ದೇಶಶತಕೋಟಿ ಕೋವಿಡ್ ಲಸಿಕೆ ಪೂರೈಕೆ ಕೇವಲ ಸಂಖ್ಯೆಯಲ್ಲ, ದೇಶದ ಸಾಮರ್ಥ್ಯವನ್ನು ತೋರಿಸಿದೆ, ಹೊಸ ಅಧ್ಯಾಯದ ಆರಂಭ: ಪ್ರಧಾನಿ ಮೋದಿ
ಅಕ್ಟೋಬರ್ 21, 2021ಕ್ಕೆ ಭಾರತ ಶತಕೋಟಿ ಕೋವಿಡ್-19 ಲಸಿಕೆ ಪೂರೈಕೆ ಗುರಿಯನ್ನು ಸಾಧಿಸಿದೆ. ಇದು ಪ್ರತಿಯೊಬ್ಬ ಭಾರತೀಯನ ಸಾಧನೆ. 100 ಕೋಟಿ ಲಸಿಕೆ ಪ್ರಮಾಣ ಕೇವಲ ಸಂಖ್ಯೆಯಲ್ಲ, ರಾಷ್ಟ್ರವಾಗಿ ನಮ್ಮ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸುತ್ತದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.