Newdelhi

ಅಮಿತ್ ಶಾಗೆ 56 ನೇ ವರ್ಷದ ಜನ್ಮ ದಿನ: ಶುಭ ಹಾರೈಸಿದ ಪ್ರಧಾನಿ ಮೋದಿ
ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಇಂದು 56 ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಅಮಿತ್ ಶಾ ಹುಟ್ಟುಹುಬ್ಬಕ್ಕೆ ಶುಭ ಹಾರೈಸಿದ್ದಾರೆ.

ಸತತ ನಾಲ್ಕನೇ ದಿನವೂ ಕೋವಿಡ್-19 ಪಾಸಿಟಿವ್ ಪ್ರಮಾಣ ಶೇ.8ಕ್ಕಿಂತಲೂ ಕಡಿಮೆ: ಕೇಂದ್ರ ಸರ್ಕಾರ
ಸತತ ನಾಲ್ಕನೇ ದಿನವೂ ಕೋವಿಡ್ ಪಾಸಿಟಿವ್ ದರ ಶೇಕಡಾ 8ಕ್ಕಿಂತಲೂ ಕಡಿಮೆಯಾಗಿದ್ದು, ಸೋಂಕು ಹರಡುವಿಕೆ ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ಬರುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ಹೇಳಿದೆ.

ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣವನ್ನು ಒಪ್ಪಿಕೊಂಡ ಕೇಂದ್ರ ಸರ್ಕಾರ
ದೇಶದಲ್ಲಿ ಕೋವಿಡ್-19 ಸಮುದಾಯ ಪ್ರಸರಣದ ಹಂತದಲ್ಲಿರುವುದನ್ನು ಇದೇ ಮೊದಲ ಬಾರಿಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಭಾನುವಾರ ಒಪ್ಪಿಕೊಂಡಿದ್ದಾರೆ.

2021 ರ ಫೆಬ್ರವರಿ ವೇಳೆಗೆ ಕೋವಿಡ್-19 ಸಕ್ರಿಯ ಪ್ರಕರಣಗಳು 40,000 ಕ್ಕಿಂತ ಕಡಿಮೆಯಾಗಲಿವೆ-ತಜ್ಞರ ಸಮಿತಿ
ಸೆಪ್ಟೆಂಬರ್ 17 ರಿಂದ ದೇಶದಲ್ಲಿ ಉತ್ತುಂಗಕ್ಕೇರಿರುವ ಕೋವಿಡ್-19 ಸಾಂಕ್ರಾಮಿಕ ರೋಗ ಒಂದು ವೇಳೆ ಸೂಕ್ತ ರೀತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಮುಂದುವರೆಸಿದರೆ ಮುಂದಿನ ವರ್ಷದ ಫೆಬ್ರವರಿಯೊಳಗೆ ಸಕ್ರಿಯ ಪ್ರಕರಣಗಳು 40 ಸಾವಿರಕ್ಕಿಂತ ಕಡಿಮೆಯಾಗಲಿವೆ ಎಂದು ಕೇಂದ್ರ ಸರ್ಕಾರ ರಚಿಸಿರುವ ತಜ್ಞರ ಸಮಿತಿ ಭಾನುವಾರ ಹೇಳಿದೆ.

ರಾಹುಲ್ ಗಾಂಧಿ ಪಾಕಿಸ್ತಾನದಲ್ಲಿ ಚುನಾವಣೆಗೆ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ದಾರೆಯೇ? ಸಂಬೀತ್ ಪಾತ್ರ
ಕೋವಿಡ್-19 ನಿರ್ವಹಣೆ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್, ಲಾಹೋರ್ ಸಾಹಿತ್ಯ ಉತ್ಸವದಲ್ಲಿ ಟೀಕಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯನ್ನು ರಾಹುಲ್ ಲಾಹೋರಿ ಎಂದು ಬಿಜೆಪಿ ಮರು ನಾಮಕರಣ ಮಾಡಿದೆ.

ಚಳಿಗಾಲದಲ್ಲಿ ಕೋವಿಡ್-19 ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ: ವಿಕೆ ಪೌಲ್
ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆ ಹೆಚ್ಚಿನ ರಾಜ್ಯಗಳಲ್ಲಿ ಸ್ಥಿರವಾಗಿರುವುದರಿಂದ ಕಳೆದ ಮೂರು ವಾರಗಳಲ್ಲಿ ಹೊಸ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ಕಡಿಮೆಯಾಗಿದೆ ಎಂದು ಹೇಳಿರುವ ನೀತಿ ಆಯೋಗದ ಸದಸ್ಯ ವಿ.ಕೆ. ಪೌಲ್, ಚಳಿಗಾಲದಲ್ಲಿ ಎರಡನೇ ಅಲೆ ಸಾಧ್ಯತೆಯನ್ನು ತಳ್ಳಿ ಹಾಕಿಲ್ಲ.

ಜಾಗತಿಕ ಹಸಿವು ಸೂಚ್ಯಂಕ: ನೇಪಾಳ, ಬಾಂಗ್ಲಾ, ಪಾಕಿಸ್ತಾನಕ್ಕಿಂತಲೂ ಕೆಳಸ್ಥಾನದಲ್ಲಿ ಭಾರತ
ಈ ಬಾರಿಯ ಜಾಗತಿಕ ಹಸಿವು ಸೂಚ್ಯಂಕ ಬಿಡುಗಡೆಯಾಗಿದ್ದು,107 ರಾಷ್ಟ್ರಗಳ ಪೈಕಿಯಲ್ಲಿ ಭಾರತ 94ನೇ ಸ್ಥಾನದಲ್ಲಿದೆ.ಆದರೆ, ನೆರೆಯ ನೇಪಾಳ, ಬಾಂಗ್ಲಾದೇಶ, ಪಾಕಿಸ್ತಾನಕ್ಕಿಂಲೂ ಭಾರತ ಕೆಳ ಸ್ಥಾನದಲ್ಲಿದೆ.

ನವೆಂಬರ್ ಮೊದಲ ವಾರದಲ್ಲಿ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳು ಭಾರತೀಯ ವಾಯುಪಡೆಗೆ ಸೇರ್ಪಡೆ
ಚೀನಾ ಜೊತೆಗಿನ ಗಡಿ ಸಂಘರ್ಘ ಮುಂದುವರೆದಿರುವಂತೆಯೇ,ನವೆಂಬರ್ ಮೊದಲ ವಾರದಲ್ಲಿ ಹರಿಯಾಣದ ಅಂಬಲಾ ವಾಯುನೆಲೆಗೆ ಮೂರ್ನಾಲ್ಕು ರಫೇಲ್ ಯುದ್ಧ ವಿಮಾನಗಳ ಆಗಮನವೊಂದಿಗೆ ಭಾರತೀಯ ವಾಯುಪಡೆಯ ಸಾಮರ್ಥ್ಯ ಮತ್ತಷ್ಟ ಪ್ರಬಲವಾಗಲಿದೆ.

ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತ ಪಡಿತರ ಪೂರೈಕೆ: ಪ್ರಧಾನಿ ಮೋದಿ
ಕೋವಿಡ್ ಸಾಂಕ್ರಾಮಿಕ ರೋಗದ ನಡುವೆ ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

