Newdelhi

ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ- ಬಸವರಾಜ ಬೊಮ್ಮಾಯಿ ಭೇಟಿ, ಹಲವು ವಿಷಯ ಕುರಿತು ಚರ್ಚೆ
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

ನವದೆಹಲಿ: ಜಂತರ್ ಮಂತರ್ ನಲ್ಲಿ ಭಾರತೀಯ ಯುವ ಕಾಂಗ್ರೆಸ್ ಪ್ರತಿಭಟನೆ!
ಮಣಿಪುರದಲ್ಲಿನ ಹಿಂಸಾಚಾರ ಸೇರಿದಂತೆ ದೇಶದಲ್ಲಿನ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಭಾರತೀಯ ಯುವ ಕಾಂಗ್ರೆಸ್ ಸದಸ್ಯರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಸಿದರು.

ದೆಹಲಿಯ ಮೊಹಲ್ಲಾ ಕ್ಲಿನಿಕ್ ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ; ಸೌಲಭ್ಯ ವೀಕ್ಷಣೆ!
ರಾಷ್ಟ್ರ ರಾಜಧಾನಿಯ ಪಂಚಶೀಲ್ ಪಾರ್ಕ್ನಲ್ಲಿರುವ 'ಆಮ್ ಆದ್ಮಿ ಮೊಹಲ್ಲಾ' ಕ್ಲಿನಿಕ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿದ್ದಾರೆ.

ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ: ಸತ್ಯಕ್ಕೆ ಇಂದಲ್ಲಾ ನಾಳೆ ಗೆಲುವು ಸಿಕ್ಕೇ ಸಿಗುತ್ತೆ- ರಾಹುಲ್ ಗಾಂಧಿ
'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿರುವುದಕ್ಕೆ ಕಾಂಗ್ರೆಸ್ ಪಾಳಯದಲ್ಲಿ ಗೆಲುವಿನ ಸಂಭ್ರಮ ಮನೆ ಮಾಡಿದೆ.

ಬಿಜೆಪಿ ಸಂಘಟಿತ ದ್ವೇಷವನ್ನು ಹುಟ್ಟುಹಾಕಿದೆ: ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ
ಕಳೆದ ಐದು ವರ್ಷಗಳಲ್ಲಿ ಕೇವಲ 12.2 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗಿದ್ದು, ಊಹಿಸಲಾಗದ ರೀತಿಯಲ್ಲಿ ನಿರುದ್ಯೋಗವಿದ್ದು, ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದು ಹೇಳಿರುವ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯು ಹುಟ್ಟುಹಾಕಿದ ಸಂಘಟಿತ ದ್ವೇಷದ ಪರಿಸ್ಥಿತಿಯ ಈ ದುರಂತಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಖರ್ಗೆ ಸಮ್ಮುಖದಲ್ಲಿ ಬಿಆರ್ ಎಸ್ ನಾಯಕರು ಕಾಂಗ್ರೆಸ್ ಸೇರ್ಪಡೆ!
ಭಾರತ್ ರಾಷ್ಟ್ರ ಸಮಿತಿ ಸರ್ಕಾರದ ಮಾಜಿ ಸಚಿವ ಜೂಪಲ್ಲಿ ಕೃಷ್ಣರಾವ್, ಮಾಜಿ ಶಾಸಕ ಗುರುನಾಥ ರೆಡ್ಡಿ ಮತ್ತಿತರ ತೆಲಂಗಾಣದ ಕೆಲವು ನಾಯಕರು ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾದರು.

'ನನಗೆ ಮದುವೆಯಾಗಿ 45 ವರ್ಷಗಳಾಗಿವೆ, ಎಂದಿಗೂ ಕೋಪಗೊಂಡಿಲ್ಲ': ಸ್ವಾರಸ್ಯಕರ ಚರ್ಚೆಗೆ ಕಾರಣವಾದ ಸಭಾಪತಿ!
ಸಂಸತ್ತಿನ ಪ್ರಸಕ್ತ ಮುಂಗಾರು ಅಧಿವೇಶನ ವಿಪಕ್ಷಗಳ ಪ್ರತಿಭಟನೆ, ಪದೇ ಪದೇ ಅಡ್ಡಿಪಡಿಸುವುದು, ಕೋಲಾಹಲದಿಂದಾಗಿ ಇಲ್ಲಿಯವರೆಗೂ ಸರಿಯಾಗಿ ಕಲಾಪ ನಡೆಯದೇ ಮುಂದೂಡಲಾಗುತ್ತಿದೆ.ಈ ಮಧ್ಯೆ ಇಂದು ರಾಜ್ಯಸಭೆ ಸ್ವಾರಸ್ಯಕರ ಪ್ರಸಂಗವೊಂದಕ್ಕೆ ಸಾಕ್ಷಿಯಾಯಿತು.

ನಿತಿನ್ ಗಡ್ಕರಿ- ಸಿಎಂ ಸಿದ್ದರಾಮಯ್ಯ ಭೇಟಿ: ಬೆಂಗಳೂರು- ಮೈಸೂರು ಹೆದ್ದಾರಿ ಸಮಸ್ಯೆ ಕುರಿತು ಚರ್ಚೆ
ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸುತ್ತಿರುವ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಶಿರಾಡಿ ಘಾಟಿಯಲ್ಲಿ ಸುರಂಗ ಮಾರ್ಗ ನಿರ್ಮಾಣ ಕುರಿತು ಮಾತುಕತೆ ನಡೆಸಿದ್ದಾರೆ.

ರೈತರ ಬೇಡಿಕೆ ಮೇರೆಗೆ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: ಡಿಸಿಎಂ ಡಿಕೆ ಶಿವಕುಮಾರ್
ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

