social_icon
  • Tag results for press meet

ತಮಿಳು ನಟ ಸಿದ್ದಾರ್ಥ್ ಪತ್ರಿಕಾಗೋಷ್ಠಿ ತಡೆದು ರಕ್ಷಣಾ ವೇದಿಕೆ ಆಕ್ರೋಶ: ಕನ್ನಡಿಗರ ಪರವಾಗಿ ಕ್ಷಮೆ ಕೋರಿದ ಪ್ರಕಾಶ್ ರಾಜ್

ತಮಿಳು ಖ್ಯಾತ ನಟ ಸಿದ್ದಾರ್ಥ್ ಅವರು ‘ಚಿಕ್ಕು’ ಚಿತ್ರದ ಪ್ರಚಾರಾರ್ಥ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಕಾವೇರಿ ಪರ ಹೋರಾಟಗಾರರ ಆಕ್ರೋಶಕ್ಕೆ ಗುರಿಯಾದ ಘಟನೆ ಗುರುವಾರ ನಡೆದಿದೆ.

published on : 29th September 2023

ಕುತೂಹಲ ಕೆರಳಿಸಿದ ಮಾಜಿ ಪ್ರಧಾನಿ ದೇವೇಗೌಡ ಸುದ್ದಿಗೋಷ್ಠಿ: ದೆಹಲಿಯಲ್ಲಿ ಇಂದು ಬಿಜೆಪಿ-ಜೆಡಿಎಸ್ ಮೈತ್ರಿ ಅಧಿಕೃತ ಘೋಷಣೆ?

ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸುದ್ದಿ ಬೆನ್ನಲ್ಲೇ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿರುವ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಇಂದು ಶುಕ್ರವಾರ ದೆಹಲಿಯಲ್ಲಿ ಬೆಳಗ್ಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಕೆರಳಿಸಿದೆ.

published on : 22nd September 2023

ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ: ಬಸವರಾಜ ಬೊಮ್ಮಾಯಿ ಕಿಡಿ

ಕಾಂಗ್ರೆಸ್ ಸರಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ. ಹಣಕಾಸಿನ ವ್ಯವಸ್ಥೆ ಮಾಡಲು ಸಾಧ್ಯವಾಗಿಲ್ಲ. ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪಿಸಿದ್ದಾರೆ. 

published on : 15th June 2023

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 'ಗೃಹಲಕ್ಷ್ಮಿ' ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ 'ಗೃಹ ಲಕ್ಷ್ಮಿ' ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

published on : 15th June 2023

ಐದು ಗ್ಯಾರಂಟಿ ಘೋಷಣೆ: ಜೂನ್ 11 ರಿಂದ ಮಹಿಳೆಯರಿಗೆ ಉಚಿತ ಪ್ರಯಾಣ, ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ

ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನಾ ಜನತೆಗೆ ನೀಡಲಾಗಿದ್ದ ಎಲ್ಲಾ ಗ್ಯಾರಂಟಿ ಭರವಸೆಗಳನ್ನು ಪ್ರಸಕ್ತ ಹಣಕಾಸು ವರ್ಷದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

published on : 2nd June 2023

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಗೆ 52 ಜನರು ಬಲಿ: ಅಪಾರ ಪ್ರಮಾಣದ ಆಸ್ತಿ, ಬೆಳೆ ಹಾನಿ

ರಾಜ್ಯದಲ್ಲಿ  ಮುಂಗಾರು ಪೂರ್ವ ಮಳೆಗೆ ಈವರೆಗೂ 52 ಮಂದಿ ಸಾವನ್ನಪ್ಪಿದ್ದು, ಅಪಾರ ಪ್ರಮಾಣದಲ್ಲಿ ಆಸ್ತಿ ಪಾಸ್ತಿ, ಬೆಳೆ ಹಾನಿಯ ವರದಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದು, ಕೂಡಲೇ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. 

published on : 23rd May 2023

ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಬಿಎಸ್ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ; ಎಲ್ಲರ ಚಿತ್ತ ಮಾಜಿ ಸಿಎಂ ಮಾತಿನತ್ತ!

ಕರ್ನಾಟಕದ ಪ್ರಬಲ ಲಿಂಗಾಯತ ಸಮುದಾಯದ ಮುಖಂಡ, ಬಿಜೆಪಿಯನ್ನು ದಕ್ಷಿಣ ಭಾರತದ ರಾಜ್ಯವೊಂದರಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣೀಭೂತರಾದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ಗುರುವಾರ ಬೆಳಗ್ಗೆ 11 ಗಂಟೆಗೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.

published on : 30th March 2023

ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

published on : 11th March 2023

ವೇಷ ಬದಲಾಯಿಸಿ ಗುಜರಾತಿನಲ್ಲಿ ತಲೆಮರೆಸಿಕೊಂಡಿದ್ದ 'ಸ್ಯಾಂಟ್ರೋ ರವಿ' ಸೇರಿ ನಾಲ್ವರ ಸೆರೆ: ಎಡಿಜಿಪಿ ಅಲೋಕ್ ಕುಮಾರ್

ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಅನೈತಿಕ ದಂಧೆ ಮತ್ತು ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಸ್ಯಾಂಟ್ರೋ ರವಿಯನ್ನು ಗುಜರಾತಿನ ಅಹಮಾದಾಬಾದ್ ನಲ್ಲಿ ಬಂಧಿಸುವಲ್ಲಿ ರಾಜ್ಯ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. 

published on : 13th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9