• Tag results for oath

ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ನಾಳೆ ಪ್ರಮಾಣ ವಚನ ಸ್ವೀಕಾರ

ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ದೇಶದ ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

published on : 24th July 2022

ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭೆಯಲ್ಲಿಂದು ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದರು. ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆ ಹೊಂದಿ, ತಮ್ಮ ಕರ್ತವ್ಯವನ್ನು ಶ್ರದ್ಧಾ ಪೂರ್ವಕವಾಗಿ ನಿರ್ವಹಿಸುವೆ ಎಂದು ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರು.

published on : 21st July 2022

ಕನ್ನಡದಲ್ಲಿ ರಾಘವೇಂದ್ರ ಸ್ವಾಮೀಜಿ ಹೆಸರಲ್ಲಿ ನಟ ಜಗ್ಗೇಶ್ ಪ್ರಮಾಣ ವಚನ: ದೆಹಲಿಯಲ್ಲಿರುವ ರಾಯರ ಮಠಕ್ಕೆ ಭೇಟಿ

ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣವಚನ ಸ್ವೀಕರಿಸಿದ್ದಾರೆ. ​ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

published on : 8th July 2022

ಮಹಾರಾಷ್ಟ್ರ: ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕಾರ

ಮಹಾರಾಷ್ಟ್ರದಲ್ಲಿ ಕಳೆದ ಎರಡು ವಾರಗಳಿಂದ ಉಂಟಾಗಿದ್ದ ರಾಜಕೀಯ ಬಿಕ್ಕಟ್ಟು ಸದ್ಯಕ್ಕೆ ಅಂತ್ಯಗೊಂಡಿದೆ. ಉದ್ಧವ್ ಠಾಕ್ರೆ ನೇತೃತ್ವದ 31 ತಿಂಗಳ ಮಹಾ ಆಘಾದಿ ಸರ್ಕಾರ ಪತನವಾಗಿ ಶಿವಸೇನಾ ಬಂಡಾಯ ನಾಯಕ ಏಕನಾಥ್ ಶಿಂಧೆ ನೇತೃತ್ವದಲ್ಲಿನ ನೂತನ ಶಿವಸೇನಾ-ಬಿಜೆಪಿ  ಸರ್ಕಾರ ಅಸ್ತಿತ್ವಕ್ಕೆ ಬಂದಿದೆ.

published on : 30th June 2022

ಒಡಿಶಾದಲ್ಲಿ ಸಂಪುಟ ಪುನಾರಚನೆ: ನಾಳೆ ನೂತನ ಸಚಿವರ ಪ್ರಮಾಣ ವಚನ ಸಾಧ್ಯತೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಸಂಪುಟದ ಎಲ್ಲಾ ಸಚಿವರ ರಾಜೀನಾಮೆ ಕೇಳಿದ್ದಾರೆ. ನೂತನ ಸಚಿವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

published on : 4th June 2022

ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರ

ತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.

published on : 15th May 2022

ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ

ಕೊನೆ ಕ್ಷಣದಲ್ಲಿ ನಡೆದ ಹೈ ಡ್ರಾಮದೊಂದಿಗೆ ಪಾಕಿಸ್ತಾನದ ಪ್ರಧಾನಿ ಶಹಬಾಜ್ ಷರೀಫ್ ಪುತ್ರ ಹಮ್ಜಾ ಶಹಬಾಜ್ ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಪಂಜಾಬ್ ನಲ್ಲಿ ದೇಶದ ಅತಿ ಹೆಚ್ಚು 110 ಮಿಲಿಯನ್ ಜನಸಂಖ್ಯೆ ವಾಸಿಸುತ್ತಿದೆ. 

published on : 30th April 2022

ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ-ಜರ್ದಾರಿ ಪ್ರಮಾಣ ವಚನ ಸ್ವೀಕಾರ

ಪಾಕಿಸ್ತಾನದ ನೂತನ ವಿದೇಶಾಂಗ ಸಚಿವರಾಗಿ ಬಿಲಾವಲ್ ಭುಟ್ಟೋ ಜರ್ದಾರಿ  ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಪ್ರಧಾನಿ ಶೆಹಬಾಜ್ ಷರೀಫ್ ನೇತೃತ್ವದ ಹೊಸ ಸರ್ಕಾರದಲ್ಲಿ ಅವರ ಪಾತ್ರದ ಬಗೆಗಿನ ಊಹಾಪೋಹಗಳಿಗೆ ಅಂತ್ಯ ಹಾಡಿದ್ದಾರೆ.

published on : 28th April 2022

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್ ಪದಗ್ರಹಣ; ದೇಶ ಕವಲು ಹಾದಿಯಲ್ಲಿದೆ- ಡಿಕೆಶಿ

ದೇಶ ಇಂದು ವಿವಿಧ ರೀತಿಯಲ್ಲಿ ಕವಲು ಹಾದಿಯಲ್ಲಿದೆ. ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ವರ್ಗದ ಜನ ಅಧಿಕಾರಕ್ಕೆ ಬಂದಂತೆ ಎಂದು ರಾಜ್ಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

published on : 28th March 2022

ಉತ್ತರ ಪ್ರದೇಶ: ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಉಪಸ್ಥಿತಿ

ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಸತತ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಶುಕ್ರವಾರ ಪದಗ್ರಹಣ ಮಾಡಿದರು.

published on : 25th March 2022

ಎರಡನೇ ಅವಧಿಗೆ ಸಿಎಂ ಆಗಿ ಯೋಗಿ ಆದಿತ್ಯನಾಥ್ ನಾಳೆ ಪ್ರಮಾಣ ವಚನ, ಪ್ರಧಾನಿ ಮೋದಿ ಸೇರಿ ಹಲವು ಗಣ್ಯರು ಭಾಗಿ

ಇತ್ತೀಚಿಗೆ ನಡೆದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಸಂಭ್ರಮದ ಪಾಳಯದಲ್ಲಿರುವ ಯೋಗಿ ಆದಿತ್ಯನಾಥ್ ನಾಳೆ ಸತತ ಎರಡನೇ ಅವಧಿಗೆ ಮುಖ್ಯಮಂತ್ರಿ ಹುದ್ದೆಗೇರಲಿದ್ದಾರೆ.  

published on : 24th March 2022

ಉತ್ತರಾಖಂಡ್: ನಾಳೆ ಸಂಪುಟ ಸಚಿವರೊಂದಿಗೆ ಮುಖ್ಯಮಂತ್ರಿ ಧಮಿ ಪ್ರಮಾಣ ವಚನ ಸ್ವೀಕಾರ

ಉತ್ತರಾಖಂಡ್ ನಲ್ಲಿ  ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಬಿಜೆಪಿ ಮುಖಂಡ ಪುಷ್ಕರ್ ಸಿಂಗ್ ಧಮಿ, ನಾಳೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ..

published on : 22nd March 2022

ಪಂಜಾಬ್: ಸಚಿವರಾಗಿ ಆಮ್ ಆದ್ಮಿ ಪಕ್ಷದ 10 ಮಂದಿ ಶಾಸಕರು ಪ್ರಮಾಣವಚನ ಸ್ವೀಕಾರ

ಪಂಜಾಬ್ ವಿಧಾನಸಬಾ ಚುನಾವಣೆಯಲ್ಲಿ ಬಹುಮತ ಪಡೆದ ಆಮ್ ಆದ್ಮಿ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು, ಪಕ್ಷದ 10 ಶಾಸಕರು ಶನಿವಾರ ಸಂಪುಟ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

published on : 19th March 2022

ಪಂಜಾಬ್​ನ 18ನೇ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ

ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತ ಪಡೆದಿರುವ ಎಎಪಿ ಪಕ್ಷದ ಭಗವಂತ್‌ ಮಾನ್ ಅವರು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​ ಸಿಂಗ್​ ಹುಟ್ಟೂರಾದ ಖಟ್ಕರ್ ಕಲಾನ್​​ನಲ್ಲಿ 18ನೇ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

published on : 16th March 2022

ಉತ್ತರ ಪ್ರದೇಶ: ಹೋಳಿ ಹಬ್ಬ ಬಳಿಕ ಬಿಜೆಪಿಯಿಂದ ಹೊಸ ಸರ್ಕಾರ ರಚನೆ ಸಾಧ್ಯತೆ

ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ಬಂದಿದ್ದು, ಹೋಳಿ ಹಬ್ಬದ ಬಳಿಕ ಸರ್ಕಾರ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದುಬಂದಿದೆ.

published on : 12th March 2022
1 2 > 

ರಾಶಿ ಭವಿಷ್ಯ