Mysuru, Election

ಮೈಸೂರು: ಆಷಾಢ ಶುಕ್ರವಾರ, ಚಾಮುಂಡಿ ಬೆಟ್ಟದಲ್ಲಿ ಭಕ್ತಸಾಗರ!
ಆಷಾಢ ಮಾಸದಲ್ಲಿ ಶಕ್ತಿ ದೇವತೆಗೆ ವಿಶೇಷ ಪೂಜೆ ಸಲ್ಲಿಸುವುದಕ್ಕಾಗಿ ಮೈಸೂರು, ಹಾಸನ, ಚಾಮರಾಜನಗರ, ಮಡಿಕೇರಿ ಸೇರಿದಂತೆ ತಮಿಳುನಾಡು ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸಿದ್ದಾರೆ.

ಚುನಾವಣಾ ಲೋಪದೋಷ ಸರಿಪಡಿಸಲು ಮುಂದು; ಕಮಲ-ದಳ ಮೈತ್ರಿ ಎದುರಿಸಲು ಡಿಕೆಶಿ ತಂತ್ರ!
ಈ ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ 1 ಕ್ಷೇತ್ರದಲ್ಲಿ ಮಾತ್ರ ಗೆದ್ದಿತ್ತು. ಈ ಬಾರಿ ಆ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಆದರೆ, ನಮ್ಮ ನಿರೀಕ್ಷೆಯಂತೆ 14-15 ಸ್ಥಾನಗಳು ಬಂದಿಲ್ಲ.

ಏಟಿಗೆ ಎದುರೇಟು: ಪ್ರತಿಭಟನೆಗಿಳಿದ ಬಿಜೆಪಿಗೆ ತಿರುಗೇಟು ನೀಡಲು 'ಕೈ' ಪಡೆ ಮುಂದು!
ಕಾಂಗ್ರೆಸ್ ನಾಯಕರ ತೇಜೋವಧೆ ಮಾಡುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಜುಲೈ 12ರಂದು ಬೆಳಿಗ್ಗೆ 10ಕ್ಕೆ ಮುಡಾ ಮುತ್ತಿಗೆ ಹಾಕುವುದಾಗಿ ಹೇಳಿದೆ. ಸಾವಿರಾರು ಜನರನ್ನು ಸೇರಿಸಿದರೆ ಅಷ್ಟೇ ಸಂಖ್ಯೆಯಲ್ಲಿಯೇ ಪಕ್ಷದ ಕಾರ್ಯಕರ್ತರು, ನಾಗರಿಕರು ಬಿಜೆಪಿಗರನ್ನು ಸುತ್ತುವರಿಯಲಿದ್ದಾರೆ...

MUDA ಗಬ್ಬೆದ್ದು ನಾರುತ್ತಿದೆ, ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ
ಮುಡಾ ಗೆಬ್ಬೆದ್ದು ನಾರುತ್ತಿದೆ, ಅದನ್ನ ಕ್ಲೀನ್ ಮಾಡುವ ಕೆಲಸ ಮಾಡುತ್ತೇನೆ. ಮುಡಾ ಹಗರಣದ ಬಗ್ಗೆ ಇಬ್ಬರು ಐಎಎಸ್ ಅಧಿಕಾರಿಗಳಿಂದ ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇನೆ.

ಅಂಬೇಡ್ಕರ್ ಕೊಟ್ಟ ಸಂವಿಧಾನದಿಂದಲೇ ನಾನು ಸಿಎಂ ಆಗಿದ್ದು, ಮೋದಿ ಪ್ರಧಾನಿಯಾಗಿದ್ದು: ಸಿದ್ದರಾಮಯ್ಯ
ಗುತ್ತಿಗೆಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ತಂದಿದ್ದು, ದಲಿತ ಜನಸಂಖ್ಯೆಯ ಅನುಪಾತಕ್ಕೆ ಅನುಗುಣವಾಗಿ ಅಭಿವೃದ್ಧಿ ಆಯವ್ಯಯದಲ್ಲಿ ಹಣ ದಲಿತರ ಅಭಿವೃದ್ಧಿಗೆ ಮೀಸಲಿಟ್ಟು ಕಾಯ್ದೆ ಮಾಡಿರುವುದು ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯಗಳಲ್ಲೂ ಇದು ಜಾರಿಯಲ್ಲಿಲ್ಲ.

MUDA Scam: ನಕಲಿ ದಾಖಲೆ ಸಲ್ಲಿಸಿ ಸೈಟ್ ಪಡೆದ ಆರೋಪ; CM ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ 10 ಮಂದಿ ವಿರುದ್ಧ ಪ್ರಕರಣ ದಾಖಲು!
ಮೂಲಗಳ ಪ್ರಕಾರ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾರೆ.

ವಿಶ್ವನಾಥ್ ಅವರ ಪತ್ನಿಗೂ ಬದಲಿ ನಿವೇಶನ ನೀಡಲಾಗಿದೆ: ಸಿದ್ದು ಬೆನ್ನಿಗೆ ನಿಂತ ಮುಡಾ ಅಧ್ಯಕ್ಷ
ತಮ್ಮ ಪತ್ನಿ ಹೆಸರಿನಲ್ಲಿಯೇ ಬದಲಿ ನಿವೇಶನ ಪಡೆದಿರುವ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಇತರರ ವಿರುದ್ಧ ಟೀಕೆ ಮಾಡುತ್ತಿರುವುದು ರಾಜಕೀಯ ದಿವಾಳಿತನವನ್ನು ತೋರಿಸುತ್ತದೆ.

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ಹೋಗುವವರಿಗೆ ಉಚಿತ ಬಸ್ ಸೇವೆ!
ಆಷಾಢ ಶುಕ್ರವಾರದಂದು ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇರುವುದಿಲ್ಲ.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗಲೇ ಮುಡಾ ಅವ್ಯವಹಾರ ನನ್ನ ಗಮನಕ್ಕೆ ಬಂದಿತ್ತು: ಎಸ್.ಟಿ. ಸೋಮಶೇಖರ್
ಮುಡಾದ ಪ್ರತಿ ಮೀಟಿಂಗ್ ನಲ್ಲಿ ಶಾಸಕರ ಫೈಲ್ ಗಳೇ ಇರುತ್ತಿದ್ದವು. ಆದರೆ, ಶಾಸಕರ ಹೆಸರಿನ ಫೈಲ್ ಗಳು ಚರ್ಚೆಯಾಗದೆ ಪಾಸ್ ಆಗುತ್ತಿದ್ದವು.

