Newdelhi

ಅಮೆರಿಕಾದಿಂದ ಭಾರತಕ್ಕೆ 318 ಆಮ್ಲಜನಕ ಸಾಂದ್ರಕಗಳ ಪೂರೈಕೆ!
ಕೋವಿಡ್ -19 ವಿರುದ್ಧದ ಭಾರತದ ಹೋರಾಟಕ್ಕೆ ಜಾಗತಿಕ ಬೆಂಬಲ ದೊರೆತಿದೆ. 318 ಆಕ್ಸಿಜನ್ ಸಾಂದ್ರಕಗಳು ಸೋಮವಾರ ಅಮೆರಿಕಾದಿಂದ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದವು.

ಕೋವಿಡ್-19 ಪೀಡಿತರಿಗಾಗಿ 1 ಕೋಟಿ ರೂ. ದೇಣಿಗೆ ಪ್ರಕಟಿಸಿದ ನಟ ಅಕ್ಷಯ್ ಕುಮಾರ್!
ಕೋವಿಡ್-19 ಪೀಡಿತರ ನೆರವಿಗಾಗಿ ದೆಹಲಿ ಮೂಲದ ಗೌತಮ್ ಗಂಭೀರ್ ಫೌಂಡೇಶನ್ ಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 1 ಕೋಟಿ ರೂ.ದೇಣಿಗೆಯನ್ನು ಪ್ರಕಟಿಸಿದ್ದಾರೆ.

ಪ್ರತಿಯೊಬ್ಬರು ಮನೆಯಲ್ಲಿಯೇ ಇರಿ ಎಂದ ಆರ್ ಸಿಬಿ ಬಾಯ್ಸ್ -ವಿಡಿಯೋ
ಕೋವಿಡ್-19 ಎರಡನೇ ಅಲೆ ದೇಶಾದ್ಯಂತ ವ್ಯಾಪಿಸಿರುವಂತೆಯೇ ಮಾರಕ ಕೊರೋನಾವೈರಸ್ ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಮನೆಯಲ್ಲಿಯೇ ಇರುವಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಮನವಿ ಮಾಡಿಕೊಂಡಿದ್ದಾರೆ.

ವ್ಯವಸ್ಥೆಯ ವಿಫಲತೆ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಜನರಿಗೆ ನೆರವಾಗಿ- ರಾಹುಲ್ ಗಾಂಧಿ
ದೇಶದಲ್ಲಿ ಕೋವಿಡ್-19 ಕೇಸ್ ಗಳು ಹೆಚ್ಚಾಗುತ್ತಿದ್ದು,ತೀವ್ರ ಆಕ್ಸಿಜನ್ ಬಿಕ್ಕಟ್ಟು ಉದ್ಬವಿಸಿರುವಂತೆಯೇ, ಪ್ರಸ್ತುತ ವ್ಯವಸ್ಥೆ ವೈಫಲ್ಯಗೊಂಡಿದ್ದು, ಪಕ್ಷದ ಕಾರ್ಯಕರ್ತರು ಜನರಿಗೆ ನೆರವು ನೀಡುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮನವಿ ಮಾಡಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಿ-ಪ್ರಧಾನಿ ಮೋದಿ ಕರೆ
ಪ್ರಸ್ತುತ ದೇಶದ ಮುಂದೆ ಕಳೆದ ವರ್ಷಕ್ಕಿಂತ ದೊಡ್ಡದಾದ ಸವಾಲಿದ್ದು, ಗ್ರಾಮೀಣ ಪ್ರದೇಶದ ಪ್ರತಿಯೊಬ್ಬರಿಗೆ ಲಸಿಕೆ ಹಾಕಿಸುವ ಮೂಲಕ ಕೋವಿಡ್-19 ಸಾಂಕ್ರಾಮಿಕ ಹಳ್ಳಿಗಳಿಗೆ ಹರಡದಂತೆ ನೋಡಿಕೊಳ್ಳಬೇಕಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಕರೆ ಹೇಳಿದ್ದಾರೆ.

ಅಡ್ವಾನ್ಸ್ ಫಂಡಿಂಗ್ ಆಧಾರದ ಮೇಲೆ ಆರಂಭಿಕ ದರ ನಿಗದಿ: ಕೋವಿಡ್ ಲಸಿಕೆ ಬೆಲೆ ಕುರಿತು ಸೀರಮ್ ಇನ್ಸ್ಟಿಟ್ಯೂಟ್ ಸಮರ್ಥನೆ
ದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಬಳಸುತ್ತಿರುವ ಕೋವಿಡ್-19 ಲಸಿಕೆಯನ್ನು ತಯಾರಿಸುತ್ತಿರುವ ಸೀರಮ್ ಇನ್ಸ್ಟಿಟ್ಯೂಟ್ ಶನಿವಾರ ಕೋವಿಶೀಲ್ಡ್ ಲಸಿಕೆಯನ್ನು ಆರಂಭಿಕ ದರಕ್ಕಿಂತ 1.5 ಪಟ್ಟು ಹೆಚ್ಚಿಸಿರುವುದನ್ನು ಸಮರ್ಥಿಸಿಕೊಂಡಿದೆ.

ಮೋದಿ ಜೊತೆಗಿನ ಸಭೆಯಲ್ಲಿ ನೀಡಿದ ಹೇಳಿಕೆಗಳು ಟಿವಿಯಲ್ಲಿ ಪ್ರಸಾರ: ಕೇಜ್ರಿವಾಲ್ ವಿಷಾದ
ಕೋವಿಡ್ ಸಾಂಕ್ರಾಮಿಕ ಮತ್ತು ಆಸ್ಪತ್ರೆಯಲ್ಲಿ ಆಕ್ಸಿಜನ್ ಬಿಕ್ಕಟ್ಟು ಕುರಿತಂತೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆದ ವಿಡಿಯೋ ಕಾನ್ಫರೆನ್ಸ್ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾತನಾಡಿದ ವಿಡಿಯೋ ಟೆಲಿವಿಜನ್ ಗಳಲ್ಲಿ ಪ್ರಸಾರವಾಗಿರುವುದು ವಿವಾದಕ್ಕೆ ಗುರಿಯಾಗಿದೆ.

ರಾಜ್ಯಕ್ಕೆ ದಿನಕ್ಕೆ 1471 ಟನ್ ಆಮ್ಲಜನಕ, 2 ಲಕ್ಷ ಡೋಸ್ ರೆಮ್ಡಿಸಿವಿರ್ ಲಸಿಕೆ ಪೂರೈಸುವಂತೆ ಪ್ರಧಾನಿಗೆ ಸಿಎಂ ಯಡಿಯೂರಪ್ಪ ಒತ್ತಾಯ
ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ಆಮ್ಲಜನಕ ಹಾಗೂ ರೆಮ್ ಡಿಸಿವಿರ್ ಹೆಚ್ಚುವರಿ ಉತ್ಪಾದನೆ ಹಾಗೂ ಪೂರೈಕೆಗೆ ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ.

ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವ: ಪ್ರಧಾನಿ ನೇತೃತ್ವದ ಕೋವಿಡ್ ಸಭೆಯಲ್ಲಿ ಕೇಜ್ರಿವಾಲ್
ಕೋವಿಡ್-19 ಸಾಂಕ್ರಾಮಿಕದ ಎರಡನೇ ಅಲೆ ಸಂದರ್ಭದಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ದೊಡ್ಡ ದುರಂತ ಸಂಭವಿಸುವ ಸಾಧ್ಯತೆಯಿದ್ದು, ಸೇನೆ ಮೂಲಕ ಎಲ್ಲಾ ಆಕ್ಸಿಜನ್ ಪ್ಲಾಂಟ್ ಗಳನ್ನು ಕೇಂದ್ರ ಸರ್ಕಾರ ತನ್ನ ವಶಕ್ಕೆ ಪಡೆದುಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶುಕ್ರವಾರ ಹೇಳಿದ್ದಾರೆ.

