• Tag results for protests

ಬಜೆಟ್ ಚರ್ಚೆ ಬಿಟ್ಟು, ಕಾಶ್ಮೀರ್ ಫೈಲ್ಸ್ ಚಿತ್ರ ವೀಕ್ಷಣೆಗೆ ಆಹ್ವಾನ: ಸರ್ಕಾರದ ಪ್ರಕಟಣೆಗೆ ಕಾಂಗ್ರೆಸ್ ಪ್ರತಿಭಟನೆ

‘ದಿ ಕಾಶ್ಮೀರ್ ಫೈಲ್ಸ್’ ಚಲನಚಿತ್ರವನ್ನು ಪರಿಷತ್ ಸದಸ್ಯರಿಗೆ ಆಹ್ವಾನಿಸುವ ಸರ್ಕಾರದ ಪ್ರಕಟಣೆಯನ್ನು ಸದನದಲ್ಲಿ ಉಲ್ಲೇಖಿಸಿದ ಸಭಾಪತಿ ಬಸವರಾಜ ಹೊರಟ್ಟಿಯವರ ಕ್ರಮಕ್ಕ ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಇದರಿಂದ ಸದನದಲ್ಲಿ ತೀವ್ರ ಗದ್ದಲ ಸೃಷ್ಟಿಯಾಗಿತ್ತು.

published on : 16th March 2022

ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆಲ್ಲೂ ಪ್ರತಿಭಟನೆ, ಮೆರವಣಿಗೆ ನಡೆಸಬಾರದು: ಹೈಕೋರ್ಟ್

ಪ್ರಮುಖ ಬೆಳವಣಿಗೆಯೊಂದರಲ್ಲಿ, ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವುದೇ ಪ್ರತಿಭಟನೆ...

published on : 3rd March 2022

ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾದಲ್ಲೂ ವಿರೋಧ: ಸುಮಾರು 3 ಸಾವಿರ ಪ್ರತಿಭಟನಾಕಾರರ ಬಂಧನ

ಉಕ್ರೇನ್ ವಿರುದ್ಧ ಯುದ್ಧ ನಡೆಸುತ್ತಿರುವ ಅಧ್ಯಕ್ಷ ವಾಡ್ಲಿಮಿರ್ ಪುಟಿನ್ ಅವರ ಧೋರಣೆ ವಿರುದ್ಧ ರಷ್ಯಾದಲ್ಲಿಯೂ ಭಾರೀ ವಿರೋಧ ವ್ಯಕ್ತವಾಗಿದೆ. ಕಳೆದ ಮೂರು ದಿನಗಳಿಂದ ಯುದ್ಧ ವಿರೋಧಿ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದ ಸುಮಾರು 3 ಸಾವಿರ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

published on : 27th February 2022

ಫ್ರಾನ್ಸ್ ನಲ್ಲಿ ಪಾಕಿಸ್ತಾನ ವಿರುದ್ಧ ಬೃಹತ್ ಪ್ರತಿಭಟನೆ; ಕಪ್ಪು ಪಟ್ಟಿಗೆ ಪಾಕ್ ಸೇರಿಸಲು ಆಗ್ರಹ

ಪಾಕಿಸ್ತಾನದ ಹಣೆಬರಹವನ್ನು ಇನ್ನೇನು ಕೆಲವೇ ದಿನಗಳಲ್ಲಿ ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್ಎಟಿಎಫ್) ನಿರ್ಧಾರ ಮಾಡಲಿದೆ. ಇಮ್ರಾನ್ ಖಾನ್ ನೇತೃತ್ವದ ಸರ್ಕಾರಕ್ಕೆ ಈ ಬಾರಿಯ ಎಫ್ಎಟಿಎಫ್ ಸಭೆ ಮಾಡು ಇಲ್ಲವೇ ಮಡಿ...

published on : 20th February 2022

ಈಶ್ವರಪ್ಪ ರಾಜೀನಾಮೆಗೆ ಕಾಂಗ್ರೆಸ್ ಬಿಗಿಪಟ್ಟು, ಅಹೋರಾತ್ರಿ ಧರಣಿ, ಉಭಯ ಸದನಗಳ ಕಲಾಪ ನಾಳೆಗೆ ಮುಂದೂಡಿಕೆ

ರಾಷ್ಟ್ರಧ್ವಜ ಕುರಿತು ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಬಿಗಿಪಟ್ಟು ಹಿಡಿದು ಪ್ರತಿಪಕ್ಷ ಕಾಂಗ್ರೆಸ್ ಇಂದು ಕೂಡಾ ಉಭಯ ಸದನಗಳಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಗದ್ದಲ ಕೋಲಾಹಲವೇರ್ಪಟ್ಟು, ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

published on : 17th February 2022

ಬೆಂಗಳೂರು: ಪ್ರತಿಭಟನೆ ಬಳಿಕ ದೊಡ್ಡಬೆಟ್ಟಹಳ್ಳಿ ಆರೋಗ್ಯ ಕೇಂದ್ರ ಪುನರಾರಂಭ

ಸ್ಥಳೀಯ ನಿವಾಸಿಗಳು ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಸದಸ್ಯರು ತೀವ್ರವಾಗಿ ಪ್ರತಿಭಟನೆ ನಡೆಸಿದ ಬಳಿಕ ಯಲಹಂಕ ವಿಧಾನಸಭಾ ಕ್ಷೇತ್ರದ ದೊಡ್ಡ ಬೆಟ್ಟ ಹಳ್ಳಿಯಲ್ಲಿ ಕಳೆದ 4 ವರ್ಷಗಳಿಂದ ಮುಚ್ಚಲ್ಪಟ್ಟಿದ್ದ ಪ್ರಾಥಮಿಕ ಆರೋಗ್ಯ ಕೇಂದ್ರ ಪುನರಾರಂಭಗೊಳ್ಳುತ್ತಿದೆ.

published on : 10th February 2022

ಹಿಜಾಬ್ ಪ್ರತಿಭಟನೆಯಲ್ಲಿ ಹಿಂಸಾಚಾರ: ವಿದ್ಯಾರ್ಥಿ, ಶಿಕ್ಷಕನಿಗೆ ಕಬ್ಬಿಣದ ರಾಡ್ ನಿಂದ ಥಳಿತ!

ರಾಜ್ಯದಲ್ಲಿ ಫೆ.08 ರಂದು ನಡೆದ ಹಿಜಾಬ್ ಪರ-ವಿರೋಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇದರಲ್ಲಿ ಭಾರಿ ಪ್ರಮಾದಗಳು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 

published on : 9th February 2022

ಹಿನ್ನೋಟ 2021: ಮೂರು ಕೃಷಿ ಕಾನೂನುಗಳು ರದ್ದು; ಮೋದಿ ಐತಿಹಾಸಿಕ ಘೋಷಣೆಗೆ ಕಾರಣವಾದ ರೈತ ಹೋರಾಟದ ಹಾದಿ...

ಕಳೆದ ವರ್ಷ ಸೆಪ್ಟೆಂಬರ್ 27 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ಕೃಷಿ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಕಿತ ಹಾಕಿದ ನಂತರ ರಾಷ್ಟ್ರ ರಾಜಧಾನಿ ದೆಹಲಿಯ ಗಡಿಗಳಲ್ಲಿ ಆರಂಭವಾದ ರೈತರ...

published on : 29th December 2021

ಕಾಂಗ್ರೆಸ್ ಪ್ರತಿಭಟನೆಯಿಂದ ಸದನದ ಕಲಾಪಕ್ಕೆ ಹೊಡೆತ: ಸಿಎಂ ಬೊಮ್ಮಾಯಿ

ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ನಡೆದ ಚಳಿಗಾಲದ ವಿಧಾನಮಂಡಲ ಅಧಿವೇಶನ ಪರಿಣಾಮಕಾರಿಯ ಮತ್ತು ಫಲಪ್ರದವಾಗಿತ್ತು ಎಂದು ಹೇಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸದನದಲ್ಲಿ ಆಡಳಿತ ಪಕ್ಷವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆಗೆ ಮುಂದಾದಾಗಲೆಲ್ಲ ಕಾಂಗ್ರೆಸ್ ದ್ವಿಮುಖ ನೀತಿ ಅನುಸರಿಸುತ್ತಿತ್ತು ಎಂದು ಆರೋಪಿಸಿದ್ದಾರೆ.

published on : 25th December 2021

ಲಖಿಂಪುರ್ ಖೇರಿ ಹಿಂಸಾಚಾರ ಕುರಿತು ಎಸ್ಐಟಿ ವರದಿ: ಪ್ರತಿಪಕ್ಷಗಳಿಂದ ತೀವ್ರ ಗದ್ದಲ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದ ಎಸ್‌ಐಟಿ ವರದಿಯ ಕುರಿತು ಪ್ರತಿಪಕ್ಷಗಳು ತೀವ್ರ ಗದ್ದಲ ಸೃಷ್ಟಿಸಿದ್ದು, ಈ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ ಎಂದು ಬುಧವಾರ ತಿಳಿದುಬಂದಿದೆ.

published on : 15th December 2021

ಕೃಷಿ ಕಾಯ್ದೆ ವಿರೋಧಿಸಿ ನಡೆದ ಹೋರಾಟದಲ್ಲಿ ರೈತರು ಸಾವನ್ನಪ್ಪಿಲ್ಲ: ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್

ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸಿದ ಹೋರಾಟದಲ್ಲಿ ಪೊಲೀಸರು ಕೈಗೊಂಡ ಕ್ರಮದಿಂದಾಗಿ ರೈತರು ಸಾವನ್ನಪ್ಪಿಲ್ಲ ಎಂದು ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಹೇಳಿದೆ.

published on : 10th December 2021

ಡೆಡ್ ಲೈನ್ ಮುಕ್ತಾಯ: ಎಲ್ಲ ಬೇಡಿಕೆಗಳನ್ನು ಅಂಗೀಕರಿಸಿದ ಕೇಂದ್ರ; ರೈತರ ಒಂದು ವರ್ಷದ ನಿರಂತರ ಹೋರಾಟಕ್ಕೆ ಇಂದು ತೆರೆ ಸಾಧ್ಯತೆ

ಕೇಂದ್ರ ಸರ್ಕಾರಕ್ಕೆ ರೈತರು ನೀಡಿದ್ದ ಡೆಡ್ ಲೈನ್ ಇಂದಿಗೆ ಮುಕ್ತಾಯವಾಗುತ್ತಿದ್ದು, ಕೃಷಿ ಕಾನೂನು ಮತ್ತು ರೈತರ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರೈತರು ನಡೆಸುತ್ತಿದ್ದ ಬೃಹತ್ ಪ್ರತಿಭಟನೆಗೆ ಇಂದು ತೆರೆ ಬೀಳುವ ಸಾಧ್ಯತೆ ಇದೆ.

published on : 8th December 2021

ಓಮ್ರಿಕಾನ್ ಆತಂಕ: ವಿರೋಧದ ನಡುವೆಯೂ ಕಂಟೈನ್ಮೆಂಟ್ ವಲಯಗಳ ಸೀಲ್'ಡೌನ್ ಮಾಡಿದ ಅಧಿಕಾರಿಗಳು!

ಸೋಂಕಿತ ವೈದ್ಯನ ಮನೆ ಬೋರ್ಡ್ ಹಾಕಿ ರಸ್ತೆಯನ್ನು ಸೀಲ್ ಡೌನ್ ಮಾಡಿದ್ದ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಾಗೂ ತಜ್ಞರು ಕಿಡಿಕಾರಿದ್ದು, ಅಧಿಕಾರಿಗಳ ಈ ನಡೆ ಭಾರತೀಯ ವೈದ್ಯಕೀಯ ಸಂಘದ ಜಾರಿಗೆ ತಂದಿರುವ ನಿಯಮದ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.

published on : 4th December 2021

ಕಾಂಗ್ರೆಸ್ ಪ್ರತಿಭಟನೆ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಇಸ್ರೋ ಮುಖ್ಯಸ್ಥ ಕೆ.ಶಿವನ್

ಇಸ್ರೋ ಅಧ್ಯಕ್ಷ ಕೆ.ಶಿವನ್ ಅವರು ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

published on : 4th December 2021

ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದತಿ ಮಸೂದೆ ಅಂಗೀಕಾರ

ಮುಂದೂಡಲ್ಪಟ್ಟಿದ್ದ ಲೋಕಸಭಾ ಕಲಾಪ ಪ್ರಾರಂಭವಾಗುತ್ತಿದ್ದಂತೆಯೇ ಕೇಂದ್ರ ಸರ್ಕಾರ ಕೃಷಿ ಕಾಯ್ದೆ ರದ್ದತಿ-2021 ರ ಮಸೂದೆಯನ್ನು ಪ್ರತಿಪಕ್ಷಗಳ ಪ್ರತಿಭಟನೆ ನಡುವೆಯೇ ಅಂಗೀಕರಿಸಿದೆ. 

published on : 29th November 2021
1 2 3 > 

ರಾಶಿ ಭವಿಷ್ಯ