Newdelhi

ಬಿಜೆಪಿ 370 ಸ್ಥಾನ ಗೆಲ್ಲುವುದು ಶ್ಯಾಮ ಪ್ರಸಾದ್ ಮುಖರ್ಜಿಗೆ ಸಲ್ಲಿಸುವ ನಿಜವಾದ ಗೌರವ: ಪ್ರಧಾನಿ ಮೋದಿ
ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನಗಳನ್ನು ಬಿಜೆಪಿ ಗೆಲ್ಲುವುದು ಶ್ಯಾಮ ಪ್ರಸಾದ್ ಮುಖರ್ಜಿ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಡವರು, ದೇಶದ ಅಭಿವೃದ್ಧಿ ಹಾಗೂ ಜಾಗತಿಕ ಮಟ್ಟದಲ್ಲಿ ಗೌರವ ಸ್ಥಾನಮಾನ ಹೆಚ್ಚಳದ ಸುತ್ತ ಪ್ರಚಾರ ನಡೆಸುವಂತೆ ಪಕ್ಷದ ಸದಸ್ಯರಿಗೆ ಶನಿವಾರ ಸೂಚಿಸಿದ್ದಾರೆ.

ದೆಹಲಿಯಲ್ಲಿ ಕಮಲ್ ನಾಥ್, ಬಿಜೆಪಿ ಸೇರ್ತಾರಾ?
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಬಿಜೆಪಿ ಸೇರಬಹುದು ಎಂಬ ಊಹಾಪೋಹಗಳ ನಡುವೆ ಅವರು ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿಗೆ ಆಗಮಿಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ನವದೆಹಲಿ: ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಪೆಂಡಲ್ ಕುಸಿತ; 11 ಮಂದಿ ರಕ್ಷಣೆ
ದಕ್ಷಿಣ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ತಾತ್ಕಾಲಿಕವಾಗಿ ಹಾಕಲಾಗಿದ್ದ ಪೆಂಡಲ್ ಕುಸಿದು ಅವಶೇಷಗಳಡಿ ಸಿಲುಕಿದ್ದ 11 ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಡಿ ವಿಚಾರಣೆಗೆ ಗೈರು: ಸಿಎಂ ಕೇಜ್ರಿವಾಲ್‌ಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ನ್ಯಾಯಾಲಯ!
ಈಗ ರದ್ದುಗೊಂಡಿರುವ ಮದ್ಯ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದ ಸಮನ್ಸ್‌ಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಇಡಿ ಸಲ್ಲಿಸಿದ ದೂರಿಗೆ ಸಂಬಂಧಿಸಿದಂತೆ ದಿಲ್ಲಿ ನ್ಯಾಯಾಲಯವು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಶನಿವಾರ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ.

ನವದೆಹಲಿ: ಅಲಿಪುರ ಮಾರುಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ, ಏಳು ಮಂದಿ ಸಾವು
ಉತ್ತರ ದೆಹಲಿಯ ಅಲಿಪುರದಲ್ಲಿರುವ ದಯಾಲ್‌ಪುರ್ ಮಾರುಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ವಿಶ್ವ ಸುಂದರಿ ಸ್ಪರ್ಧೆ!
ಬಹು ನಿರೀಕ್ಷಿತ 71ನೇ ಆವೃತ್ತಿಯ ವಿಶ್ವ ಸುಂದರಿ ಸ್ಪರ್ಧೆ ಭಾರತದಲ್ಲಿ ಫೆಬ್ರವರಿ 18 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ ಎಂದು ಆಯೋಜಕರು ಶುಕ್ರವಾರ ತಿಳಿಸಿದ್ದಾರೆ. ಈ ಮೂಲಕ ಸುಮಾರು ದಶಕಗಳ ನಂತರ ಅಂತಾರಾಷ್ಟ್ರೀಯ ಸೌಂದರ್ಯ ಸ್ಪರ್ಧೆ ದೇಶಕ್ಕೆ ಮರಳುತ್ತಿದೆ.

ಸಿಎಂ ಸಿದ್ದರಾಮಯ್ಯ ಆರೋಪಕ್ಕೆ ಯಾವುದೇ ದೃಢವಾದ ಆಧಾರವಿಲ್ಲ: ಪ್ರಲ್ಹಾದ್ ಜೋಶಿ
ಕೇಂದ್ರದಿಂದ ಅನುದಾನ ಹಂಚಿಕೆಯನ್ನು ಕಡಿಮೆ ಮಾಡಲಾಗಿದೆ ಎಂಬ ಕರ್ನಾಟಕದ ಮುಖ್ಯಮಂತ್ರಿಯವರ ಆರೋಪವನ್ನು ಆಧಾರ ರಹಿತ ಎಂದು ಕರೆದಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿದ್ದರಾಮಯ್ಯ ಅವರು ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಮತ್ತು ಅವರ ಹೇಳಿಕೆಗಳಿಗೆ ಯಾವುದೇ ದೃಢ ಆಧಾರವಿಲ್ಲ ಎಂದು ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ಗೆ ಸೆಡ್ಡು, ರಾಜ್ಯ ಬಿಜೆಪಿ ಸಂಸದರಿಂದ ಧರಣಿ, ಆಕ್ರೋಶ!
ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ನಿರಂತರವಾಗಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿರುವಾಗ ಅತ್ತ ಸಂಸತ್ ಭವನದ ಗಾಂಧಿ ಪ್ರತಿಮೆ ಎದುರು ರಾಜ್ಯದ ಬಿಜೆಪಿ ಸಂಸದರು ಧರಣಿ ನಡೆಸಿದರು

ನವದೆಹಲಿ: ಗುಜರಾತ್ ಗೆ ನೀಡಿರುವ ಯೋಜನೆಗಳನ್ನು ನಮಗೂ ನೀಡಬೇಕು- ಡಿಸಿಎಂ ಡಿಕೆ ಶಿವಕುಮಾರ್
ಕೇಂದ್ರ ಸರ್ಕಾರ ಗುಜರಾತಿಗೆ ನೀಡಿರುವ ನೀತಿಗಳು, ಯೋಜನೆಗಳನ್ನು ನಮಗೂ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

