Newdelhi

ಸಂಸತ್ ಭದ್ರತಾ ಲೋಪ: ಎಲ್ಲಾ ಆರು ಆರೋಪಿಗಳನ್ನು ಒಟ್ಟಿಗೆ ಕರೆತಂದ ಪೊಲೀಸರು
ಸಂಸತ್ ಭದ್ರತಾ ಲೋಪ ಪ್ರಕರಣದ ಆರೋಪಿಗಳು ಘಟನೆಗೂ ಮುನ್ನಾ ಪರಸ್ಪರ ಹೇಳಿಕೊಂಡಿದ್ದ ಹೇಳಿಕೆಗಳು ಹೊಂದಿಕೆಯಾಗಿತ್ತೆ ಎಂಬುದನ್ನು ಪರಿಶೀಲಿಸಲು ಎಲ್ಲಾ ಆರು ಆರೋಪಿಗಳನ್ನು ದೆಹಲಿ ಪೊಲೀಸರು ಒಟ್ಟಿಗೆ ಕರೆ ತಂದಿದ್ದಾರೆ ಎಂದು ಅಧಿಕಾರಿಗಳು ಗುರುವಾರ ಹೇಳಿದ್ದಾರೆ.

ಸಿಐಎಸ್‌ಎಫ್‌ಗೆ ಸಂಸತ್ ಕಟ್ಟಡ ಭದ್ರತೆ ಹಸ್ತಾಂತರಿಸಿದ ಸರ್ಕಾರ!
ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಇತ್ತೀಚಿಗೆ ನಡೆದ ಭದ್ರತಾ ಲೋಪ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ.

ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅಣಕಿಸಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ! ವಿಡಿಯೋ
ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿಂದು ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು.

2024 ಲೋಕಸಭಾ ಚುನಾವಣೆ: ಇಂದು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ, ಸೀಟ್ ಹಂಚಿಕೆ, ಕಾರ್ಯತಂತ್ರ ಕುರಿತು ಚರ್ಚೆ
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರವನ್ನು ಪುನರ್ ರೂಪಿಸುವ ಕುರಿತು ಚರ್ಚಿಸಲು ಪ್ರತಿಪಕ್ಷಗಳ ಇಂಡಿಯಾ ಮೈತ್ರಿಕೂಟ ಮಂಗಳವಾರ ಮಹತ್ವದ ಸಭೆ ನಡೆಸಲಿದೆ.

ನವದೆಹಲಿ: 1.38 ಲಕ್ಷ ರೂ. ನೀಡಿ ಕಾಂಗ್ರೆಸ್ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ
ಕಾಂಗ್ರೆಸ್ ಪಕ್ಷದ ದೇಶಕ್ಕಾಗಿ ದೇಣಿಗೆ ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರೂ. 1.38 ಲಕ್ಷ ದೇಣಿಗೆ ನೀಡುವ ಮೂಲಕ ಸೋಮವಾರ ಇಲ್ಲಿ ಚಾಲನೆ ನೀಡಿದರು.ಉತ್ತಮ ಭಾರತ ಭಾರತ ನಿರ್ಮಿಸುವ ನಿಟ್ಟಿನಲ್ಲಿ ಬೆಂಬಲಿಗರು ಹಣವನ್ನು ದೇಣಿಗೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ.

ನವದೆಹಲಿ: ಮಿನಿ ಬಸ್ ಬಾನೆಟ್ ಮೇಲೆ ವ್ಯಕ್ತಿಯನ್ನು ಕೆಲದೂರ ಎಳೆದೊಯ್ದ ಚಾಲಕ! ವಿಡಿಯೋ
ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ರಸ್ತೆಯಲ್ಲಿ ಪುಂಡಾಟ ಪ್ರಕರಣದಲ್ಲಿ ಮಿನಿ ಬಸ್ ವೊಂದು ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆದ ನಂತರ ಕೆಲದೂರ ಬಾನೆಟ್ ಮೇಲೆ ವ್ಯಕ್ತಿಯನ್ನು ಎಳೆದೊಯ್ದಿರುವ ಘಟನೆ ನಡೆದಿದೆ. ಭಾನುವಾರ ತಡರಾತ್ರಿ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.

ದೇಶವನ್ನು ಜಾತಿ ಹೆಸರಿನಲ್ಲಿ ವಿಭಜಿಸುವ ಯತ್ನ: ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನ ನಂತರ ಪ್ರಧಾನಿ ಮೋದಿ
ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ಮೂರರಲ್ಲಿ ಬಿಜೆಪಿಯ ಐತಿಹಾಸಿಕ ಹಾಗೂ ಅಭೂತಪೂರ್ವ ವಿಜಯವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ ಶ್ಲಾಘಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿರುವ ಬಿಜೆಪಿ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಎದುರಾಳಿಯಿಂದ ಕಸಿದುಕೊಂಡಿದ್ದು, ಕಾಂಗ್ರೆಸ್ ಗೆ ಸೋಲಾಗಿದೆ.

ಇಂದು ಖರ್ಗೆ ಚೇಂಬರ್‌ನಲ್ಲಿ INDIA ನಾಯಕರ ಸಭೆ
ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ INDIA ಮೈತ್ರಿಕೂಟದ ವಿವಿಧ ವಿರೋಧ ಪಕ್ಷಗಳ ನಾಯಕರು ಉಭಯ ಸದನಗಳಲ್ಲಿ ತಮ್ಮ ಕಾರ್ಯತಂತ್ರವನ್ನು ರೂಪಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಕೊಠಡಿಯಲ್ಲಿ ಇಂದು ಭೇಟಿಯಾಗಲಿದ್ದಾರೆ.

2022-23 ಹಣಕಾಸು ವರ್ಷದಲ್ಲಿ 720 ಕೋಟಿ ರೂ. ದೇಣಿಗೆ ಪಡೆದ ಬಿಜೆಪಿ: ಚುನಾವಣಾ ಆಯೋಗ
2022-23ರ ಹಣಕಾಸು ವರ್ಷದಲ್ಲಿ ಬಿಜೆಪಿ ತನ್ನ ಘಟಕಗಳು, ಚುನಾವಣಾ ಟ್ರಸ್ಟ್‌ಗಳು, ವ್ಯಕ್ತಿಗಳು ಮತ್ತು ಶಾಸಕರಿಂದ ಸುಮಾರು 720 ಕೋಟಿ ರೂಪಾಯಿಗಳನ್ನು ದೇಣಿಗೆಯಾಗಿ ಸ್ವೀಕರಿಸಿದೆ.

