Maharashtra

ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆ: ಉದ್ಧವ್ ಠಾಕ್ರೆ ನಾಮಪತ್ರ ಸಲ್ಲಿಕೆ
ಮೇ 21 ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.

ಮಹಾರಾಷ್ಟ್ರ: 20 ಸಾವಿರ ದಾಟಿದ ಸೋಂಕಿತರ ಸಂಖ್ಯೆ, 24 ಗಂಟೆಗಳಲ್ಲಿ 48 ಮಂದಿ ಬಲಿ
ಮಹಾರಾಷ್ಟ್ರದಲ್ಲಿ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ನಿನ್ನೆ ಒಂದೇ ದಿನ 1,165 ಹೊಸ ಸೋಂಕು ಪ್ರಕರಣಗಳು ದಾಖಲಾಗುವ ಮೂಲಕ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 20,228ಕ್ಕೆ ಏರಿಕೆಯಾಗಿದೆ.

ಗುಜರಾತ್, ತಮಿಳುನಾಡು, ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ: ದೇಶದಲ್ಲಿ 60,000 ಗಡಿಯತ್ತ ಸೋಂಕಿತರ ಸಂಖ್ಯೆ
ಗುಜರಾತ್, ತಮಿಳುನಾಡು, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳಲ್ಲಿ ಕೊರೋನಾ ಸ್ಫೋಟಗೊಂಡಿದ್ದು, ಒಂದೇ ದಿನದಲ್ಲಿ ದೇಶದಲ್ಲಿ 3320 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರಂತೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 60,000 ಗಡಿಯತ್ತ ಸಾಗಿದೆ.

ಕೊರೋನಾ ಎಫೆಕ್ಟ್: 45 ದಿನಗಳ ಅಜ್ಞಾತವಾಸದ ಬಳಿಕ ಕೊನೆಗೂ ತವರಿಗೆ ಮರಳುತ್ತಿರುವ ಕನ್ನಡಿಗರು
ಕೊರೋನಾ ಲಾಕ್'ಡೌನ್ ನಿಂದಾಗಿ ಕಳದೆದ ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ 45 ದಿನಗಳಿಂದ ಅಜ್ಞಾತವಾಸ ಅನುಭವಿಸಿದ್ದ ಕನ್ನಡಿಗರು ಕೊನೆಗೂ ತವರಿಗೆ ಮರಳುತ್ತಿದ್ದಾರೆ.

ಕೊವಿಡ್-19: ಮಹಾರಾಷ್ಟ್ರದಲ್ಲಿ 1089 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆ
ಮಹಾರಾಷ್ಟ್ರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1089 ಹೊಸ ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19,063ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ: ಮದ್ಯ ಖರೀದಿಗೆ ಹಣ ಕೊಡದ ಮಾಲೀಕನನ್ನು ದೊಣ್ಣೆಯಿಂದ ಹೊಡೆದು ಕೊಂದ ಟೀ ಸ್ಟಾಲ್ ಕಾರ್ಮಿಕ
ಮದ್ಯ ಖರೀದಿಗೆ ಹಣ ನೀಡದಿದ್ದಕ್ಕೆ ಟೀ ಸ್ಟಾಲ್ ಮಾಲೀಕನನ್ನು ಕೆಲಸಗಾರನೊಬ್ಬ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬೋಯಿಸರ್ ನಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮುಂಬೈ ಜೈಲಿನ 72 ಕೈದಿಗಳಿಗೆ ಕೊರೋನಾ ಪಾಸಿಟಿವ್: ಮಹಾ ಗೃಹ ಸಚಿವ ಅನಿಲ್ ದೇಶಮುಖ್
ಮುಂಬೈನ ಅರ್ತೂರ್ ರೋಡ್ ಜೈಲಿನ 72 ಕೈದಿಗಳಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ಐಸೋಲೇಷನ್ ವಾರ್ಡ್ ಗಳಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ಹೇಳಿದ್ದಾರೆ.

ಭಾರತದಲ್ಲಿ 52 ಸಾವಿರ ಗಡಿ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ: ಮಹಾರಾಷ್ಟ್ರದಲ್ಲಿ ಮತ್ತೊಬ್ಬ ಪೊಲೀಸ್ ಸಾವು
ದೇಶದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಗುರುವಾರ 52 ಸಾವಿರ ಗಡಿ ದಾಟಿದ್ದು ಆರೋಗ್ಯ ಸಚಿವಾಲಯದ ಇತ್ತೀಚಿನ ಮಾಹಿತಿ ಪ್ರಕಾರ ಒಟ್ಟು ಸೋಂಕಿತರ ಸಂಖ್ಯೆ 52 ಸಾವಿರದ 952 ಆಗಿದೆ.

ಮುಂಬೈನಲ್ಲಿ 10 ಸಾವಿರ ಗಡಿ ದಾಟಿದ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ 412ಕ್ಕೆ ಏರಿಕೆ
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದ್ದು, 24 ಗಂಟೆಗಳಲ್ಲಿ ಬರೊಬ್ಬರಿ 769 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಸೋಂಕಿತರ ಸಂಖ್ಯೆ 10,527ಕ್ಕೆ ಏರಿಕೆಯಾಗಿದೆ.

