• Tag results for medical

ಭಾರತೀಯ ವೈದ್ಯಕೀಯ ಮಂಡಳಿ ರದ್ದು

ವೈದ್ಯಕೀಯ ಶಿಕ್ಷಣ ಕ್ಷೇತ್ರದ ಚಾರಿತ್ರಿಕ ಸುಧಾರಣೆಯಲ್ಲಿ ಉನ್ನತ ಶಿಕ್ಷಣ ನಿಯಂತ್ರಕರಾಗಿ ಕಾರ್ಯನಿರ್ವಹಿಸಲು ನಾಲ್ಕು ಸ್ವಾಯತ್ತ ಮಂಡಳಿಗಳೊಂದಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ರಚಿಸಲಾಗಿದೆ. ಈ ಮಧ್ಯೆ ಭಾರತೀಯ ವೈದ್ಯಕೀಯ ಮಂಡಳಿಯನ್ನು ರದ್ದುಗೊಳಿಸಲಾಗಿದೆ.

published on : 25th September 2020

ಕೋವಿಡ್-19 ರೋಗಿಗಳಿಗೆ ಪ್ಲಾಸ್ಮಾ ಥೆರಪಿ ಪ್ರಯೋಜನವಾಗುವುದಿಲ್ಲ: ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ

ಕೋವಿಡ್-19 ಸೋಂಕಿತರಿಗೆ ಪ್ಲಾಸ್ಮಾ ಥೆರಪಿಯಿಂದ ಯಾವುದೇ ರೀತಿಯ ಪ್ರಯೋಜನವಾಗಲಿ, ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಸಹಾಯವಾಗುವುದಿಲ್ಲ, ರೋಗ ನಿಯಂತ್ರಣಕ್ಕೆ ಸಹ ಸಹಾಯವಾಗುವುದಿಲ್ಲ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್) ಹೇಳಿದೆ.

published on : 9th September 2020

ಡ್ರಗ್ಸ್ ಪೂರೈಕೆ ದಂಧೆ: ಶೋಯಿಕ್,ಮಿರಾಂಡಾಗೆ ವೈದ್ಯಕೀಯ ಪರೀಕ್ಷೆ 

ಡ್ರಗ್ಸ್ ಪೂರೈಕೆ ದಂಧೆಯಲ್ಲಿ ಭಾಗಿಯಾಗಿದ್ದಕ್ಕಾಗಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ) ಶುಕ್ರವಾರ ಸಂಜೆ ಬಂಧಿಸಿದ್ದ ರಿಯಾ ಚಕ್ರವರ್ತಿಯ ಸಹೋದರ ಶೋಯಿಕ್ ಮತ್ತು ಆಪ್ತ ಸಹಾಯಕ ಮತ್ತು ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ವ್ಯವಸ್ಥಾಪಕ ಸ್ಯಾಮ್ಯುಯೆಲ್ ಮಿರಾಂಡಾ ಅವರನ್ನು ಇಂದು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯೊಂದರಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ .

published on : 5th September 2020

ಕೊರೊನಾದಿಂದ ಮೃತಪಡುವ ವೈದ್ಯರನ್ನು'ಹುತಾತ್ಮ ಯೋಧ'ರೆಂದು ಪರಿಗಣಿಸಲು ಪ್ರಧಾನಿಗೆ ಐಎಂಎ ಅಧ್ಯಕ್ಷರ ಪತ್ರ

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಕಲ್ಪಿಸುವ ಭಾಗವಾಗಿ ಸೋಂಕಿಗೊಳಗಾಗಿ ಮೃತಪಡುವ ವೈದ್ಯರನ್ನು ಹುತಾತ್ಮ ಸೇನಾ ಯೋಧರಂತೆ ಪರಿಗಣಿಸಿ ಅವರ ಕುಟುಂಬಗಳಿಗೆ ನೆರವಾಗಬೇಕು ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಾಜನ್ ಶರ್ಮ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

published on : 30th August 2020

ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಎನ್‌ಪಿಎಸ್‌ ಯೋಜನೆ ಜಾರಿ: ಸಚಿವರ ಸುಧಾಕರ್

ವೈದ್ಯಕೀಯ ಶಿಕ್ಷಣ ಇಲಾಖೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಬಹು ದಿನಗಳ ಬೇಡಿಕೆಯಾಗಿದ್ದ ಪಿಂಚಣಿ ಯೋಜನೆಗೆ (ಎನ್‌ಪಿಎಸ್) ಸಚಿವ ಡಾ. ಕೆ. ಸುಧಾಕರ್‌ ಹಸಿರು ನಿಶಾನೆ ತೋರಿದ್ದಾರೆ.

published on : 27th August 2020

ಮಾಧ್ಯಮಗಳ ವರದಿ ಸುಳ್ಳು; ಮುಂಡರಗಿ ವೈದ್ಯಾಧಿಕಾರಿಯ ಚಿಕಿತ್ಸಾ ವೆಚ್ಚ ಸರ್ಕಾರದ್ದೇ: ಆರೋಗ್ಯ ಇಲಾಖೆ

ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಆರೋಗ್ಯ ಇಲಾಖೆ ಮತ್ತೊಮ್ಮೆ ಸ್ಪಷ್ಟ ಪಡಿಸಿದೆ.

published on : 23rd August 2020

ಭಾರತವನ್ನು ವಿಶ್ವಾಸಾರ್ಹ ಪಾಲುದಾರರನ್ನಾಗಿಸಿದ ನಮ್ಮ ವೈದ್ಯಕೀಯ ಸಿಬ್ಬಂದಿ ದೇಶದ ಹೆಮ್ಮೆ: ಪೀಯೂಷ್ ಗೋಯಲ್‌

ದೇಶದ ವೈದ್ಯಕೀಯ ಸಿಬ್ಬಂದಿ ದೇಶಕ್ಕೆ ಹೆಮ್ಮೆ ತಂದಿದ್ದಾರೆ ಮತ್ತು ಜಾಗತಿಕ ಒಪ್ಪಂದ ಮತ್ತು ವ್ಯಾಪಾರ ಕ್ಷೇತ್ರದಲ್ಲಿ ಭಾರತ ಓರ್ವ ವಿಶ್ವಾಸಾರ್ಹ ಪಾಲುದಾರ ಎಂಬುದನ್ನು ಜಗತ್ತಿಗೆ ತೊರಿಸಿದ್ದಾರೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಗುರುವಾರ ಹೇಳಿದ್ದಾರೆ.

published on : 20th August 2020

ಬೆಂಗಳೂರು: ಭಯೋತ್ಪಾದಕರೊಂದಿಗೆ ನಂಟು ಆರೋಪ, ಎನ್‍ಐಎಯಿಂದ ವೈದ್ಯಕೀಯ ವಿದ್ಯಾರ್ಥಿ ಬಂಧನ  

 ಇಸ್ಲಾಮಿಕ್ ಸ್ಟೇಟ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಇತ್ತೀಚೆಗೆ ಅಂತಿಮ ವರ್ಷದ ಸ್ನಾತಕೋತ್ತರ ಪದವಿ ಪರೀಕ್ಷೆ ಬರೆದಿದ್ದ ವೈದ್ಯಕೀಯ ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

published on : 18th August 2020

ಕೊರೋನಾ ನಿಯಂತ್ರಣಕ್ಕೆ ವೈದ್ಯ ಸೀಟು ಸಂಖ್ಯೆ ದುಪ್ಪಟ್ಟು ಮಾಡಿ: ಪ್ರಧಾನಿ ಮೋದಿಗೆ ರಾಜ್ಯ ಸರ್ಕಾರ ಮನವಿ

ರಾಜ್ಯದಲ್ಲಿ ವೈದ್ಯ ಪದವಿ ಕೋರ್ಸ್'ಗಳು ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್'ಗಳ ಪ್ರವೇಶಾತಿ ಸಂಖ್ಯೆಯನ್ನು ದುಪ್ಪಟ್ಟು ಮಾಡಲು ಹಾಗೂ ಅಂತಿಮ ವರ್ಷದ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಕೋರ್ಸ್'ಘಳ ವಿದ್ಯಾರ್ಥಿಗಳನ್ನು ಕೋವಿಡ್ ನಿಯಂತ್ರಣ ಚಟುವಟಿಕೆಗೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ರಾಜ್ಯ ಸರ್ಕಾರ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿಕೊಂಡಿದೆ.

published on : 12th August 2020

ದೇಶದ ಪ್ರಥಮ ಐಸಿಎಂಆರ್ ಅನುಮೋದಿತ ಮೊಬೈಲ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಸಚಿವ ಡಾ.ಕೆ.ಸುಧಾಕರ್ ಚಾಲನೆ

ದೇಶದ ಪ್ರಪ್ರಥಮ ಮತ್ತು ಏಕೈಕ ಐಸಿಎಂಆರ್ ಅನುಮೋದಿತ ಮೊಬೈಲ್ ಆರ್ ಟಿ-ಪಿಸಿಆರ್ ಕೋವಿಡ್ ಪರೀಕ್ಷಾ ಲ್ಯಾಬ್ ಗೆ ಇಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಐಐಎಸ್ ಕ್ಯಾಂಪಸ್ ನಲ್ಲಿ ಚಾಲನೆ ನೀಡಿದರು.

published on : 5th August 2020

ರಾಜ್ಯದಲ್ಲಿ ಮರಣ‌ ದರ‌ ಮಹಾರಾಷ್ಟ್ರ, ದೆಹಲಿಗಿಂತ ಕಡಿಮೆ: ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ‌ ದರ‌ ಕಡಿಮೆಯಾಗಿದೆ. 

published on : 4th August 2020

ರಾಜ್ಯದಲ್ಲಿ ಗುಣಮುಖರಾಗುವವರ ಪ್ರಮಾಣದಲ್ಲಿ ಶೇ.5 ರಷ್ಟು ಏರಿಕೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ರಾಜ್ಯದಲ್ಲಿ ಕೊರೊನಾ ಸೋಂಕಿಗೊಳಗಾಗಿ ಗುಣಮುಖರಾಗುವವರ ಪ್ರಮಾಣವು ಕಳೆದೊಂದು ವಾರದಲ್ಲಿ ಶೇ.5.67 ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 3rd August 2020

ಎರಡು ವಾರದೊಳಗೆ ಹೊಸ ಕೋವಿಡ್ ಆಸ್ಪತ್ರೆ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್

ಕೊರೊನಾ ರೋಗಿಗಳ ಚಿಕಿತ್ಸೆಗೆ ಶಿವಾಜಿನಗರದ ಬ್ರಾಡ್ ವೇ ರಸ್ತೆ ಬಳಿ 200 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗುತ್ತಿದ್ದು, ಇನ್ನು ಎರಡು ವಾರಗಳೊಳಗೆ ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

published on : 2nd August 2020

ಸ್ಟಾಫ್‌ ನರ್ಸ್ ಗಳ ಬೇಡಿಕೆ ಈಡೇರಿಕೆಗೆ ಕ್ರಮ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ

ಶನಿವಾರ ಬಿಎಂಸಿಆರ್ ಐ ಮತ್ತು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಪ್ರತಿಭಟಿಸಿದ ಸ್ಟಾಫ್ ನರ್ಸ್ ಗಳ ಬೇಡಿಕೆಗಳನ್ನು ಈಡೇರಿಸಲು ಮುಖ್ಯಮಂತ್ರಿಗಳೊಂದಿಗೆ ಕೂಡಲೇ ಚರ್ಚಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭರವಸೆ ನೀಡಿದ್ದಾರೆ.

published on : 1st August 2020

ಕೋವಿಡ್ ರೋಗಿಗಳಿಗೆ ತ್ವರಿತ ಮಾಹಿತಿ ನೀಡಲು ಕೇಂದ್ರೀಕೃತ ವ್ಯವಸ್ಥೆ

ಕೋವಿಡ್ ಪಾಸಿಟಿವ್ ಆದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಬೇಕೆ, ಮನೆ ಆರೈಕೆಗೆ ಒಳಪಡಬೇಕೆ ಅಥವಾ ಕೋವಿಡ್ ಕೇರ್ ಕೇಂದ್ರಕ್ಕೆ ದಾಖಲಾಗಬೇಕೆ ಎಂದು ಕೂಡಲೇ ನಿರ್ಧರಿಸಲು ಸಾಧ್ಯವಾಗುವಂತಹ ತಂತ್ರಜ್ಞಾನ ಆಧಾರಿತ ಕೇಂದ್ರೀಕೃತ ವ್ಯವಸ್ಥೆ ನಿರ್ಮಿಸಲು ನಿರ್ಧರಿಸಲಾಗಿದೆ.

published on : 29th July 2020
1 2 3 4 5 6 >