Newdelhi

ನ್ಯಾಯಾಂಗ ನಿಂದನೆ: ಪ್ರಶಾಂತ್ ಭೂಷಣ್ ಗೆ 1 ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್!
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಮೂರ್ತಿ ಎಸ್ ಎ ಬೊಬ್ಡೆ ಮತ್ತು ಉನ್ನತ ನ್ಯಾಯಾಲಯದ ಕಾರ್ಯವೈಖರಿ ಟೀಕಿಸಿ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸರ್ವೋಚ್ಚ ನ್ಯಾಯಾಲಯ 1 ರೂಪಾಯಿ ದಂಡ ವಿಧಿಸಿ ಸೋಮವಾರ ತೀರ್ಪು ನೀಡಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಟಿಕೆಗಳ ಮೇಲೆ ಗಮನ- ಪ್ರಧಾನಿ ಮೋದಿ
ಭಾರತವನ್ನು ಜಾಗತಿಕ ಆಟಿಕೆಗಳ ತಯಾರಿಕೆ ಕೇಂದ್ರವಾಗಿ ಹೊರಹೊಮ್ಮಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣನೀತಿ 2020ರಲ್ಲಿ ಆಟಿಕೆಗಳ ಮೇಲೆ ಗಮನ ಹರಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಆತುರವೇನಿಲ್ಲ- ಸಲ್ಮಾನ್ ಖುರ್ಷಿದ್
ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಆತುರವೇನಿಲ್ಲ ಎಂದು ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.ಸೋನಿಯಾ ಗಾಂಧಿ ಪ್ರಸ್ತುತ ಪಕ್ಷದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ನಾಯಕತ್ವ ವಿಚಾರವನ್ನು ಬಗೆಹರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೋವಿಡ್-19: ಅಮಿತ್ ಶಾ ಗುಣಮುಖ, ಶೀಘ್ರದಲ್ಲಿಯೇ ಡಿಸ್ಚಾರ್ಜ್- ಏಮ್ಸ್
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದ ಗುಣಮುಖರಾಗಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ- ಏಮ್ಸ್ ಶನಿವಾರ ತಿಳಿಸಿದೆ.

74 ಕ್ರೀಡಾ ಸಾಧಕರಿಗೆ ರಾಷ್ಟ್ರಪತಿಗಳಿಂದ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಿಯೊ ಪ್ಯಾರಾಲಿಂಪಿಕ್ ಚಿನ್ನದ ಪದಕ ವಿಜೇತ ಕ್ರೀಡಾಪಟು ಮರಿಯಪ್ಪನ್ ತಂಗವೇಲು, ಟೇಬಲ್ ಟೆನಿಸ್ ತಾರೆ ಮಾನಿಕಾ ಬಾತ್ರಾ ಮತ್ತು ಮಹಿಳಾ ಹಾಕಿ ತಂಡದ ನಾಯಕಿ ರಾಣಿ ರಾಂಪಾಲ್ ಅವರಿಗೆ ದೇಶದ ಅತ್ಯುನ್ನತ ಕ್ರೀಡಾ ಗೌರವ ರಾಜೀವ್ ಗಾಂಧಿ ಖೇಲ್ ರತ್ನ ನೀಡಿ ಸನ್ಮಾನಿಸಿದರು.

ಆಪ್ತ ಸ್ನೇಹಿತ ಶಿಂಜೊ ಅಬೆಗೆ ಅನಾರೋಗ್ಯ, ಮರುಗಿದ ಪ್ರಧಾನಿ ಮೋದಿ
ಜಪಾನ್ ಪ್ರಧಾನಿ ಶಿಂಜೊ ಅಬೆ ಅನಾರೋಗ್ಯಕ್ಕೀಡಾಗಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾರತ ಮತ್ತು ಜಪಾನ್ ದೇಶಗಳ ನಡುವಣ ಬಲವಾದ ಸದೃಢ ಸಂಬಂಧ ಇರುವಂತೆ ಮಾಡುವಲ್ಲಿ ಶಿಂಜೊ ಅಬೆ ಅವರ ದಿಟ್ಟ ನಾಯಕತ್ವ ಹಾಗೂ ವೈಯಕ್ತಿಕ ಬದ್ಧತೆಯನ್ನು ಶ್ಲಾಘಿಸಿದ್ದಾರೆ.

ದೇಶದಲ್ಲಿ 4 ಕೋಟಿ ಗಡಿಯತ್ತ ಕೋವಿಡ್-19 ಪರೀಕ್ಷೆಗಳು
ದೇಶದಲ್ಲಿ ಕಳೆದ ಎರಡು ವಾರಗಳಲ್ಲಿ 1 ಕೋಟಿಗೂ ಹೆಚ್ಚು ಮಾದರಿಗಳ ಪರೀಕ್ಷೆಗಳನ್ನು ನಡೆಸಲಾಗಿದ್ದು, ಒಟ್ಟಾರೇ, 3 ಕೋಟಿ 94 ಲಕ್ಷದ 77 ಸಾವಿರದ 848 ಕೋವಿಡ್- 19 ಪರೀಕ್ಷೆ ನಡೆಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರಧಾನಮಂತ್ರಿ ಜನ್ ಧನ್ ಯೋಜನೆಯಿಂದ ಮಹತ್ತರ ಬದಲಾವಣೆ- ನರೇಂದ್ರ ಮೋದಿ
ತಮ್ಮ ಸರ್ಕಾರದ ಪ್ರಮುಖ ಕಾರ್ಯಕ್ರಮ ಜನ್ ಧನ್ ಯೋಜನೆ ಅನೇಕ ಬಡತನ ನಿವಾರಣಾ ಉಪಕ್ರಮಗಳಿಗೆ ಅಡಿಪಾಯವಾಗಿ ಕಾರ್ಯನಿರ್ವಹಿಸಿದ್ದು, ಕೋಟ್ಯಂತರ ಜನರಿಗೆ ಇದರಿಂದ ಪ್ರಯೋಜನವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಲ್ಯ ಸಲ್ಲಿಸಿದ್ದ 'ಅಪರಾಧಿ ಅಲ್ಲ' ಮೇಲ್ಮನವಿ ಅರ್ಜಿ: ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.

