ರಾಜ್ಯನಾಳೆ ಸಚಿವ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯೂ ಆಗಲಿದೆ: ಸಚಿವ ಕೆಎಚ್ ಮುನಿಯಪ್ಪ
ಶನಿವಾರ ಮಧ್ಯಾಹ್ನ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಸಂಜೆ ವೇಳೆಗೆ ಖಾತೆ ಹಂಚಿಕೆಯಾಗಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪ ಶುಕ್ರವಾರ ಹೇಳಿದ್ದಾರೆ. ನಾಲ್ಕೈದು ಸಚಿವ ಸ್ಥಾನಗಳನ್ನು ಹೊರತುಪಡಿಸಿ ಉಳಿದ ಸ್ಥಾನಗಳನ್ನು ಒಂದೇ ದಿನದಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದರು.