Newdelhi

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ಮೈಸೂರು ಪೇಟ ತೊಡಿಸಿ, ಅಂಬಾರಿ ಪ್ರತಿಕೃತಿ ಕೊಟ್ಟು ಸನ್ಮಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗುರುವಾರ ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ಆಗಸ್ಟ್ 3 ರಂದು ಪ್ರಧಾನಿ ಮೋದಿ ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 3 ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೆಲವು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದಾರೆ.

ಶೇ.88 ರಷ್ಟು 2000 ರೂಪಾಯಿ ನೋಟುಗಳು ಬ್ಯಾಂಕ್ ಗಳಿಗೆ ವಾಪಸ್: ಆರ್ ಬಿಐ
ಮೇ ತಿಂಗಳಲ್ಲಿ ಹೆಚ್ಚಿನ ಮೌಲ್ಯದ ರೂ. 2,000 ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ ರೂ 3.14 ಲಕ್ಷ ಕೋಟಿ ಮೌಲ್ಯದ ಶೇ. 88 ರಷ್ಟು ರೂ. 2,000 ನೋಟುಗಳು ಬ್ಯಾಂಕ್ ಗಳಿಗೆ ವಾಪಸ್ಸಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ತಿಳಿಸಿದೆ.

ಮಣಿಪುರ ಪ್ರಕರಣ: ಎಫ್ ಐಆರ್ ದಾಖಲಿಸುವಲ್ಲಿ ವಿಳಂಬಕ್ಕೆ 'ಸುಪ್ರೀಂ' ಕಿಡಿ; ಮುಂದಿನ ವಿಚಾರಣೆಗೆ ಹಾಜರಾಗುವಂತೆ ಡಿಜಿಪಿಗೆ ಸಮನ್ಸ್!
ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಹಾಗೂ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ವಿಡಿಯೋ ಕುರಿತು ಎಫ್ ಐಆರ್ ದಾಖಲಿಸುವಲ್ಲಿ ವಿಳಂಬವಾಗಿರುವುದಕ್ಕೆ ಕಿಡಿಕಾರಿರುವ ಸುಪ್ರೀಂಕೋರ್ಟ್, ಮುಂದಿನ ವಿಚಾರಣೆಯನ್ನು ಆಗಸ್ಟ್ 7 ರಂದು ನಿಗದಿಪಡಿಸಿದ್ದು, ಅಂದು ಮಧ್ಯಾಹ್ನ 2 ಗಂಟೆಗೆ ಮಣಿಪುರದ ಡಿಜಿಪಿ ನ್ಯಾಯಾಲಾಯದ ಮುಂದೆ ಹಾಜರಾಗಬೇಕ ಎಂದು ನಿರ್ದೇಶನ ನೀಡಿದೆ.

2022-23ನೇ ಹಣಕಾಸು ವರ್ಷದಲ್ಲಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆ!
2022-23ರ ಹಣಕಾಸು ವರ್ಷದಲ್ಲಿ ಗಳಿಸಿದ ಆದಾಯಕ್ಕಾಗಿ ಸುಮಾರು 5.83 ಕೋಟಿ ಐಟಿ ರಿಟರ್ನ್ಸ್ ಸಲ್ಲಿಕೆಯಾಗಿದೆ. ಇದು ಕಳೆದ ವರ್ಷ ಜುಲೈ 31 ರವರೆಗೆ ಸಲ್ಲಿಕೆಯಾಗಿದ್ದ ಐಟಿಆರ್ಗಳ ಸಂಖ್ಯೆಯನ್ನು ಮೀರಿಸಿದೆ.

ಇಂಡಿಯಾ ಕೌಚರ್ ವೀಕ್ 2023: ಆಕರ್ಷಕ ಫ್ಯಾಶನ್ ಶೋನಲ್ಲಿ ಬಾಲಿವುಡ್ ಬೆಡಗಿಯರು- PHOTOS
ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ 2023ರ ಇಂಡಿಯಾ ಕೌಚರ್ ವೀಕ್ ಫ್ಯಾಶನ್ ಶೋ ನಲ್ಲಿ ಬಾಲಿವುಡ್ ನಟಿಯರು ಪ್ರದರ್ಶನ ನೀಡುವ ಮೂಲಕ ಮಿಂಚು ಹರಿಸಿದರು.

ನೂತನ ರಾಷ್ಟ್ರೀಯ ಶಿಕ್ಷಣ ನೀತಿ ದೇಶದ ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ: ಪ್ರಧಾನಿ ಮೋದಿ
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ದೇಶದ ಪ್ರತಿಯೊಂದು ಭಾಷೆಗೆ ಗೌರವ ಮತ್ತು ಮನ್ನಣೆ ನೀಡುತ್ತದೆ ಎಂದು ಶನಿವಾರ ಹೇಳಿರುವ ಪ್ರಧಾನಿ ನರೇಂದ್ರ ಮೋದಿ, ತಮ್ಮ ಸ್ವಾರ್ಥಕ್ಕಾಗಿ ಭಾಷೆಯನ್ನು ರಾಜಕೀಯಗೊಳಿಸಲು ಪ್ರಯತ್ನಿಸುವವರು ತಮ್ಮ ಅಂಗಡಿಗಳನ್ನು ಮುಚ್ಚಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹಲ್ಲೆ ಪ್ರಕರಣದಲ್ಲಿ 2 ಎಫ್ಐಆರ್ ರದ್ದುಗೊಳಿಸಿದ ಹೈಕೋರ್ಟ್; 400 ಮರ ನೆಡಲು ಕಕ್ಷಿದಾರರಿಗೆ ನಿರ್ದೇಶನ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಎರಡು ಕುಟುಂಬಗಳ ಸದಸ್ಯರು ತಮ್ಮ ಪ್ರದೇಶದಲ್ಲಿ 400 ಸಸಿಗಳನ್ನು ನೆಟ್ಟು ಸಮಾಜಕ್ಕೆ ಕೊಡುಗೆ ನೀಡುವ ಮೂಲಕ ಅವರ ನಕಾರಾತ್ಮಕ ಆಲೋಚನೆ ಕೊನೆಗೊಳಿಸುವಂತೆ ದೆಹಲಿ ಹೈಕೋರ್ಟ್ ಸೂಚಿಸಿದೆ.

2022-23ನೇ ಸಾಲಿಗೆ ಇಪಿಎಫ್ ಠೇವಣಿಗೆ ಶೇ.8.15 ಬಡ್ಡಿ ದರ ನಿಗದಿಪಡಿಸಲು ಕೇಂದ್ರ ಸರ್ಕಾರದ ಅನುಮೋದನೆ
2022-23ನೇ ಸಾಲಿನ ಕಾರ್ಮಿಕರ ಭವಿಷ್ಯ ನಿಧಿ (ಇಪಿಎಫ್) ಠೇವಣಿ ಮೇಲೆ ಒದಗಿಸುವ ಬಡ್ಡಿ ದರವನ್ನು ಶೇ. 8.15ಕ್ಕೆ ನಿಗದಿಪಡಿಸಲು ಸರ್ಕಾರ ಅನುಮೋದಿಸಿದೆ.

