Rahul Gandhi, Priyanka

ತಮ್ಮ ರಾಜಕೀಯ ಭವಿಷ್ಯದ ಕುರಿತ ದುಗುಡದಿಂದ ಸಿಂಧಿಯಾ ತಮ್ಮ ಸಿದ್ಧಾಂತವನ್ನು ಮರೆತಿದ್ದಾರೆ: ರಾಹುಲ್ ಗಾಂಧಿ
ಜ್ಯೋತಿರಾಡಿತ್ಯ ಸಿಂಧಿಯಾ ತಮ್ಮ ರಾಜಕೀಯ ಭವಿಷ್ಯದ ಕುರಿತ ದುಗುಡದಿಂದಾಗಿ ತಮ್ಮ ಮೂಲ ಸಿದ್ದಾಂತವನ್ನು ಮರೆತಿದ್ದಾರೆ. ಅವರಿಗೆ ಬಿಜೆಪಿಯಲ್ಲಿ ದೊಡ್ಡ ನಿರಾಶೆ ಕಾದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ತೈಲ ಬೆಲೆ ಇಳಿಕೆ ಲಾಭ ಜನರಿಗೆ ವರ್ಗಾಯಿಸಿ: ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಆಗ್ರಹ
ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತೈಲೋತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಕುಸಿಯುತ್ತಿದೆ. ಇದರ ಪ್ರಯೋಜನಗಳನ್ನು ದೇಶದ ಸಾಮಾನ್ಯ ಜನರಿಗೆ ತಲುಪಿಸಲು ಯಾವುದೇ ಪ್ರಯತ್ನ ನಡೆಸದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಾಲಯ, ಜನರಿಂದ ಚುನಾಯಿತಗೊಂಡಿರುವ ಕಾಂಗ್ರೆಸ್ ಸರ್ಕಾರಗಳನ್ನು ಅಭದ್ರಗೊಳಿಸುವಲ್ಲಿ ಬಿಡುವಿಲ್ಲದೆ...

ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿರಕ್ಕೆ ಪ್ರಧಾನಿ ಮೋದಿಯೇ ಕಾರಣ: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಧ್ಯ ಪ್ರದೇಶ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಮೌನ ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಚುನಾಯಿತ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಹುಲ್ ಪಕ್ಷವನ್ನು ಮುನ್ನಡೆಸುವ ಸಮಯವಿದು- ದಿನೇಶ್ ಗುಂಡೂರಾವ್
ಮಧ್ಯಪ್ರದೇಶ ಕಾಂಗ್ರೆಸ್ ನಲ್ಲಿ ಬಂಡಾಯದ ಬೆನ್ನಲ್ಲೇ ರಾಹುಲ್ ಗಾಂಧಿ ಪಕ್ಷವನ್ನು ಮುನ್ನಡೆಸುವ ಹಾಗೂ ಉನ್ನತ ಹಂತದಲ್ಲಿ ತೀವ್ರ ಬದಲಾವಣೆ ಮಾಡಬೇಕಾದ ಸಮಯ ಇದಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷರ ನೇಮಕ ವಿಳಂಬ ಮಾಡದಂತೆ ರಾಹುಲ್ ಬಳಿ ಚರ್ಚೆ- ದಿನೇಶ್ ಗುಂಡೂರಾವ್
ಕೆಪಿಸಿಸಿ ನೂತನ ಅಧ್ಯಕ್ಷರನ್ನು ಕಾಂಗ್ರೆಸ್ ಹೈಕಮಾಂಡ್ ಇನ್ನೂ ನೇಮಕ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರಾಹುಲ್ ಗಾಂಧಿ ಅವರನ್ನು ಶನಿವಾರ ಭೇಟಿಯಾಗಿದ್ದರು.

ಅಂಬಾನಿ ಮನೆಯಲ್ಲಿ ಹೋಳಿ ಸಂಭ್ರಮ: ಬಣ್ಣದಲ್ಲಿ ಮಿಂಚಿದ ಸ್ಟಾರ್'ಗಳು!
ಶ್ರೀಮಂತ ಉದ್ಯಮಿ, ಭಾರತದ ಕುಬೇರ ಎಂದೇ ಖ್ಯಾತಿ ಪಡೆದಿರುವ ಮುಖೇಶ್ ಅಂಬಾನಿ ಪುತ್ರಿ ಇಶಾ ಅಂಬಾನಿ ಮತ್ತು ಅಳಿಯ ಆನಂದ್ ಪಿರಮಲ್ ಅವರು ಶುಕ್ರವಾರ ಆಯೋಜಿಸಿದ್ದ ಹೋಳಿ ಹಬ್ಬದ ಸಂಭ್ರಮದಲ್ಲಿ ಬಾಲಿವುಡ್'ನ ಸ್ಟಾರ್ ಗಳು ಭಾಗಿಯಾಗಿ ಬಣ್ಣಗಳಲ್ಲಿ ಮಿಂದೆದ್ದರು.

ಯೆಸ್ ಬ್ಯಾಂಕ್ ಬಿಕ್ಕಟ್ಟು: ಪ್ರಧಾನಿ ಮೋದಿ ಮತ್ತು ಅವರ ವಿಚಾರದಿಂದ ದೇಶದ ಆರ್ಥಿಕತೆ ಹಾಳಾಗುತ್ತಿದೆ: ರಾಹುಲ್ ಗಾಂಧಿ
ಪ್ರಧಾನಿ ಮೋದಿ ಮತ್ತು ಅವರ ವಿಚಾರದಿಂದ ದೇಶದ ಆರ್ಥಿಕತೆ ಹಾಳಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

''ದ್ವೇಷ ದೆಹಲಿಯನ್ನು ನಾಶಮಾಡಿದೆ'': ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಬಳಿಕ ರಾಹುಲ್
ರಾಹುಲ್ ಗಾಂಧಿ ನೇತೃತ್ವದ ನಿಯೋಗ 47 ಮಂದಿಯನ್ನು ಬಲಿ ಪಡೆದ ಈಶಾನ್ಯ ದೆಹಲಿಯ ಕೋಮುಗಲಭೆ ಪೀಡಿತ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ, ಹಿಂಸಾಚಾರದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದರು.

ಸಾಮಾಜಿಕ ಮಾಧ್ಯಮ ಬಳಸದಿರಲು ಪ್ರಧಾನಿ ಮೋದಿ ಚಿಂತನೆ, ಮೊದಲು 'ದ್ವೇಷ ಬಿಡಿ' ಎಂದ ರಾಹುಲ್
ಫೇಸ್ಬುಕ್, ಟ್ವಿಟರ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಂತಹ ಸಾಮಾಜಿಕ ಮಾಧ್ಯಮ ಖಾತೆಗಳನ್ನು ತ್ಯಜಿಸಲು ಯೋಚಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಚ್ಚರಿಯ ಟ್ವೀಟ್ ಮಾಡಿದ್ದಾರೆ.

