Nitish Kumar

ನಿತೀಶ್ ಕುಮಾರ್ಗೆ ರಾಷ್ಟ್ರ ರಾಜಕಾರಣಕ್ಕೆ ಸ್ವಾಗತ; ಬಿಹಾರ ಸಿಎಂ ಆಗಿ "ಅದ್ಭುತ" ಅವಧಿ: ಅಮಿತ್ ಶಾ
ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರ ಅವಧಿ "ಅದ್ಭುತ" ಎಂದ ಅಮಿತ್ ಶಾ, ಈ ಅವಧಿಯಲ್ಲಿ ಅವರು ಬಿಹಾರದ ಪ್ರಗತಿಗೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ ಎಂದು ಒತ್ತಿ ಹೇಳಿದ್ದಾರೆ.

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar
75 ವರ್ಷದ ಹಿರಿಯ ನಾಯಕ ನಿತೀಶ್ ಕುಮಾರ್, ಕಳೆದ ವರ್ಷದ ನವೆಂಬರ್‌ನಲ್ಲಿ ದಾಖಲೆ 10ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ರಾಜ್ಯದ ಜನರು ನಿರಂತರವಾಗಿ ತಮಗೆ ವಿಶ್ವಾಸ ತೋರಿಸಿದ್ದಕ್ಕೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ
ನಿತೀಶ್ ಕುಮಾರ್ ಅವರು ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರೊಂದಿಗೆ ಸೇರಿ ನಾಮಪತ್ರ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಜರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?
ಜೆಡಿಯು ನಾಯಕ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಗ್ಗೆ ದೊಡ್ಡ ಸುದ್ದಿ ಬರುತ್ತಿದೆ. ನಿತಿಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಂಸತ್ತಿನ ಮೇಲ್ಮನೆಗೆ (ರಾಜ್ಯಸಭೆ) ನಾಮಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

Watch | 'ಯೇ ಜೋ ಲಡ್ಕಿ ಹೈ': ರಾಬ್ರಿ ದೇವಿ ಬಗ್ಗೆ ನಿತೀಶ್ ಹೇಳಿಕೆ!

ನಿತೀಶ್ ಕುಮಾರ್ಗೆ ಭಾರತ ರತ್ನ ನೀಡಬೇಕೆಂದು ಕೆ.ಸಿ ತ್ಯಾಗಿ ಮನವಿ; ಅಂತರ ಕಾಯ್ದುಕೊಂಡ ಜೆಡಿಯು
ಈ ಸಂಬಂಧ ಕೆ.ಸಿ. ತ್ಯಾಗಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನಿತೀಶ್ ಕುಮಾರ್ ಅವರನ್ನು "ಅಮೂಲ್ಯ ರತ್ನ" ಎಂದು ಬಣ್ಣಿಸಿದ್ದಾರೆ.

ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿ
ಆದಾಗ್ಯೂ, ಬಿಹಾರ ಸಿಎಂ ನಿಯಮಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Video | 'ಆಕೆ ನರಕಕ್ಕೆ ಹೋಗಲಿ, ನಿತೀಶ್ ಕುಮಾರ್ ಮಾಡಿದ್ದು ಸರಿ': ಮುಸ್ಲಿಂ ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ ಸಮರ್ಥಿಸಿಕೊಂಡ BJP ಸಚಿವ
ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ.

Hijab ವಿವಾದ ಬೆನ್ನಲ್ಲೇ ಸಿಎಂ ವಿರುದ್ಧ ದೂರು ದಾಖಲು: ಬೆದರಿಕೆ ಹಿನ್ನಲೆ ನಿತೀಶ್ ಕುಮಾರ್ ಭದ್ರತೆ ಹೆಚ್ಚಳ!
ಹೊಸದಾಗಿ ನೇಮಕಗೊಂಡ ವೈದ್ಯರಿಗೆ ನೇಮಕಾತಿ ಪತ್ರ ವಿತರಣೆಯ ಸಮಯದಲ್ಲಿ ಮಹಿಳಾ ಅಭ್ಯರ್ಥಿಯ ಹಿಜಾಬ್ ಎಳೆದ ವಿವಾದದ ಬೆನ್ನಲ್ಲೇ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ರಾಂಚಿಯ ಇಟ್ಕಿ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಾಗಿದೆ.

