Newdelhi

ಕೇಂದ್ರ ಜಲಶಕ್ತಿ ಸಚಿವ ಶೇಖಾವತ್, ಗೋವಿಂದ ಕಾರಜೋಳ ಭೇಟಿ: ರಾಜ್ಯದ ನೀರಾವರಿ ಯೋಜನೆಗಳ ಅನುಮೋದನೆಗೆ ಕೋರಿಕೆ
ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಂದು ನವ ದೆಹಲಿಯಲ್ಲಿ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಕೇಂದ್ರದಲ್ಲಿ ಬಾಕಿ ಇರುವ ಅನುಮೋದನೆಗಳನ್ನು ದೊರಕಿಸಿ ಕೊಡುವಂತೆ ವಿನಂತಿಸಿದರು.

ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೇಂದ್ರ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಡಿಢೀರ್ ಭೇಟಿ, ಪರಿಶೀಲನೆ
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಂದು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಈ ಬಾರಿಯ ಮೋದಿ- ಪುಟಿನ್ ವಾರ್ಷಿಕ ಶೃಂಗಸಭೆ ರದ್ದು?
ದಿನಾಂಕ ನಿಗದಿಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ಈ ವರ್ಷ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸಬೇಕಾಗಿದ್ದ ವಾರ್ಷಿಕ ದ್ವಿಪಕ್ಷೀಯ ಶೃಂಗಸಭೆ ಈ ಬಾರಿ ನಡೆಯುವ ಸಾಧ್ಯತೆಯಿಲ್ಲ ಎಂದು ಮೂಲಗಳು ಹೇಳಿವೆ.

ಕೈಗಾರಿಕಾ ವಿವಾದ ಕಾಯ್ದೆಯಂತೆ ಉದ್ಯೋಗಿಗಳನ್ನು ವಜಾಗೊಳಿಸಬೇಕು, ಇಲ್ಲದಿದ್ದರೆ ಅದು ಕಾನೂನು ಬಾಹಿರ: ಕೇಂದ್ರ ಕಾರ್ಮಿಕ ಸಚಿವ
ಯಾವುದೇ ಹಿಂಬಡ್ತಿ ಮತ್ತು ವಜಾಗೊಳಿಸುವಿಕೆಯನ್ನು ಕೈಗಾರಿಕಾ ವಿವಾದಗಳ ಕಾಯ್ದೆಯ ನಿಬಂಧನೆಗಳ ಪ್ರಕಾರ ಕೈಗೊಳ್ಳಬೇಕು, ಇಲ್ಲದಿದ್ದರೆ ಅದನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ಎಂದು ಕಾರ್ಮಿಕ ಮತ್ತು ಉದ್ಯೋಗ ಸಚಿವ ಭೂಪೇಂದರ್ ಯಾದವ್ ಗುರುವಾರ ಹೇಳಿದ್ದಾರೆ.

ನಕಲಿ ಸುದ್ದಿ ಹರಡುವ ಸಾಮಾಜಿಕ ಮಾಧ್ಯಮಗಳಿಂದ ಚುನಾವಣೆ ಮೇಲೆ ಪರಿಣಾಮ: ಮುಖ್ಯ ಚುನಾವಣಾ ಆಯುಕ್ತ
ನಕಲಿ ಸುದ್ದಿ ಹರಡುತ್ತಿರುವ ಸಾಮಾಜಿಕ ಮಾಧ್ಯಮಗಳು ಮುಕ್ತ ಮತ್ತು ನ್ಯಾಯಸಮ್ಮತವಾದ ಚುನಾವಣೆಗಳ ಮೇಲೆ ಪರಿಣಾಮ ಬೀರುತ್ತಿದ್ದು, ಚುನಾವಣಾ ನಿರ್ವಹಣಾ ಸಂಸ್ಥೆಗಳಿಗೆ ಸಾಮಾನ್ಯ ಸವಾಲಾಗಿ ಹೊರಹೊಮ್ಮುತ್ತಿವೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮಂಗಳವಾರ ಹೇಳಿದ್ದಾರೆ.

ಚಳಿಗಾಲದ ಸಂಸತ್ ಅಧಿವೇಶನ: ನಿರುದ್ಯೋಗ, ಬೆಲೆ ಏರಿಕೆ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳ ಆಗ್ರಹ
ಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು.

ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಎನ್ ಸಿಪಿ ಸೇರ್ಪಡೆ ಸಾಧ್ಯತೆ
ಕಾಂಗ್ರೆಸ್ ಪಕ್ಷದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿರುವ ಹಿರಿಯ ಮುಖಂಡ ಶಶಿ ತರೂರ್ ಎನ್ ಸಿಪಿ ಸೇರುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಗೆ ಡಿಸೆಂಬರ್ 21 ರವರೆಗೂ ನ್ಯಾಯಾಂಗ ಬಂಧನ
200 ಕೋಟಿ ರೂ. ಸುಲಿಗೆ ಪ್ರಕರಣದಲ್ಲಿ ವಂಚಕ ಸುಕೇಶ್ ಚಂದ್ರಶೇಖರ್ ಆಪ್ತೆ ಪಿಂಕಿ ಇರಾನಿಯನ್ನು ಡಿ.21ರವರೆಗೂ ದೆಹಲಿ ನ್ಯಾಯಾಲಯವೊಂದು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಡಿಸೆಂಬರ್ 21ರಿಂದ ಧರ್ಮ ರಕ್ಷಾ ಅಭಿಯಾನ: ವಿಹೆಚ್ ಪಿಯಿಂದ 'ಲವ್ ಜಿಹಾದ್' ಆರೋಪದ ಸುಮಾರು 400 ಕೇಸ್ ಗಳ ಪಟ್ಟಿ ಬಿಡುಗಡೆ
ಕಳೆದ ಕೆಲವು ವರ್ಷಗಳಲ್ಲಿ 420ಕ್ಕೂ ಹೆಚ್ಚು 'ಲವ್ ಜಿಹಾದ್' ಪ್ರಕರಣಗಳು ವರದಿಯಾಗಿರುವುದಾಗಿ ವಿಶ್ವ ಹಿಂದೂ ಪರಿಷತ್ ಜಂಟಿ ರಾಷ್ಟ್ರೀಯ ಕಾರ್ಯದರ್ಶಿ ಡಾ. ಸುರೇಂದ್ರ ಜೈನ್ ಆರೋಪಿಸಿದ್ದಾರೆ.

