Newdelhi

ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ. ಸುಬ್ರಮಣಿಯನ್ ರಾಜೀನಾಮೆ; ಅಕಾಡೆಮಿಗೆ ಮರಳಲು ನಿರ್ಧಾರ
ಹಣಕಾಸು ಸಚಿವಾಲಯದಲ್ಲಿ ಮೂರು ವರ್ಷ ಪೂರ್ಣಗೊಳಿಸಿದ ನಂತರ ತನ್ನ ಅಕಾಡೆಮಿಗೆ ಮರಳಲು ನಿರ್ಧರಿಸಿರುವುದಾಗಿ ಮುಖ್ಯ ಆರ್ಥಿಕ ಸಲಹೆಗಾರ ಕೆ ವಿ ಸುಬ್ರಮಣಿಯನ್ ಶುಕ್ರವಾರ ಹೇಳಿದ್ದಾರೆ.

ಟಿ-20 ವಿಶ್ವಕಪ್: ಅಂಪೈರ್ ಪಟ್ಟಿಯಲ್ಲಿ ಮೆನನ್, ರೆಫ್ರಿಯಾಗಿ ಜಾವಗಲ್ ಶ್ರೀನಾಥ್ ನೇಮಕ
ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗೆ 20 ಅಂಪೈರ್ಸ್ ಮತ್ತು ರೆಫ್ರಿಗಳ ಪಟ್ಟಿಯನ್ನು ಐಸಿಸಿ ಬಿಡುಗಡೆ ಮಾಡಿದೆ.

ಲಖೀಂಪುರ್ ಹಿಂಸಾಚಾರ: ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು.

ಅರ್ಹ ರೈಲ್ವೆ ನೌಕರರಿಗೆ ದಸರಾ ಬಂಪರ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸಂಪುಟ!
ಪತ್ರಾಂಕಿತರಲ್ಲದ (ನಾನ್- ಗೆಜೆಟೆಡ್) ಅರ್ಹ ರೈಲ್ವೆ ನೌಕರರಿಗೆ 78 ದಿನಗಳ ವೇತನಕ್ಕೆ ಸಮಾನವಾದ ಬೋನಸ್ ನೀಡಲು ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ದೇಶದ ಮೊದಲ ಯಶಸ್ವಿ 'ಕೃತಕ ಹೃದಯ ಉಪಕರಣ' ತೆರವು ಶಸ್ತ್ರಚಿಕಿತ್ಸೆ ನಡೆಸಿದ ಪೋರ್ಟಿಸ್ ವೈದ್ಯರು
ಹೃದಯ ವೈಫಲ್ಯ ಸಮಸ್ಯೆ ಎದುರಿಸುತ್ತಿರುವವರಿಗೆ ಅಳವಡಿಸುವ ಕೃತಕ ಹೃದಯ ಉಪಕರಣವನ್ನು ಮರಳಿ ಹೊರತೆಗೆಯುವುದು ಅತ್ಯಂತ ಕ್ಲಿಷ್ಟಕರ ಕ್ರಿಯೆ. ಈ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್ ಆಸ್ಪತ್ರೆ ಯಶಸ್ವಿಯಾಗಿ ನಡೆಸಿದೆ. ಈ ಮಾದರಿಯ ಯಶಸ್ವಿ ಶಸ್ತ್ರಚಿಕಿತ್ಸೆ ದೇಶದಲ್ಲೇ ಮೊದಲಿನದ್ದಾಗಿದೆ.

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ಮಹಾ ನಗರಗಳಲ್ಲಿ ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ
ಬೆಂಗಳೂರು ಸೇರಿದಂತೆ ದೇಶದ ನಾಲ್ಕು ಪ್ರಮುಖ ಮಹಾನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ ಪೆಟ್ರೋಲ್ ದರ 100 ರೂಪಾಯಿ ದಾಟಿದೆ.

ದೆಹಲಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ: ಸೋನಿಯಾ ಗಾಂಧಿ ಭೇಟಿ, ಒಂದೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ
ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿರೋಧ ಪಕ್ಷಧ ನಾಯಕ ಸಿದ್ದರಾಮಯ್ಯ ಅವರು ದೆಹಲಿಗೆ ಮಂಗಳವಾರ ಭೇಟಿ ನೀಡಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆಂದು ತಿಳಿದುಬಂದಿದೆ.

ಪ್ಯಾಂಡೋರಾ ಪೇಪರ್ಸ್ ಕೇಸ್: ಬಹು ಏಜೆನ್ಸಿ ಗ್ರೂಪ್ ನಿಂದ ತನಿಖೆ ಮೇಲ್ವಿಚಾರಣೆ
ಕೇಂದ್ರೀಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ಅಧ್ಯಕ್ಷರ ನೇತೃತ್ವದಲ್ಲಿನ ಬಹು-ಏಜೆನ್ಸಿ ಗ್ರೂಪ್ ಪಂಡೋರಾ ಪೇಪರ್ಸ್ ಪ್ರಕರಣದ ತನಿಖೆಯನ್ನು ಮೇಲ್ವಿಚಾರಣೆ ಮಾಡುತ್ತದೆ ಎಂದು ಅಧಿಕೃತ ಹೇಳಿಕೆ ಸೋಮವಾರ ತಿಳಿಸಿದೆ.

ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ವ್ಯತ್ಯಯ; ಗ್ರಾಹಕರ ಪರದಾಟ
ಫೇಸ್ ಬುಕ್, ವಾಟ್ಸಾಪ್, ಇನ್ಸ್ಟಾಗ್ರಾಮ್ ಸೇವೆಯಲ್ಲಿ ಸೋಮವಾರ ಸಂಜೆಯಿಂದ ವ್ಯತ್ಯಯ ಉಂಟಾಗಿದ್ದು, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಂದೇಶಗಳನ್ನು ಕಳುಹಿಸಲು ಅಥವಾ ಸ್ವೀಕರಿಸಲು ಸಾಧ್ಯವಾಗದ ಕಾರಣ ಭಾರತ ಸೇರಿದಂತೆ ವಿಶ್ವದಾದ್ಯಂತ ಲಕ್ಷಾಂತರ ಗ್ರಾಹಕರು ಪರದಾಡುವಂತಾಗಿದೆ.

