Newdelhi

ಅಪ್ರಾಪ್ತ ವಯಸ್ಸಿನ ಬಾಲಕಿಗೆ 20 ಬಾರಿ ಇರಿದು ಹತ್ಯೆ: ರಾಷ್ಟ್ರ ರಾಜಧಾನಿಯಲ್ಲಿ ಪೈಶಾಚಿಕ ಕೃತ್ಯ, ರಕ್ಕಸ ಪ್ರೇಮಿ ಸೆರೆ
ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. 16 ವರ್ಷದ ಅಪ್ರಾಪ್ತಗೆ 20 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಕುಸ್ತಿಪಟುಗಳು ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವಂತಿಲ್ಲ; ಬೇರೆ ಕಡೆ ಅವಕಾಶ: ದೆಹಲಿ ಪೊಲೀಸರು
ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ಕಳೆದೊಂದು ತಿಂಗಳಿನಿಂದ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ನಿನ್ನೆ ಅಲ್ಲಿಂದ ಅವರನ್ನು ತೆರವುಗೊಳಿಸಿದ ನಂತರ ಅಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಕರ್ನಾಟಕ ಆಯ್ತು, ಈಗ ರಾಜಸ್ಥಾನ ಬಿಕ್ಕಟ್ಟು ಪರಿಹಾರಕ್ಕೆ ಮುಂದಾದ ಖರ್ಗೆ!
ಕರ್ನಾಟಕ ಕಾಂಗ್ರೆಸ್ ನಲ್ಲಿನ ಬಣ ರಾಜಕೀಯ ಬಿಕ್ಕಟ್ಟು ಪರಿಹರಿಸಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಒಗ್ಗೂಡಿಸುವಲ್ಲಿ ಯಶಸ್ವಿಯಾದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈಗ, ರಾಜಸ್ಥಾನದಲ್ಲಿಯೂ ಇದೇ ಸೂತ್ರವನ್ನು ಅನುಸರಿಸಲು ಮುಂದಾಗಿದ್ದಾರೆ.

ಕುಸ್ತಿಪಟುಗಳ ತಿರುಚಿದ ಫೋಟೋ: ಹೀಗೆ ಮಾಡಲು ನಾಚಿಕೆ ಆಗಲ್ವಾ; ಸಾಕ್ಷಿ ಮಲ್ಲಿಕ್, ಉರ್ಫಿ ಜಾವೆದ್ ಕಿಡಿ
ಭಾರತೀಯ ಕುಸ್ತಿ ಅಸೋಸಿಯೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ನಿನ್ನೆ ದಿನ ಪ್ರತಿಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಬಂಧಿಸಿ, ಎಫ್ ಐಆರ್ ಕೂಡಾ ದಾಖಲಾಗಿದೆ.

ಆರ್ಥಿಕ ಬಿಕ್ಕಟ್ಟು: ಮೇ 28 ರವರೆಗೆ ಎಲ್ಲಾ ಗೋ ಫಸ್ಟ್ ವಿಮಾನ ರದ್ದು
ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಗೋ ಫಸ್ಟ್ ವಿಮಾನಯಾನ ಸಂಸ್ಥೆ ಮೇ 28 ರವರೆಗೆ ತನ್ನ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಿದೆ. ಈ ಹಿಂದೆ ಮೇ. 26 ರವರೆಗೆ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿತ್ತು.

'ಪ್ರಜಾಪ್ರಭುತ್ವದ ದೇಗುಲ' ನೂತನ ಸಂಸತ್ ಭವನ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ!
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ತಲೆಯೆತ್ತಿ ನಿಂತಿರುವ ಪ್ರಜಾಪ್ರಭುತ್ವದ ನೂತನ ದೇಗುಲ 'ಸಂಸತ್ ಭವನ'ವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಲೋಕಾರ್ಪಣೆಗೊಳಿಸಿದರು.

ನಾಳೆ ನೂತನ ಸಂಸತ್ ಭವನ ಉದ್ಘಾಟನೆ: ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ
ನಾಳೆ ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ. ನೂತನ ಕಟ್ಟಡದ ಸುತ್ತಲೂ ಸುಮಾರು 70 ಪೊಲೀಸರನ್ನು ನಿಯೋಜಿಸಲಾಗಿದೆ.

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ
ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.

ನೂತನ ಸಂಸತ್ ಭವನ: ಟ್ವಿಟರ್ ನಲ್ಲಿ ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನದ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ಇದು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುತ್ತದೆ ಎಂದು ಹೇಳಿದ್ದಾರೆ.

