Mysuru,

ನೈಋತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ಫೆಬ್ರವರಿ 26 ಅಂದರೆ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಇಸ್ರೊ ಸಹಯೋಗದೊಂದಿಗೆ ನ್ಯಾನೊ ಉಪಗ್ರಹ ಉಡಾವಣೆಗೆ JSS ವಿ.ವಿ ಸಜ್ಜು
ಮೈಸೂರಿನ ಜೆಎಸ್ ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯವು ಬರುವ ಏಪ್ರಿಲ್ ತಿಂಗಳಲ್ಲಿ ಇಸ್ರೊ ಸಹಯೋಗದೊಂದಿಗೆ ಜೆಎಸ್ ಎಸ್ ಎಸ್ ಟಿಯುನ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರು ಸೇರಿ ಅಭಿವೃದ್ಧಿಪಡಿಸಿದ ಘನಮ್ ನ್ಯಾನೊ-ಉಪಗ್ರಹ ಉಡಾವಣೆ ಮಾಡಲು ಸಿದ್ಧವಾಗಿದೆ.

ರಾಜಕೀಯಕ್ಕೆ ಡಾಲಿ ಧನಂಜಯ: ಮೈಸೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕೆ?

ನಗರದಲ್ಲಿ ಹೆಚ್ಚಿದ ಸರಗಳ್ಳರ ಹಾವಳಿ: ಚಾಮುಂಡಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳೆಯ ಮಂಗಳಸೂತ್ರ ಕಿತ್ತು ಪರಾರಿ!
ನಗರದಲ್ಲಿ ಸರಗಳ್ಳರ ಹಾವಳಿ ಹೆಚ್ಟಾಗಿದೆ. ಖದೀಮನೊಬ್ಬ ಮೈಸೂರಿಗೆ ತೆರಳುತ್ತಿದ್ದ ಮಹಿಳೆಯೊಬ್ಬರ 3 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಮಂಗಳಸೂತ್ರವನ್ನು ದೋಚಿ ಪರಾರಿಯಾಗಿರುವ ಘಟನೆ ಚಾಮುಂಡಿ ಎಕ್ಸ್‌ಪ್ರೆಸ್‌ನಲ್ಲಿ (Chamundi Express) ಶನಿವಾರ ರಾತ್ರಿ ನಡೆದಿದೆ.

ವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಗೆ ಗೌರವ, ಪ್ರಧಾನಿ ಮೋದಿಗೆ ಕ್ರೆಡಿಟ್ ನೀಡಿದ ಅಮಿತ್ ಶಾ!
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮತ್ತಿತರ ಪ್ರಸಿದ್ಧ ಯಾತ್ರಾ ಕೇಂದ್ರಗಳ ಕುರಿತ ಪ್ರಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿಶ್ವ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಪರಂಪರೆಯ ಗೌರವದ ಕ್ರೆಡಿಟ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೀಡಿದ್ದಾರೆ.

ಮೈತ್ರಿ ಧರ್ಮ ಎಡವಟ್ಟಾದರೆ ಕಷ್ಟ, ಕೊಟ್ಟಿರುವ ಟಾಸ್ಕ್ ಪೂರ್ಣಗೊಳಿಸಿ; 28 ಸ್ಥಾನಗಳನ್ನು ಗೆಲ್ಲಲು ಯೋಜನೆ ರೂಪಿಸಿ: ಅಮಿತ್ ಶಾ
ಬಿಜೆಪಿ-ಜೆಡಿಎಸ್ ಮೈತ್ರಿ ಸೀಟು ಹಂಚಿಕೆ ಹಾಗೂ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕೆಂಬ ಬಗ್ಗೆ ನಾವು ನಿರ್ಧಾರ ಮಾಡುತ್ತೇವೆ. ನಿಮಗೆ ವಹಿಸಿರುವ ಟಾಸ್ಕ್ ಮಾತ್ರ ಪೂರ್ಣ ಮಾಡಿ. ಮೈತ್ರಿ ಧರ್ಮ ಪಾಲನೆ ಸ್ವಲ್ಪ ಎಡವಟ್ಟಾದರೆ ಕಷ್ಟವಾಗುತ್ತದೆ

ಜೆಡಿಎಸ್ ಮೈತ್ರಿ ವಿರುದ್ಧ ಅಪಸ್ವರ: ಮೈಸೂರಿನ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ನಾಯಕರಿಗೆ ಅಮಿತ್ ಶಾ ಖಡಕ್ ಎಚ್ಚರಿಕೆ!
ಮುಂಬರುವ ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಜೆಡಿಎಸ್ ಜತೆ ಮಾಡಿಕೊಂಡಿರುವ ಮೈತ್ರಿ ಬಗ್ಗೆ ಅಪಸ್ವರ ಎತ್ತಿದ ಬಿಜೆಪಿ ರಾಜ್ಯ ನಾಯಕರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಎಚ್ಚರಿಕೆ ನೀಡಿದರು.

'ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?':ಅಮಿತ್ ಶಾ ವಿರುದ್ಧ ಮೈಸೂರು ಕಾಂಗ್ರೆಸ್ ನಿಂದ ಪೋಸ್ಟರ್ ಅಭಿಯಾನ, ಪ್ರತಿಭಟನೆ
ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ.

ಕೇಂದ್ರ ಗೃಹ ಸಚಿವ 'ಬಿಜೆಪಿ ಚಾಣಕ್ಯ' ಅಮಿತ್ ಶಾ ಮೈಸೂರಿಗೆ ಆಗಮನ: ಬಿಜೆಪಿ ಮುಖಂಡರ ಜೊತೆ ಇಂದು ಮಹತ್ವದ ಸಭೆ
ಕೇಂದ್ರ ಗೃಹ ಸಚಿವ, ಬಿಜೆಪಿಯ ಚಾಣಕ್ಯ ಎಂದೇ ಹೆಸರಾಗಿರುವ ಅಮಿತ್ ಶಾ (Amit Shah) ಅವರು ಭಾನುವಾರ ನಸುಕಿನ ಜಾವವೇ ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ನಸುಕಿನ ಜಾವ 3 ಗಂಟೆಗೆ ಹೊತ್ತಿಗೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಆಗಮಿಸಿದ ಅಮಿತ್ ಶಾ, ಇಲ್ಲಿಂದ ರಸ್ತೆ ಮಾರ್ಗದ ಮೂಲಕ ಱಡಿಸನ್ ಬ್ಲೂ ಹೋಟೆಲ್ ಗೆ ತೆರಳಿ ಅಲ್ಲಿ ವಾಸ್ತ

