ದೇಶಆಪರೇಷನ್ ಕಮಲ: ಬೆಂಗಳೂರಿನಲ್ಲಿರುವ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ ರಾಜೀನಾಮೆ
ಮಧ್ಯ ಪ್ರದೇಶದಲ್ಲಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಆಪರೇಷನ್ ಕಮಲಕ್ಕೆ ಕೈ ಹಾಕಿದೆ ಎಂಬ ಆರೋಪಗಳ ಬೆನ್ನಲ್ಲೇ ಬೆಂಗಳೂರಿನಲ್ಲಿರುವ ಮಧ್ಯ ಪ್ರದೇಶ ಕಾಂಗ್ರೆಸ್ ಶಾಸಕ ಹರ್ದೀಪ್ ಸಿಂಗ್ ಅವರು ತಮ್ಮ ಶಾಸಕ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.