Mysuru,

ಮೈಸೂರು, ಸುತ್ತಮುತ್ತ ಸ್ಥಾಪಿತ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಬೇಕು: ಸಿದ್ದರಾಮಯ್ಯ
ಮೈಸೂರು ಮತ್ತು ಸುತ್ತಮುತ್ತ ಸ್ಥಾಪನೆಯಾಗಿರುವ ಕಾರ್ಖಾನೆಗಳಲ್ಲಿ ಉದ್ಯೋಗಕ್ಕೆ ಸ್ಥಳೀಯರಿಗೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.

ಮೈಸೂರು, ಹೊಸೂರು ರಸ್ತೆಯಲ್ಲಿ ಭಾರೀ ಟ್ರಾಫಿಕ್: ಸಂಚಾರ ಅಸ್ತವ್ಯಸ್ತ
ಕ್ರಿಸ್ಮಸ್ ಮತ್ತು ವರ್ಷಾಂತ್ಯದ ರಜೆಯ ಹಿನ್ನೆಲೆಯಲ್ಲಿ ನಗರದಿಂದ ಪ್ರಸಿದ್ಧ ಪ್ರವಾಸಿ ತಾಣಗಳಿಗೆ ತೆರಳುವ ಜನರಿಂದ ಶನಿವಾರ ಬೆಂಗಳೂರು-ಮೈಸೂರು ರಸ್ತೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಮತ್ತು ಹೊಸೂರು ರಸ್ತೆಯಲ್ಲಿ ಗಂಟೆಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಹಿಜಾಬ್ ಮೇಲಿನ ನಿಷೇಧ ಹಿಂಪಡೆಯುವ ಕುರಿತು ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ ಯೂಟರ್ನ್
ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಮತ್ತು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಸಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಸ್ಪಷ್ಟಪಡಿಸಿದ್ದಾರೆ.

ಊಹಾ- ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಪತ್ರಕರ್ತರಿಗೆ ಸಿಎಂ ಸಿದ್ದರಾಮಯ್ಯ ತರಾಟೆ
ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.

ಬರ ಪರಿಹಾರ ನಾಳೆ ಅಮಿತ್ ಶಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿಂದು ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.

ಮೈಸೂರು: 9 ತಿಂಗಳಲ್ಲಿ 35 ರೈತರು ಆತ್ಮಹತ್ಯೆ!
ಬರಪೀಡಿತ ಎಂದು ಘೋಷಿಸಲಾಗಿರುವ ಮೈಸೂರು ಜಿಲ್ಲೆಯಲ್ಲಿ ಸಾಲದ ಬಾಧೆ, ಸರಿಯಾದ ಬೆಲೆ ಸಿಗದಿರುವುದು ಹಾಗೂ ಬೆಳೆ ಹಾನಿ ಮೊದಲಾದ ಕಾರಣಗಳಿಂದಾಗಿ ಏಪ್ರಿಲ್ 23 ರಿಂದ 35 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸಂಸತ್ ಭದ್ರತಾ ಲೋಪ: ನಿವೃತ್ತ ಡಿವೈಎಸ್ಪಿ ಪುತ್ರನ ಬಂಧನ, ಮೈಸೂರಿನಲ್ಲಿ ಸಲೂನ್ ಮಾಲೀಕನ ವಿಚಾರಣೆ
ಸಂಸತ್ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು, ಬಾಗಲಕೋಟೆಯಲ್ಲಿ ನಿವೃತ್ತ ಡಿವೈಎಸ್ಪಿ ಪುತ್ರನನ್ನು ವಶಕ್ಕೆ ತೆಗೆದುಕೊಂಡಿದ್ದು, ಮೈಸೂರಿನಲ್ಲಿ ಮತ್ತೊಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಮೈಸೂರು: ವಿವಾಹಿತ ಮಹಿಳೆಯೊಂದಿಗೆ ಯುವಕನ ಫೊಟೊ ವೈರಲ್; ಇಬ್ಬರೂ ಆತ್ಮಹತ್ಯೆಗೆ ಶರಣು!
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ತಮ್ಮ ಫೋಟೊ ವೈರಲ್ ಆಗಿದ್ದರಿಂದ ಮನನೊಂದು ಯುವಕ ಮತ್ತು ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಮೃತರನ್ನು ಪಟ್ಟಣದ ಕಲ್ಗುಣಿಗೆ ನಿವಾಸಿಗಳಾದ 28 ವರ್ಷದ ವಿವಾಹಿತೆ ಶೃತಿ ಮತ್ತು 20 ವರ್ಷದ ಮುರಳಿ ಎಂದು ಗುರುತಿಸಲಾಗಿದೆ.

ಸಂಜೆ ವೇಳೆ ಮೈಸೂರು ಅರಮನೆಗೆ ಪ್ರವೇಶ ನೀಡಲು ಚಿಂತನೆ; ಜನವರಿ 26 ರಿಂದ ‘ಬ್ರಾಂಡ್ ಮೈಸೂರು ಫೆಸ್ಟ್’!
ದಸರಾ ಸಂಭ್ರಮವನ್ನು ಮೀರಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಹೊಸ ಲಾಂಛನದೊಂದಿಗೆ ಬ್ರಾಂಡ್ ಮೈಸೂರು ಉತ್ತೇಜಿಸುವ ಸಲುವಾಗಿ ರಾಜ್ಯ ಸರ್ಕಾರವು ಸಂಜೆ ವೇಳೆ ಪ್ರವಾಸಿಗರಿಗೆ ಮೈಸೂರು ಅರಮನೆಯನ್ನು ತೆರೆಯಲು ಯೋಜಿಸಿದೆ.

