Mysuru, Election

ಒನಕೆ ಓಬವ್ವ ಜಯಂತಿ: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಶುಭಾಶಯ; ನೀತಿ ಸಂಹಿತೆ ಹಿನ್ನೆಲೆ ಆಚರಣೆ ಮುಂದಕ್ಕೆ
ನವೆಂಬರ್ 11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿಯಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿ ಹಲವು ಗಣ್ಯರು ಸಾಮಾಜಿಕ ಜಾಲತಾಣದ ಮೂಲಕ ಒನಕೆ ಓಬವ್ವರನ್ನು ನೆನೆದು ಜಯಂತಿಯ ಶುಭಾಶಯಗಳನ್ನು ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನ ಗೆಲ್ಲುವ ಗುರಿ ಹೊಂದಿದೆ: ಮಹೇಶ್ ತೆಂಗಿನಕಾಯಿ
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಅವರು ಬುಧವಾರ ಹೇಳಿದ್ದಾರೆ.

ಚುನಾವಣೆಯಲ್ಲಿ ಸೋತರೂ ಜನ ಪ್ರೀತಿಸುವಂತಹ ನಾಯಕ: ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಜಿ.ಟಿ. ದೇವೇಗೌಡ!
ಶಾಸಕ ಜಿ.ಟಿ.ದೇವೇಗೌಡ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜಕೀಯ ವೈರತ್ವ ಮರೆತು ನಗರದಲ್ಲಿ ಮಂಗಳವಾರ ಎರಡು ಕಾರ್ಯಕ್ರಮಗಳಲ್ಲಿ ವೇದಿಕೆಯನ್ನು ಹಂಚಿಕೊಂಡು, ಸೌಹಾರ್ದ ಪ್ರದರ್ಶಿಸಿ ಅಚ್ಚರಿ ಮೂಡಿಸಿದರು.

ಒಂದೇ ವೇದಿಕೆ ಹಂಚಿಕೊಳ್ಳಲಿದ್ದಾರೆ ಸಿದ್ದರಾಮಯ್ಯ- ಜಿಟಿ ದೇವೇಗೌಡ: 'ದಳಪತಿ'ಗಳಿಗೆ ಮತ್ತೊಂದು ಶಾಕ್!
ನವೆಂಬರ್ 9ರಂದು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಸಿದ್ದರಾಮಯ್ಯರನ್ನು ಸ್ವಾಗತಿಸಲು ಜಿ.ಟಿ.ದೇವೇಗೌಡರು ಸಿದ್ಧತೆ ನಡೆಸುತ್ತಿದ್ದಾರೆ.

ಬಿಜೆಪಿ ರಾಷ್ಟ್ರೀಯ ಸಭೆಯಲ್ಲಿ ಮೋದಿ ಪ್ರವಾಸದ ಚರ್ಚೆ: ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ರಣಕಹಳೆ
ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಂಚರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಿದ್ಧತೆ ಕುರಿತು ಚರ್ಚೆ, ಮಾರ್ಗಸೂಚಿ ರೂಪಿಸಲಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಚುನಾವಣಾ ರಾಜ್ಯಗಳ ಭೇಟಿ ತೀವ್ರಗೊಳ್ಳಲಿದೆ.

ಪಕ್ಷ ನಿರ್ಧರಿಸಿದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ: ಯೋಗಿ ಆದಿತ್ಯ ನಾಥ್
ಭಾರತೀಯ ಜನತಾ ಪಕ್ಷವು ನಿರ್ಧರಿಸಿದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.

ಉಪಚುನಾವಣೆ ಫಲಿತಾಂಶ ಎಫೆಕ್ಟ್: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸರ್ಕಾರ ನಿರಾಸಕ್ತಿ!
ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಚುನಾವಣೆ ನಡೆಸಲು ಆಸಕ್ತಿ ತೋರುತ್ತಿಲ್ಲ.

ಕೇದಾರನಾಥದಲ್ಲಿ ಪ್ರಧಾನಿ ಮೋದಿ ಅನಾವರಣಗೊಳಿಸಿದ ಶಂಕರಾಚಾರ್ಯ ಪ್ರತಿಮೆ ಕೆತ್ತಿದ್ದು ಮೈಸೂರು ಶಿಲ್ಪಿ!
ಉತ್ತರಾಖಂಡದ ಕೇದಾರನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಅನಾವರಣಗೊಳಿಸಿದ ಆದಿಗುರು ಶಂಕರಾಚಾರ್ಯ ಅವರ ಸುಂದರ ಪುತ್ಥಳಿಯನ್ನು ಕೆತ್ತಿದ್ದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್.

ಹಾನಗಲ್ ಸೋಲನ್ನು ಗೆಲುವಾಗಿ ಪರಿವರ್ತಿಸಲಾಗುವುದು: ಮುಖ್ಯಮಂತ್ರಿ ಬೊಮ್ಮಾಯಿ
ಸಿಂದಗಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ನಲ್ಲಿ ಅನುಭವಿಸಿರುವ ಸೋಲನ್ನು ಗಂಭೀರವಾಗಿ ಪರಿಗಣಿಸಿ, ಸೋಲನ್ನು ಗೆಲುವಾಗಿ ಪರಿವರ್ತನೆ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

