Mysuru, Election

ಅಪಘಾತ: ಕಾಲು ಕಳೆದುಕೊಂಡ ಪಾರ್ವತಮ್ಮ ರಾಜ್‌ಕುಮಾರ್ ತಮ್ಮನ ಮಗ ಸೂರಜ್; ಸ್ಯಾಂಡಲ್‌ವುಡ್ ಕನಸು ನುಚ್ಚುನೂರು!
ಸ್ಯಾಂಡಲ್‌ವುಡ್‌ನಲ್ಲಿ ನಟನಾಗಿ ಎಂಟ್ರಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಪಾರ್ವತಮ್ಮ ರಾಜ್‌ಕುಮಾರ್ ಅವರ ತಮ್ಮನ ಮಗನಾದ ಸೂರಜ್‌ಗೆ ತೆರಳುತ್ತಿದ್ದ ಬೈಕ್‌ಗೆ ನಂಜನಗೂಡಿನ ಬಳಿ ಲಾರಿಯೊಂದು ಡಿಕ್ಕಿ ಹೊಡೆದಿದೆ. ಶನಿವಾರ (ಜೂನ್ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಸೂರಜ್ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೀಡಾ ಅಂಗಡಿಯಲ್ಲಿ ಬಿಲ್ ನೀಡುವ ವಿಚಾರಕ್ಕೆ ಜಗಳ: ಕೈ ಕೈ ಮಿಲಾಯಿಸಿಕೊಂಡ ಸಾ ರಾ ಮಹೇಶ್ ಪುತ್ರ-ಪತ್ರಕರ್ತನ ಮಗ
ಹೊಟೇಲ್ ನಲ್ಲಿ ಊಟ ಮಾಡಿ ಬೀಡಾ ಅಂಗಡಿಯಲ್ಲಿ ಬಿಲ್ ನೀಡುವ ಕ್ಷುಲ್ಲಕ ಕಾರಣಕ್ಕೆ ಮಾಜಿ ಶಾಸಕ ಸಾ ರಾ ಮಹೇಶ್ ಮತ್ತು ಪತ್ರಕರ್ತರೊಬ್ಬರ ಪುತ್ರನ ಮಧ್ಯೆ ಗಲಾಟೆಯಾದ ಘಟನೆ ಮೈಸೂರಿನ ಕುವೆಂಪು ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

ಜೂನ್ 27 ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಅಷಾಢ ಮಾಸದ ಮೊದಲ ಶುಕ್ರವಾರ: ಚಾಮುಂಡೇಶ್ವರಿ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್!
ಆಷಾಢ ಮಾಸದ ಮೊದಲ ಶುಕ್ರವಾರ ಹಿನ್ನೆಲೆಯಲ್ಲಿ ನಾಡದೇವತೆ ಚಾಮುಂಡಿ ಬೆಟ್ಟದಲ್ಲಿ ಸಡಗರ, ಸಂಭ್ರಮ ಮನೆ ಮಾಡಿದೆ. ಚಾಮುಂಡೇಶ್ವರಿ ದೇವಸ್ಥಾನವನ್ನು ವಿವಿಧ ಹೂವುಗಳಿಂದ ಅಲಂಕರಿಸಿದ್ದು, ಮುಂಜಾನೆಯಿಂದಲೇ ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.

ಅಪಘಾತಗಳನ್ನು ತಡೆಯಲು ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಸ್ಕೈವಾಕ್ ಗಳ ನಿರ್ಮಿಸಲು ಚಿಂತನೆ!
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಪ್ರತಿ ಹಳ್ಳಿಯಲ್ಲಿ ಸ್ಕೈವಾಕ್ ನಿರ್ಮಿಸಲು ಯೋಜಿಸಿದೆ.

ಹುಣಸೂರು: ಸಾಮಿಲ್‍ನಲ್ಲಿ ಜೋಡಿ ಕೊಲೆ
ನಗರದ ವಿಶ್ವೇಶ್ವರಯ್ಯ ವೃತ್ತದ ಬಳಿ ಇರುವ ಎಸ್.ಎಸ್. ಸಾಮಿಲ್ ನಲ್ಲಿ ಇಬ್ಬರು ವ್ಯಕ್ತಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ.

ಮುಂದಿನ ಸಿನಿಮಾ ತಯಾರಿ ಕೆಲಸ ನಡೆಯುತ್ತಿದೆ, ಆದಷ್ಟು ಬೇಗ ಘೋಷಣೆ: ನಂಜನಗೂಡಿನಲ್ಲಿ ನಟ ಯಶ್
ಕೆಜಿಎಫ್ 1 ಮತ್ತು ಕೆಜಿಎಫ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೆಳೆದಿರುವ ರಾಕಿಂಗ್ ಸ್ಟಾರ್ ಯಶ್(Rocking star Yash) ಇಂದು ಬುಧವಾರ ಪತ್ನಿ ರಾಧಿಕಾ ಪಂಡಿತ್(Radhika Pandit) ಮತ್ತು ಮಕ್ಕಳ ಜೊತೆ ದಕ್ಷಿಣದ ಕಾಶಿ ಎಂದು ಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿದರು.

ಖೋ-ಖೋ ಆಡುತ್ತಿದ್ದ 13 ವರ್ಷದ ಬಾಲಕ ಸಾವು
ಶಾಲಾ ಅವಧಿಯ ನಂತರ ಸ್ನೇಹಿತರೊಂದಿಗೆ ಖೋ-ಖೋ ಆಡುತ್ತಿದ್ದ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನ ಗ್ರಾಮದಲ್ಲಿ ನಡೆದಿದೆ.

ಮೈಸೂರು-ಹಾಸನ ಹೆದ್ದಾರಿಯಲ್ಲಿ ಅಪಘಾತ: ಇಬ್ಬರು ಯುವಕರ ದುರ್ಮರಣ
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ಕೆ.ಆರ್. ಪೇಟೆ ತಾಲೂಕಿನ ಹಿರೀಕಳಲೆ ಗ್ರಾಮದ ಬಳಿ ಮೈಸೂರು-ಹಾಸನ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

