Rahul Gandhi, Priyanka

ಕರ್ನಾಟಕ ಸರ್ಕಾರಕ್ಕೆ ರಾಹುಲ್ ಗಾಂಧಿ ಪತ್ರ; ಬಳ್ಳಾರಿ ಜೀನ್ಸ್ ಘಟಕಗಳಿಗೆ ಶಕ್ತಿ ತುಂಬುವಂತೆ ಒತ್ತಾಯ!
ಕಾಂಗ್ರೆಸ್ ನಾಯಕ ಮಾಜಿ ಸಂಸದ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮೇ. 10 ರಂದು ನೀಡಿದ್ದ ಭರವಸೆಗೆ ಸಂಬಂಧಿಸಿದ ಪತ್ರ ಇದಾಗಿದೆ.

ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆಗೆ ಜಮೀನು ಗುರುತಿಸಿ: ಅಧಿಕಾರಿಗಳಿಗೆ ಸಿಎಂ ಸೂಚನೆ
ಬಿಸಿಲ ನಾಡು ಗಣಿ ಜಿಲ್ಲೆ ಬಳ್ಳಾರಿಯನ್ನು ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಪೂರ್ವ ನೀಡಿದ ಭರವಸೆ ನನಸಾಗುವತ್ತ ಒಂದು ಹೆಜ್ಜೆ ಮುಂದಿಟ್ಟಿದೆ. ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿಯನ್ನು ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.

'ಮಣಿಪುರ ಮೂಲಕ ನೀವು ಭಾರತವನ್ನು ಕೊಂದಿದ್ದೀರಿ; ನೀವು ದೇಶಭಕ್ತನಲ್ಲ, ದೇಶದ್ರೋಹಿ': ಲೋಕಸಭೆಯಲ್ಲಿ ರಾಹುಲ್ ಗಾಂಧಿ ವಾಗ್ದಾಳಿ
'ಕಳೆದ ಬಾರಿ ನಾನು ಲೋಕಸಭೆ ಅಧಿವೇಶನದಲ್ಲಿ ಮಾತನಾಡಿದ್ದಾಗ ನನ್ನ ಮಾತುಗಳನ್ನು ಅದಾನಿ ಮೇಲೆ ಕೇಂದ್ರೀಕರಿಸಿದ್ದೆ. ಇದರಿಂದ ನಿಮ್ಮ ಹಿರಿಯ ನಾಯಕನಿಗೆ ನೋವಾಗಿರಬಹುದು. ಆ ನೋವು ನಿಮ್ಮ ಮೇಲೆ ಕೂಡ ಪರಿಣಾಮ ಬೀರಿರಬಹುದು ಎಂದು ನಾನು ಭಾವಿಸುತ್ತೇನೆ.

ಲೋಕಸಭಾ ಸದಸ್ಯತ್ವ ಮರುಸ್ಥಾಪನೆ; ರಾಹುಲ್ ಗಾಂಧಿಗೆ ಅಧಿಕೃತ ಸರ್ಕಾರಿ ಬಂಗಲೆ ಮರುನಿಗದಿ!
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಅಧಿಕೃತ ಸರ್ಕಾರಿ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ. ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಅದಾದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯ ಒಬಿಸಿ ಹಿನ್ನೆಲೆ ಉಲ್ಲೇಖಿಸಿ ರಾಹುಲ್, I.N.D.I.A ವಿರುದ್ಧ ಬಿಜೆಪಿ ಪ್ರತಿದಾಳಿ!
ಬಿಜೆಪಿ ಲೋಕಸಭೆಯಲ್ಲಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಮೇಲೆ ವೈಯಕ್ತಿಕ ದಾಳಿ ಹಾಗೂ ಇತರ ಹಿಂದುಳಿದ ವರ್ಗಗಳ ಅಥವಾ ಒಬಿಸಿ ಸದಸ್ಯ ಪ್ರಧಾನಿ ನರೇಂದ್ರ ಮೋದಿ ಅವರ ಅರ್ಹತೆಯನ್ನು ಎತ್ತಿ ಹಿಡಿಯುವುದರೊಂದಿಗೆ ಅವಿಶ್ವಾಸ ನಿರ್ಣಯ ಕುರಿತು ವಿಪಕ್ಷಗಳ ವಿರುದ್ಧ ಪ್ರತಿದಾಳಿ ನಡೆಸಿತು.

ಪ್ರಧಾನಿ ಮೋದಿ 'ಮೌನ ವ್ರತ' ಮುರಿಯಲು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು: ಗೌರವ್ ಗೊಗೊಯ್
ಮಣಿಪುರ ಹಿಂಸಾಚಾರ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೌನ ತಾಳಿಸಿದ್ದು, ಈ ಮೌನ ವ್ರ ಮುರಿಯುವ ಸಲುವಾಗಿಯೇ ಪ್ರತಿಪಕ್ಷಗಳ INDIA ಒಕ್ಕೂಟ ಅವಿಶ್ವಾಸ ನಿರ್ಣಯ ಮಂಡಿಸಬೇಕಾಯಿತು ಎಂದು ಪ್ರತಿಪಕ್ಷದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರು ಮಂಗಳವಾರ ಹೇಳಿದರು.

ಭಾರತ್ ಜೋಡೋ ಭಾಗ-2: ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 2ನೇ ಹಂತದ ಭಾರತ್ ಜೋಡೋ ಪಾದಯಾತ್ರೆಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಗುಜರಾತ್‌ನಿಂದ ಮೇಘಾಲಯದವರೆಗೆ ರಾಹುಲ್ ಗಾಂಧಿ ಪಾದಯಾತ್ರೆ ಮಾಡಲಿದ್ದಾರೆ.

ಆಗಸ್ಟ್ 12-13ರಂದು ಕೇರಳದ ವಯನಾಡ್‌ಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಆಗಸ್ಟ್ 12 ರಿಂದ ಆಗಸ್ಟ್ 13ರವರೆಗೆ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಎರಡು ದಿನಗಳ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮಂಗಳವಾರ ತಿಳಿಸಿದ್ದಾರೆ.

ನಾನು ರಾಹುಲ್ ಗಾಂಧಿಯನ್ನು ಮದುವೆಯಾಗಲು ಸಿದ್ಧಳಿದ್ದೇನೆ ಆದರೆ ಒಂದು ಕಂಡೀಷನ್: ಶೆರ್ಲಿನ್ ಛೋಪ್ರಾ ಹೇಳಿಕೆ ವೈರಲ್
ನಾನು ರಾಹುಲ್ ಗಾಂಧಿಯವರನ್ನು ಮದುವೆಯಾಗಲು ಸಿದ್ಧಳಿದ್ದೇನೆ ಎಂದು ಬಾಲಿವುಡ್ ನಟಿ ಶೆರ್ಲಿನ್ ಛೋಪ್ರಾ ನೀಡಿರುವ ಹೇಳಿಕೆ ವೈರಲ್ ಆಗುತ್ತಿದೆ.

