ಸಿನಿಮಾ ಸುದ್ದಿಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಟ ದರ್ಶನ್ ವಿರುದ್ಧ ಕ್ರಮ: ಫಿಲಂ ಚೇಂಬರ್ ಅಧ್ಯಕ್ಷ ಎನ್ಎಂ ಸುರೇಶ್
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ತೂಗುದೀಪ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್ಸಿಸಿ) ಅಧ್ಯಕ್ಷ ಎನ್ಎಂ ಸುರೇಶ್ ಬುಧವಾರ ಹೇಳಿದ್ದಾರೆ.