social_icon
  • Tag results for moral policing

ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ: ನೈತಿಕ ಪೊಲೀಸ್​ಗಿರಿ ಆರೋಪ, ಪ್ರಕರಣ ದಾಖಲು

ಉಡುಪಿಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕ-ಯುವತಿ ಮೇಲೆ ಹಲ್ಲೆ ನಡೆಸಲಾಗಿದ್ದು, ನೈತಿಕ ಪೊಲೀಸ್ ಗಿರಿ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

published on : 22nd September 2023

ನೈತಿಕ ಪೊಲೀಸ್‌ಗಿರಿಯನ್ನು ಧೈರ್ಯದಿಂದ ಎದುರಿಸಿದ ಬುರ್ಖಾಧಾರಿ ಯುವತಿ ನಡೆಗೆ ಮೆಚ್ಚುಗೆ; ಆರೋಪಿ ಬಂಧನ

ಬೆಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿಯನ್ನು ಧೈರ್ಯವಾಗಿ ಎದುರಿಸಿ ಆರೋಪಿಗೆ ಸವಾಲೆಸೆದ ಬುರ್ಖಾಧಾರಿ ಯುವತಿಯ ಧೈರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಬುರ್ಖಾ ತೊಟ್ಟಿದ್ದ ಯುವತಿ ಹಿಂದೂ ಯುವಕನೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನೊಬ್ಬ ಅಡ್ಡಿಪಡಿಸಿದ ಘಟನೆ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ.

published on : 28th August 2023

ಮಂಗಳೂರು: ನೈತಿಕ ಪೊಲೀಸ್ ಗಿರಿ, ನಮ್ಮ ಕಾಲೇಜಿನ ಹುಡುಗಿ ಬೇಕಾ? ಎಂದು ಮುಸ್ಲಿಂ ಯುವಕನಿಗೆ ಅದೇ ಸಮುದಾಯದವರಿಂದ ಹಲ್ಲೆ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ವರದಿಯಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಸಮುದಾಯದ ವಿದ್ಯಾರ್ಥಿಗಳು ಥಳಿಸಿದ್ದಾರೆ.

published on : 26th August 2023

ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಮಹಿಳೆಯನ್ನು ಡ್ರಾಪ್ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

ಸುಳ್ಯದಲ್ಲಿ ಕೇರಳದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದಕ್ಷಿಣ ಕನ್ನಡ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಸಂತ್ರಸ್ತ ಮೊಹಮ್ಮದ್ ಜಲೀಲ್ (39) ಎಂಬಾತ ತನ್ನ ಕಾರಿನಲ್ಲಿ ಮಹಿಳೆಯನ್ನು ಸುಳ್ಯಕ್ಕೆ ಇಳಿಸಿ ಹಿಂತಿರುಗುತ್ತಿದ್ದಾಗ ಶನಿವಾರ ಈ ಘಟನೆ ಸಂಭವಿಸಿದೆ.

published on : 14th August 2023

ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಹಲ್ಲೆ; ಮೂವರ ಬಂಧನ

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ವರದಿಯಾದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಿಂದೂ ಯುವತಿಯನ್ನು ತಮ್ಮ ವಾಹನದಲ್ಲಿ ಕರೆದೊಯ್ಯುತ್ತಿದ್ದ ಆರೋಪದ ಮೇಲೆ ಬಲಪಂಥೀಯ ಕಾರ್ಯಕರ್ತರು ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ್ದು, ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

published on : 6th August 2023

ದಕ್ಷಿಣ ಕನ್ನಡದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಧರ್ಮಸ್ಥಳ ಸಮೀಪ ಮುಸ್ಲಿಂ ಯುವಕನ ಮೇಲೆ ಹಲ್ಲೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಬುಧವಾರದಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಬಾಲಕಿಯೊಬ್ಬಳನ್ನು ಕರೆದೊಯ್ಯುತ್ತಿದ್ದ ಆಟೋ ರಿಕ್ಷಾವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

published on : 3rd August 2023

ಕಾರ್ಕಳ: ನೈತಿಕ ಪೊಲೀಸ್ ಗಿರಿ ಪ್ರಕರಣ 5 ಮಂದಿ ಬಂಧನ

ಕಾರ್ಕಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ವರದಿಯಾಗಿದ್ದು ಪೊಲೀಸರು 5 ಮಂದಿಯನ್ನು ಬಂಧಿಸಿದ್ದಾರೆ. 

published on : 2nd August 2023

ಸೌಜನ್ಯ ಪ್ರಕರಣ ಮೇಲ್ಮನವಿ ಸಲ್ಲಿಸುವ ಬಗ್ಗೆ ಪರಿಶೀಲನೆ; ನೈತಿಕ ಪೊಲೀಸ್‌ ಗಿರಿ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಸಿದ್ದರಾಮಯ್ಯ

ನೈತಿಕ ಪೊಲೀಸ್ ಗಿರಿ ಮಾಡಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಕಾನೂನಿನಲ್ಲಿ ನೈತಿಕ ಪೊಲೀಸ್ ಗಿರಿಗೆ ಅವಕಾಶವಿಲ್ಲ. ಕಾನೂನನ್ನು ಕೈಗೆತ್ತಿಕೊಳ್ಳಬೇಡಿ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. 

published on : 1st August 2023

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್​ ಗಿರಿ; ವರದಿಗಾರನ ಮೇಲೆ ಹಲ್ಲೆ ಯತ್ನ, ಇಬ್ಬರ ಬಂಧನ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆ ವರದಿಯಾಗಿದ್ದು ಸ್ಥಳೀಯ ಖಾಸಗಿ ವೆಬ್​ಸೈಟ್ ಒಂದರ ವರದಿಗಾರನ ಮೇಲೆ ನಗರದ ಕಾವೂರಿನಲ್ಲಿ ಜುಲೈ 28ರ ರಾತ್ರಿ ಹಲ್ಲೆ ನಡೆದಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.

published on : 31st July 2023

ದಕ್ಷಿಣ ಕನ್ನಡದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆಯೇ ನೈತಿಕ ಪೊಲೀಸ್ ಗಿರಿ: ಇಬ್ಬರ ಬಂಧನ

ಮಂಗಳೂರಿನ ಬಿಸಿ ರೋಡ್ ನಲ್ಲಿ ಕಳೆದ ರಾತ್ರಿ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ಪತ್ನಿಯ ಜೊತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ನೈತಿಕ ಪೊಲೀಸ್ ಗಿರಿ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.

published on : 28th July 2023

ಮಂಗಳೂರು: ನೈತಿಕ ಪೊಲೀಸ್ ಗಿರಿ ನಡೆಸಿದ್ದ ಇಬ್ಬರು ಆರೋಪಿಗಳ ಬಂಧನ!

ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದು ಈ ಸಂಬಂಧ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

published on : 22nd July 2023

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್‌ಗಿರಿ: ವೈದ್ಯಕೀಯ ವಿದ್ಯಾರ್ಥಿ ಮೇಲೆ ಹಲ್ಲೆ

ಬೀಚ್ ಗೆ ವಿಹಾರಕ್ಕೆ ತೆರಳಿದ್ದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಯೊಬ್ಬರ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ ಘಟನೆ ನಡೆದಿದೆ.

published on : 22nd July 2023

ನೈತಿಕ ಪೊಲೀಸ್ ​ಗಿರಿ: ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರಿನ ನೋಟಿಸ್

ಮಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

published on : 22nd July 2023

ನೈತಿಕ ಪೊಲೀಸ್​ಗಿರಿ ತಡೆಯಲು ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ: ಮಂಗಳೂರಿನಲ್ಲಿ ಕಾರ್ಯಾರಂಭ

ದಕ್ಷಿಣ ಕನ್ನಡ ಜಿಲ್ಲೆಯ ಕೋಮು ಸೂಕ್ಷ್ಮ ಕರಾವಳಿ ನಗರ ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಪ್ರಕರಣಗಳನ್ನು ತಡೆಯಲು ಕಾಂಗ್ರೆಸ್ ಸರ್ಕಾರ ರಚಿಸಿರುವ ಆ್ಯಂಟಿ ಕಮ್ಯುನಲ್ ವಿಂಗ್ (ಎಸಿಡಬ್ಲ್ಯು) ತನ್ನ ಕೆಲಸವನ್ನು ಪ್ರಾರಂಭಿಸಿದೆ.

published on : 15th June 2023

ನೈತಿಕ ಪೊಲೀಸ್‌ಗಿರಿ ಸಂತ್ರಸ್ತನ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ಪೊಲೀಸ್ ಆಯುಕ್ತರಿಗೆ ದೂರು

ಇತ್ತೀಚೆಗಷ್ಟೇ ಸೋಮೇಶ್ವರ ಬೀಚ್‌ನಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಘಟನೆಗೆ ಬಲಿಯಾದ ವಿದ್ಯಾರ್ಥಿಯೊಬ್ಬರು ತಮ್ಮ ಮೇಲೆ ಉಳ್ಳಾಲ ಠಾಣೆಯ ಪೊಲೀಸ್‌ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ.

published on : 7th June 2023
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9