಓಮಿಕ್ರಾನ್ ಆತಂಕ: ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ
ವಿಶ್ವದಾದ್ಯಂತ ಆತಂಕ ಸೃಷ್ಟಿಸುವ ಓಮಿಕ್ರಾನ್ ತಳಿಯ ಕೊರೋನಾ ಸೋಂಕಿನ ಬಗ್ಗೆ ರಾಜ್ಯದಲ್ಲೂ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶನಿವಾರ ಶನಿವಾರ ಮಹತ್ವದ ಸಭೆ ನಡೆಸಲಾಗಿದ್ದು, ಸರ್ಕಾರಿ ಕಚೇರಿ ಸೇರಿ ವಿವಿಧೆಡೆ ಉದ್ಯೋಗಿಗಳಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ.

ಓಮಿಕ್ರಾನ್ ಆತಂಕ: ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ 500 ರೂ. ದಂಡ
ಹೊಸ ಕೊರೋನಾ ವೈರಸ್ ರೂಪಾಂತರವಾದ `ಓಮಿಕ್ರಾನ್' ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಅನುಸರಿಸದಿದ್ದರೆ ದಂಡ ವಿಧಿಸುವುದಾಗಿ ಶನಿವಾರ ಘೋಷಿಸಿದೆ.

ಮಾರ್ಚ್‌ನಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ: ಕೇಂದ್ರ ಸಚಿವ ನಾರಾಯಣ ರಾಣೆ
ಮಹಾರಾಷ್ಟ್ರದಲ್ಲಿ ಅತೀ ಶೀಘ್ರದಲ್ಲೇ ಸರ್ಕಾರ ಬದಲಾಗಲಿದೆ. ಮಾರ್ಚ್ ನಲ್ಲಿ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವ ನಾರಾಯಣ ರಾಣೆ ಅವರು ಗುರುವಾರ ಹೇಳಿದ್ದಾರೆ.

ಮಹಾರಾಷ್ಟ್ರ: ಬಿಟ್‌ಕಾಯಿನ್ ದಂಧೆಯಲ್ಲಿ 10 ಲಕ್ಷ ರೂ. ಕಳೆದುಕೊಂಡು ದರೋಡೆ ಕಥೆ ಕಟ್ಟಿದ ಉದ್ಯಮಿ!
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಉದ್ಯಮಿಯೊಬ್ಬರು ಬಿಟ್‌ಕಾಯಿನ್ ವ್ಯಾಪಾರದಲ್ಲಿ 10 ಲಕ್ಷ ರೂಪಾಯಿ ಕಳೆದುಕೊಂಡ ನಂತರ ತನ್ನ ಹಣವನ್ನು ದರೋಡೆ ಮಾಡಿರುವುದಾಗಿ ಸುಳ್ಳು ಹೇಳಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಗೆ ಬಂಧನದಿಂದ ಬಿಗ್ ರಿಲೀಫ್ ನೀಡಿದ 'ಸುಪ್ರೀಂ'
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಸುಲಿಗೆ ಆರೋಪ ಮಾಡಿದ್ದ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ದಾಖಲಾಗಿರುವ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸೋಮವಾರ ಬಂಧನದಿಂದ ರಕ್ಷಣೆ ನೀಡಿದೆ.

ಶರಣಾಗತ ನಕ್ಸಲ್ ಮಹಿಳೆಯರಿಂದ ಫಿನೈಲ್ ತಯಾರಕ ಘಟಕ ಸ್ಥಾಪನೆ; ಮಹಾರಾಷ್ಟ್ರ ಪೊಲೀಸರ ಸಹಕಾರ
ಕೆಲ ಸಮಯದ ಹಿಂದೆ ಸುಮಾರು 10 ಮಂದಿ ನಕ್ಸಲ್ ಮಹಿಳೆಯರು ಪೊಲೀಸರಿಗೆ ಶರಣಾಗಿದ್ದರು. ಹೊಸ ಬದುಕು ಕಟ್ಟಿಕೊಳ್ಳಲು ಅವರು ತವಕ ವ್ಯಕ್ತಪಡಿಸಿದ್ದರು.

