Rahul Gandhi, Priyanka

ಭಾರತ್ ಜೋಡೋ ಯಾತ್ರೆ: ರಾಹುಲ್ 'ಪಪ್ಪು' ಅಲ್ಲ ಎಂಬುದು ಜನರಿಗೆ ಮನವರಿಕೆ- ಸಂಧ್ಯಾ ಗೋಖಲೆ
ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ 'ಪಪ್ಪು' ಇಮೇಜ್ ಸತ್ಯ ಅಲ್ಲ ಎಂಬುದು ಜನರಿಗೆ ಮನವರಿಕೆಯಾಗುತ್ತಿದೆ ಎಂದು ಲೇಖಕಿ-ಚಿತ್ರ ನಿರ್ದೇಶಕಿ ಸಂಧ್ಯಾ ಗೋಖಲೆ ಹೇಳಿದ್ದಾರೆ.

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ನೋಡಲು ಮುಗಿಬಿದ್ದ ಜನ: ಕಾಲ್ತುಳಿತದಲ್ಲಿ ವೇಣುಗೋಪಾಲ್ ಕೈಕಾಲಿಗೆ ಪೆಟ್ಟು
ಭಾರತ್ ಜೋಡೋ ಯಾತ್ರೆಯ ವೇಳೆ ಮಧ್ಯಪ್ರದೇಶದ ಇಂದೋರ್ ನಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಬಿದ್ದು ಗಾಯಗೊಂಡಿದ್ದಾರೆ.

ಚೀನಾದ ಸೇನೆ ಮಾಡಲಾಗದ್ದನ್ನು ನೋಟು ಅಮಾನ್ಯೀಕರಣ, ಜಿಎಸ್ಟಿ ಮಾಡಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, 'ನೋಟು ಅಮಾನ್ಯೀಕರಣ ಮತ್ತು ದೋಷಪೂರಿತ ಜಿಎಸ್ಟಿ ಮೂಲಕ ಬಿಜೆಪಿ ಸರ್ಕಾರವು ಉದ್ಯೋಗ ಸೃಷ್ಟಿ, ಎಂಎಸ್ಎಂಇ ಮತ್ತು ಕೃಷಿ ವಲಯದ ಬೆನ್ನೆಲುಬನ್ನು ಹಾಳುಮಾಡಿದೆ' ಎಂದು ಆರೋಪಿಸಿದರು.

ಕೆಸಿ ವೇಣುಗೋಪಾಲ್ ಗೆ ರಾಜಸ್ಥಾನ ಕಾಂಗ್ರೆಸ್ ಬಿಕ್ಕಟ್ಟು ಶಮನ ಹೊಣೆ!
ಭಾರತ್ ಜೋಡೋ ಯಾತ್ರೆ ರಾಜಸ್ಥಾನ ಪ್ರವೇಶಿಸುತ್ತಿರುವ ಹೊತ್ತಿನಲ್ಲೇ ಅಲ್ಲಿ ಕಾಂಗ್ರೆಸ್ ಬಣ ರಾಜಕೀಯ ಭುಗಿಲೆದ್ದಿದ್ದು, ಇದೀಗ ಡ್ಯಾಮೇಜ್ ಕಂಟ್ರೋಲ್ ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಜವಾಬ್ದಾರಿಯನ್ನು ಎಐಸಿಸಿ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಗೆ ವಹಿಸಿದೆ.

ಮಧ್ಯ ಪ್ರದೇಶಕ್ಕೆ ಭಾರತ್ ಜೋಡೋ ಯಾತ್ರೆ: ಸಮಾಜದಲ್ಲಿನ ದ್ವೇಷ, ಹಿಂಸೆಯ ವಿರುದ್ಧ ನಮ್ಮ ಅಭಿಯಾನ; ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಬುಧವಾರ ಬೆಳಗ್ಗೆ ನೆರೆಯ ಮಹಾರಾಷ್ಟ್ರದಿಂದ ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಬೋದರ್ಲಿ ಗ್ರಾಮವನ್ನು ಪ್ರವೇಶಿಸಿತು. ಈ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಭಾರತ್ ಜೋಡೋ ಯಾತ್ರೆ: ನಾಳೆಯಿಂದ 4 ದಿನಗಳ ಕಾಲ ಪ್ರಿಯಾಂಕಾ ಗಾಂಧಿ ಭಾಗಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗ ಮಧ್ಯ ಪ್ರದೇಶ ಪ್ರವೇಶಿಸಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಬುಧವಾರ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಹಾತ್ಮ ಗಾಂಧಿ ಕೊಲ್ಲಲು ಗೋಡ್ಸೆಗೆ ಬಂದೂಕಿನ ನೆರವು ನೀಡಿದ್ದೇ ಸಾವರ್ಕರ್: ಮರಿ ಮೊಮ್ಮಗ ತುಷಾರ್ ಗಾಂಧಿ ಹೇಳಿಕೆ
ಸಾವರ್ಕರ್ ಕುರಿತಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಅಂತಹುದೇ ಸ್ಫೋಟಕ ಹೇಳಿಕೆಯೊಂದು ಮಹಾತ್ಮ ಗಾಂಧಿ ಅವರ ಮರಿ ಮೊಮ್ಮಗ ತುಷಾರ್ ಗಾಂಧಿ ಅವರಿಂದ ಬಂದಿದೆ.

ಕಾಂಗ್ರೆಸ್ ಮನ್ರೇಗಾ, ವಿದ್ಯಾರ್ಥಿವೇತನ ನೀಡಿದೆ; ಬಿಜೆಪಿ ಭೂಮಿ ಕಿತ್ತು ಕೊಂಡಿದೆ: ಗುಜರಾತ್ ಆದಿವಾಸಿಗಳಿಗೆ ರಾಹುಲ್
ಭಾರತ್ ಜೋಡೋ ಯಾತ್ರೆ ವೇಳೆ ರೈತರು, ಯುವಕರು ಮತ್ತು ಬುಡಕಟ್ಟು ಜನಾಂಗದವರನ್ನು ಭೇಟಿಯಾದ ನಂತರ ಅವರ ನೋವು ಏನೆಂಬುದನ್ನು ಅರಿತಿದ್ದೇನೆ. ಬಿಜೆಪಿ ಅರಣ್ಯವನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಮೂಲಕ ಆದಿವಾಸಿಗಳನ್ನು ಸ್ಥಳಾಂತರಿಸುವ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಅಧಿಕಾರದಿಂದ ಕೆಳಗಿಳಿದವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ; ರಾಹುಲ್ ವಿರುದ್ಧ ಪ್ರಧಾನಿ ಮೋದಿ
ಅಧಿಕಾರದಿಂದ ಹೊರಹಾಕಲ್ಪಟ್ಟವರು ಮತ್ತೆ ಅಧಿಕಾರಕ್ಕೆ ಬರಲು ಯಾತ್ರೆ ನಡೆಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಟೀಕಿಸಿದ್ದಾರೆ.

