Newdelhi

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಕೇಂದ್ರದ ನಿರ್ಬಂಧ: ಫೆ. 6 ರಂದು ಪಿಐಎಲ್ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
2002ರ ಗುಜರಾತ್ ಗಲಭೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋ
ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.

'ವಿಮಾನ ಹೈಜಾಕ್ ಟ್ವೀಟ್' ಸ್ಪೈಸ್ ಜೆಟ್ ಪ್ರಯಾಣಿಕ ಜೈಲಿಗೆ!
ವಿಮಾನ ವಿಳಂಬದಿಂದ ಅಸಮಾಧಾನಗೊಂಡ 29 ವರ್ಷದ ಯುವಕನೊಬ್ಬ, ದುಬೈಯಿಂದ ಭಾರತಕ್ಕೆ ತೆರಳುತ್ತಿದ್ದ ಸ್ಪೈಸ್ ಜೆಟ್ ವಿಮಾನವನ್ನು ಹೈಜಾಕ್ ಮಾಡಲಾಗಿದೆ ಎಂದು ಟ್ವೀಟರ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾನೆ.

ಪ್ರಧಾನಿ ಮೋದಿ ಕುರಿತ ಬಿಬಿಪಿ ಸಾಕ್ಷ್ಯಚಿತ್ರ ಪ್ರದರ್ಶನ: ಬಂಧಿತ 13 ಜಾಮಿಯಾ ವಿದ್ಯಾರ್ಥಿಗಳ ಬಿಡುಗಡೆ
2002ರ ಹಿಂಸಾಚಾರ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಆಯೋಜಿಸಿದ್ದಕ್ಕಾಗಿ ಬಂಧಿತರಾಗಿದ್ದ ಜಾಮಿಯಾ ಮಿಲಿಯಾ ಇಸ್ಲಾಮಿಯಾದ 13 ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜ.30ಕ್ಕೆ ಭಾರತ್ ಜೋಡೋ ಯಾತ್ರೆ ಸಮಾರೋಪ ಸಮಾರಂಭ: ಕಾಂಗ್ರೆಸ್ ಆಹ್ವಾನ ತಿರಸ್ಕರಿಸಿದ ಜೆಡಿಯು
ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜನವರಿ 30 ರಂದು ನಡೆಯಲಿರುವ 'ಭಾರತ್ ಜೋಡೋ' ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯುಗೆ ಕಾಂಗ್ರೆಸ್ ಆಹ್ವಾನ ನೀಡಿದೆ. ಆದರೆ, ಈ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಜೆಡಿಯು ಅಧ್ಯಕ್ಷ ಲಾಲನ್ ಸಿಂಗ್ ಗುರುವಾರ ಹೇಳಿದ್ದಾರೆ.

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಸೇರಿ ಹಲವು ಗಣ್ಯರ ಅಭಿನಂದನೆ
2023ನೇ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಿ ನರೇಂದ್ರ ಮೋದಿ , ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತದ ಆರ್ಥಿಕತೆ ಒಂದಾಗಿದೆ- ರಾಷ್ಟ್ರಪತಿ ದ್ರೌಪದಿ ಮುರ್ಮು
ಕೋವಿಡ್ ಸಾಂಕ್ರಾಮಿಕದ ಪರಿಣಾಮದಿಂದ ಆರ್ಥಿಕತೆಯ ಬಹುತೇಕ ಕ್ಷೇತ್ರಗಳು ಅಲುಗಾಡಿದ್ದು, ಸರ್ಕಾರದ ಸಮಯೋಚಿತ ಮತ್ತು ಸಕ್ರಿಯ ಮಧ್ಯಸ್ಥಿಕೆಯಿಂದಾಗಿ ವಿಶ್ವದಲ್ಲಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಭಾರತದ ಆರ್ಥಿಕತೆ ಒಂದಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ.

ಪ್ರಧಾನಿ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರ ಪ್ರದರ್ಶನ: ಜೆಎನ್ ವಿವಿ ಕ್ಯಾಂಪಸ್ ನಲ್ಲಿ ಉದ್ವಿಗ್ನತೆ
ಪ್ರಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲು ಜೆಎನ್ ಯು ವಿದ್ಯಾರ್ಥಿಗಳ ಒಕ್ಕೂಟ ಉದ್ದೇಶಿಸಿತ್ತು. ಆದರೆ, ಯೂನಿಯನ್ ಕಚೇರಿಯಲ್ಲಿ ವಿದ್ಯುತ್ ಹಾಗೂ ಇಂಟರ್ ನೆಂಟ್ ಸಂಪರ್ಕವನ್ನು ವಿವಿ ಆಡಳಿತ ಕಡಿತಗೊಳಿಸಿದ್ದರಿಂದ ಸಾಕ್ಷ್ಯಚಿತ್ರ ಪ್ರದರ್ಶಿಸಲು ಸಾಧ್ಯವಾಗಲಿಲ್ಲ ಎಂದು ಒಕ್ಕೂಟ ಆರೋಪಿಸಿದೆ.

ಮ್ಯೂಸಿಕ್ ಸ್ಟ್ರೀಮಿಂಗ್ ಸಂಸ್ಥೆ Spotify ನ ಶೇ.6 ರಷ್ಟು ಉದ್ಯೋಗಿಗಳು ವಜಾ
ಮ್ಯೂಸಿಕ್ ಸ್ಟ್ರೀಮಿಂಗ್ ಸಂಸ್ಥೆ ಸ್ಪಾಟಿಪೈ ಟೆಕ್ನಾಲಜಿ ತನ್ನ ಸಿಬ್ಬಂದಿಯ ಶೇಕಡಾ 6 ರಷ್ಟು ಅಂದರೆ ಸರಿಸುಮಾರು 600 ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಇದರೊಂದಿಗೆ ಇತ್ತೀಚಿಗೆ ಉದ್ಯೋಗ ಕಡಿತ ಘೋಷಿಸಿದ ಅಮೆಜಾನ್, ಮೆಟಾ ಫ್ಲಾಟ್ ಫಾರ್ಮ್ ನಂತಹ ಕಂಪನಿಗಳೊಂದಿಗೆ ಸ್ಪಾಟಿಫೈ ಸಂಸ್ಥೆಯೂ ಸೇರುತ್ತಿದೆ ಎಂದು ವರದಿಗಳು ತಿಳಿಸಿವೆ.

