- Tag results for passes away
![]() | ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. |
![]() | ಮಲಯಾಳಂನ ಜನಪ್ರಿಯ ನಟ ಇನ್ನೋಸೆಂಟ್ ನಿಧನಮಲಯಾಳಂನ ಜನಪ್ರಿಯ ನಟ ಹಾಗೂ ಮಾಜಿ ಲೋಕಸಭಾ ಸದಸ್ಯ ಇನ್ನೋಸೆಂಟ್ ಭಾನುವಾರ ತಡರಾತ್ರಿ ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು. ಇನ್ನೋಸೆಂಟ್ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. |
![]() | ಹಾಸನ: ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಜೈನರ ಪವಿತ್ರ ಕ್ಷೇತ್ರಗಳಲ್ಲೊಂದಾದ ಶ್ರವಣಬೆಳಗೊಳದ ದಿಗಂಬರ ಜೈನಮಠದ ಮುಖ್ಯಸ್ಥ ಹಾಗೂ ಧರ್ಮಾಧ್ಯಕ್ಷ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಇಂದು ಇಹಲೋಕ ತ್ಯಜಿಸಿದರು. |
![]() | ಇಂದೋರ್: ಕಾಲೇಜು ಪ್ರಾಂಶುಪಾಲರಿಗೆ ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ; ಚಿಕಿತ್ಸೆಗೆ ಸ್ಪಂದಿಸದೆ ಸಾವುಫೆಬ್ರುವರಿ 20 ರಂದು ಮಾಜಿ ವಿದ್ಯಾರ್ಥಿಯಿಂದ ಬೆಂಕಿ ಹಚ್ಚಿಸಿಕೊಂಡು ಶೇ 80 ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಇಂದೋರ್‌ನ ಖಾಸಗಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಶನಿವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. |
![]() | ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಪತಿ ಡಾ ದೇವಿಸಿಂಗ್ ಆರ್.ಶೇಖಾವತ್ ನಿಧನ, ಅಂತ್ಯಕ್ರಿಯೆ ಇಂದುಶಿಕ್ಷಣ ತಜ್ಞ ಮತ್ತು ರಾಜಕಾರಣಿ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿಸಿಂಗ್ ರಾಂಸಿಂಗ್ ಶೇಖಾವತ್ ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. |
![]() | ಡಬ್ಬಿಂಗ್ ಮಾಡುವಾಗ ಅಸ್ವಸ್ಥ: ತಮಿಳಿನ ಜನಪ್ರಿಯ ಹಾಸ್ಯನಟ ಆರ್. ಮಯಿಲ್ ಸಾಮಿ ನಿಧನತಮಿಳು ಹಾಸ್ಯನಟ ಚಿತ್ರವೊಂದಕ್ಕೆ ಡಬ್ಬಿಂಗ್ ಮಾಡುವಾಗ ಅಸ್ವಸ್ಥಗೊಂಡಿದ್ದಾರೆ. ಈ ವೇಳೆ ಅವರ ಕುಟುಂಬ ಸದಸ್ಯರು ಮತ್ತು ಸಹೋದ್ಯೋಗಿಗಳು ಅವರನ್ನು ಚೆನ್ನೈನ ಪೊರೂರು ಶ್ರೀ ರಾಮಚಂದ್ರ ವೈದ್ಯಕೀಯ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಅವರು ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ. |
![]() | ಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನಭಾರತೀಯ ಫುಟ್ಬಾಲ್ ದಂತಕಥೆ ತುಳಸಿದಾಸ್ ಬಲರಾಮ್ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದ ನಂತರ ಗುರುವಾರ ಕೋಲ್ಕತ್ತಾದಲ್ಲಿ ನಿಧನರಾದರು ಎಂದು ಅವರ ಕುಟುಂಬದ ನಿಕಟ ಮೂಲಗಳು ತಿಳಿಸಿವೆ. |
![]() | ರಾಷ್ಟ್ರ ಪ್ರಶಸ್ತಿ, ಪದ್ಮಭೂಷಣ ವಿಜೇತೆ, ಹಿರಿಯ ಗಾಯಕಿ ವಾಣಿ ಜೈರಾಮ್ ನಿಧನಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿ ಪದ್ಮಭೂಷಣ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತೆ ಗಾಯಕಿ ವಾಣಿ ಜೈರಾಮ್ ಅವರು ಇಂದು ನಿಧನರಾಗಿದ್ದಾರೆ. |
![]() | ಶಂಕರಾಭರಣಮ್, ಸಾಗರ ಸಂಗಮಮ್ ಸಿನಿಮಾಗಳ ಖ್ಯಾತ ನಿರ್ದೇಶಕ ಕೆ.ವಿಶ್ವನಾಥ್ ನಿಧನಸ್ವಾತಿ ಮುತ್ಯಮ್, ಶಂಕರಾಭರಣಂ, ಸಾಗರ ಸಂಗಮಮ್ ಸೇರಿದಂತೆ ಹಲವು ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ಕಾಶಿನಾಥುನಿ ವಿಶ್ವನಾಥ್ (ಕೆ.ವಿಶ್ವನಾಥ್) ಗುರುವಾರ (ಫೆ.2) ರಂದು ಇಹಲೋಕ ತ್ಯಜಿಸಿದ್ದಾರೆ. |
![]() | ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್ ವಿಧಿವಶಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. |
![]() | ಖ್ಯಾತ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ನಿಧನವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಿವಿ ದೋಷಿ ಎಂದು ಪ್ರೀತಿಯಿಂದ ಕರೆಯಲ್ಪಡುತ್ತಿದ್ದ ಖ್ಯಾತ ಭಾರತೀಯ ವಾಸ್ತುಶಿಲ್ಪಿ ಬಾಲಕೃಷ್ಣ ದೋಷಿ ಅವರು ಮಂಗಳವಾರ ಅಹಮದಾಬಾದ್‌ನಲ್ಲಿ ನಿಧನರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. |
![]() | ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಹೃದಯಾಘಾತದಿಂದ ನಿಧನವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. |
![]() | ಜೆಡಿಯು ಸಂಸ್ಥಾಪಕ ಅಧ್ಯಕ್ಷರಾಗಿದ್ದ ಶರದ್ ಯಾದವ್ ನಿಧನ!ಜೆಡಿಯು ಮಾಜಿ ರಾಷ್ಟ್ರೀಯ ಅಧ್ಯಕ್ಷ ಶರದ್ ಯಾದವ್ ಇಂದು ಗುರುಗ್ರಾಮ್‌ನ ಫೋರ್ಟಿಸ್ ಆಸ್ಪತ್ರೆಯಲ್ಲಿ ನಿಧನರಾದರು. |
![]() | ಬೆಂಗಳೂರು: ರೈಲ್ವೆ ನಿಲ್ದಾಣದಲ್ಲಿ ಕುಸಿದುಬಿದ್ದು ಶ್ರೀ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಲಿಂಗೈಕ್ಯಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬುಧವಾರ ಲಿಂಗೈಕ್ಯರಾಗಿದ್ದಾರೆ. |