social_icon
  • Tag results for mysore

ಉದ್ಘಾಟನೆಗೂ ಮುನ್ನವೇ ಪ್ರಯಾಣಿಕರಿಗೆ ಟೋಲ್ ಹೊರೆ; ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ನಾಳೆಯಿಂದ ಟೋಲ್ ಸಂಗ್ರಹ

ಬಹು ಉದ್ದೇಶಿತ ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಸೋಮವಾರದಿಂದ ಕಾರ್ಯಾರಂಭ ಮಾಡಲಿದ್ದು, ನಾಳೆಯಿಂದಲೇ ಪ್ರಯಾಣಿಕರಿಗೆ ಭಾರಿ ಮೊತ್ತದ ಹೊರೆ ಬೀಳಲಿದೆ.

published on : 26th February 2023

77 ವರ್ಷದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಮಾಜಿ ಅಧಿಕಾರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆ, 2 ಲಕ್ಷ ರೂಪಾಯಿ ದಂಡ

1991 ಮತ್ತು 1998 ರ ನಡುವೆ 4.40 ಕೋಟಿ ರೂಪಾಯಿ ದುರುಪಯೋಗದ ಆರೋಪದ ಮೇಲೆ 77 ವರ್ಷದ ಸ್ಟೇಟ್ ಬ್ಯಾಂಕ್ ಆಫ್ ಮೈಸೂರಿನ ಮಾಜಿ ಡೆಪ್ಯುಟಿ ಮ್ಯಾನೇಜರ್‌ಗೆ ವಿಶೇಷ ಸಿಬಿಐ ನ್ಯಾಯಾಲಯವು ನಾಲ್ಕು ವರ್ಷಗಳ ಸಾದಾ ಜೈಲು ಶಿಕ್ಷೆ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸಿದೆ. 

published on : 26th February 2023

ವಿಐಎಸ್‌ಎಲ್ ಪುನಶ್ಚೇತನಕ್ಕೆ ಬದ್ಧ ಎಂದ ಸಿಎಂ; ಅಧಿಕಾರಕ್ಕೆ ಬಂದರೆ ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇವೆ ಎಂದ ಡಿಕೆಶಿ ಪ್ರತಿಜ್ಞೆ

ಭದ್ರಾವತಿಯಲ್ಲಿ ವಿಶ್ವೇಶ್ವರಯ್ಯ ಐರನ್ ಅ್ಯಡ್ ಸ್ಟೀಲ್ ಲಿಮಿಟೆಡ್ (ವಿಐಎಸ್‌ಎಲ್) ಪುನಶ್ಚೇತನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದ್ದು, ಈ ನಡುವೆ ಅಧಿಕಾರಕ್ಕೆ ಬಂದರೆ ವಿಐಎಸ್‌ಎಲ್ ಮತ್ತು ಮೈಸೂರು ಪೇಪರ್ ಮಿಲ್ಸ್ ಉಳಿಸುತ್ತೇನೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಬುಧವಾರ ಪ್ರತಿಜ್ಞೆ ಮಾಡಿದ್ದಾರೆ.

published on : 9th February 2023

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ: ಪ್ರತಾಪ್ ಸಿಂಹ, ಹೆಚ್.ಸಿ.ಮಹಾದೇವಪ್ಪ ನಡುವೆ ಇದೀಗ ಕ್ರೆಡಿಟ್ ವಾರ್

ಬೆಂಗಳೂರು- ಮೈಸೂರು ನಡುವಿನ ರಾಜ್ಯ ಹೆದ್ದಾರಿಯನ್ನು ದಶಪಥದ ರಾಷ್ಟ್ರೀಯ ಹೆದ್ದಾರಿಯನ್ನಾಗಿ ಮಾರ್ಪಡಿಸಿದ ವಿಚಾರದಲ್ಲಿ ಇದೀಗ ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಲೋಕೋಪಯೋಗಿ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ನಡುವೆ ಟ್ವಿಟರ್ ನಲ್ಲಿ ಕ್ರೆಡಿಟ್ ವಾರ್ ಜೋರಾಗಿಯೇ ನಡೆದಿದೆ.

published on : 7th February 2023

ಸ್ಯಾಂಟ್ರೋ ರವಿಯನ್ನು 14 ದಿನ ನ್ಯಾಯಾಂಗ ಬಂಧನ ಒಪ್ಪಿಸಿದ ಜೆಎಂಎಫ್​ಸಿ ಕೋರ್ಟ್​

ಮಾನವ ಕಳ್ಳಸಾಗಣೆ, ಅನೈತಿಕ ದಂಧೆ ಹಾಗೂ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿ ಅಲಿಯಾಸ್ ಕೆಎಸ್ ಮಂಜುನಾಥ್‌ನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮೈಸೂರಿನ...

published on : 14th January 2023

ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಅರಣ್ಯ ವೀಕ್ಷಕನ ಮೇಲೆ ಆನೆ ದಾಳಿ, ಸಾವು

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ವೀಕ್ಷಕರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಮೃತರನ್ನು ಮಹದೇವಸ್ವಾಮಿ (35) ಎಂದು ಗುರುತಿಸಲಾಗಿದ್ದು, ಇತರ ಮೂವರೊಂದಿಗೆ ಕೆಲವು ಕೃಷಿ ಹೊಲಗಳಿಂದ ಕಾಡಾನೆಗಳ ಹಿಂಡನ್ನು ಓಡಿಸುತ್ತಿದ್ದಾಗ ಆನೆಯೊಂದು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿದೆ.

published on : 1st January 2023

ಬೆಂಗಳೂರು ಮೈಸೂರು ದಶಪಥ ರಸ್ತೆಗೆ 'ಕಾವೇರಿ ಎಕ್ಸ್‌ಪ್ರೆಸ್‌ವೇ' ಎಂದು ಹೆಸರಿಡಲು ​ಗಡ್ಕರಿಗೆ ಪ್ರತಾಪ್ ಸಿಂಹ ಮನವಿ

ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಜೀವನದಿ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಅವರು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಬುಧವಾರ ಮನವಿ ಮಾಡಿದ್ದಾರೆ.

published on : 22nd December 2022

ನನ್ನಪ್ಪನಿಗೆ ವರುಣಾ ಕ್ಷೇತ್ರ ಲಕ್ಕಿ, ಅಲ್ಲಿ ಸ್ಪರ್ಧಿಸಿದ್ರೆ ಮುಖ್ಯಮಂತ್ರಿ ಆಗೋದು ಪಕ್ಕಾ: ಯತೀಂದ್ರ ಸಿದ್ದರಾಮಯ್ಯ

ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ  ಅವರು, ತಮ್ಮ ವರುಣಾ ವಿಧಾನಸಭಾ ಕ್ಷೇತ್ರದಿಂದ ನನ್ನ ತಂದೆ ಸ್ಪರ್ಧಿಸಲಿ. ಅಪ್ಪ ವರುಣಾದಿಂದ ಗೆದ್ದು ಸಿಎಂ ಆದರು, ಹೀಗಾಗಿ ಅವರಿಗೆ ವರುಣಾ ಕ್ಷೇತ್ರ ಲಕ್ಕಿ ಎಂದು ಹೇಳಿದ್ದಾರೆ.

published on : 30th November 2022

ಮೈಸೂರು ಪೇಂಟ್ಸ್ ಆಧುನೀಕರಣಕ್ಕೆ ಅಗತ್ಯ ನೆರವು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು ಪೇಂಟ್ಸ್ ಆಧುನೀಕರಣ, ವಿಸ್ತರಣೆ ಹಾಗೂ ಸಾಮರ್ಥ್ಯ ಆಭಿವೃದ್ಧಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

published on : 29th November 2022

ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ: ಇದೇ 30ಕ್ಕೆ ಶ್ರೀರಂಗಪಟ್ಟಣ ಬೈಪಾಸ್ ಓಪನ್- ಪ್ರತಾಪ್ ಸಿಂಹ

ಬಹು ನಿರೀಕ್ಷಿತ ಮೈಸೂರು - ಬೆಂಗಳೂರು ಎಕ್ಸ್‌ಪ್ರೆಸ್‌ ವೇ ಎರಡನೇ ಹಂತದ ಕಾಮಗಾರಿ ಭರದಿಂದ ಸಾಗುತ್ತಿದ್ದು, ಇದೇ ತಿಂಗಳ 30 ರಂದು ಶ್ರೀರಂಗಪಟ್ಟಣ ಬೈಪಾಸ್ ಓಪನ್ ಮಾಡಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

published on : 17th November 2022

ಮೈಸೂರಿನಲ್ಲಿ ಗುಂಬಜ್‌ ಮಾದರಿ ಬಸ್‌ ನಿಲ್ದಾಣ ವಿವಾದ: ವಾರದೊಳಗೆ ​ತೆರವುಗೊಳಿಸಿ; ಪಾಲಿಕೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್

ಮೈಸೂರಿನಲ್ಲಿ ಗುಂಬಜ್‌ ಮಾದರಿಯಲ್ಲಿ ನಿರ್ಮಿಸಲಾಗಿರುವ ಬಸ್ ನಿಲ್ದಾಣ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಕೂಡಲೇ ವಿವಾದಾತ್ಮಕ ಬಸ್ ನಿಲ್ದಾಣದ ಶೆಲ್ಟರನ್ನು ತೆರವುಗೊಳಿಸುವಂತೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.

published on : 16th November 2022

ಭಾರೀ ಮಳೆ: ಕುಸಿದ ಮೈಸೂರು ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ, ಕೂದಲೆಳೆ ಅಂತರದಲ್ಲಿ ಅಧ್ಯಾಪಕರು ಪಾರು!

ಭಾರೀ ಮಳೆಗೆ ಮೈಸೂರಿನ ಮಹಾರಾಣಿ ವಿಜ್ಞಾನ ಕಾಲೇಜು ಕಟ್ಟಡ ಕುಸಿದು ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಇಬ್ಬರು ಅಧ್ಯಾಪಕರು ಪಾರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

published on : 21st October 2022

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮೈಸೂರು ಅನಂತಸ್ವಾಮಿ ರಾಗ ಸಂಯೋಜನೆಯಂತೆ ನಾಡಗೀತೆ "ಜಯಭಾರತ ಜನನಿಯ ತನುಜಾತೆ" ಹಾಡಲು ಹೊರಡಿಸಿದ ಆದೇಶದ ವಿರುದ್ಧ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. 

published on : 1st October 2022

ಮೈಸೂರಲ್ಲೇ ತಯಾರಾದ ಸಿಲ್ಕ್ ಸೀರೆ ಉಟ್ಟು, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ದ್ರೌಪದಿ ಮುರ್ಮು ಅವರು ಉಟ್ಟಿದ್ದ ಸೀರೆ ಇದೀಗ ಎಲ್ಲರ ಗಮನ ಸೆಳೆದಿದೆ. ಹೌದು, ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ ದಸರಾವನ್ನು ಉದ್ಘಾಟಿಸಿದ್ದು ವಿಶೇಷ ಗೌರವ ಸಂದಂತಾಗಿದೆ.

published on : 26th September 2022

ಮಗು ಮಾರಾಟ ಮಾಡಿದ ಕೃತ್ಯವನ್ನು ಬಯಲಿಗೆಳೆದ ಮೈಸೂರು ವಿವಿ ತೃತೀಯಲಿಂಗಿ ಪಿಎಚ್‌.ಡಿ ವಿದ್ಯಾರ್ಥಿ

ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪಿಎಚ್‌.ಡಿ ವ್ಯಾಸಂಗ ಮಾಡುತ್ತಿರುವ ತೃತೀಯಲಿಂಗಿಯೊಬ್ಬರು ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಬಡ ದಂಪತಿ ನವಜಾತ ಶಿಶುವನ್ನು ಮಾರಾಟ ಮಾಡಿರುವ ಘಟನೆಯನ್ನು ಬಹಿರಂಗಪಡಿಸಿದ್ದಾರೆ.

published on : 20th September 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9