ರಾಜ್ಯಪಂಚನಾಮೆ ಆಧಾರದಲ್ಲಿ ಎಫ್ಐಆರ್ ದಾಖಲು ಸರಿಯಲ್ಲ: ಹೈಕೋರ್ಟ್
ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಆರೋಪಿಗಳಿಂದ ಮದ್ಯದ ಬಾಟಲ್ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿದೆ.