• Tag results for rain

ಹತ್ತು ಜೋಡಿ ದೂರ ಸಂಚಾರದ ವಿಶೇಷ ರೈಲುಗಳಿಗೆ ಪ್ರಸ್ತಾವನೆ ಸಲ್ಲಿಸಿದ ನೈರುತ್ಯ ರೈಲ್ವೆ

ದೇಶದ ವಿವಿಧ ಭಾಗಗಳಿಗೆ ಉತ್ತಮ ರೈಲು ಸಂಪರ್ಕ ಕಲ್ಪಿಸಲು ನೈರುತ್ಯ ರೈಲ್ವೆ ವಲಯ 10 ಜೋಡಿ ದೂರ ಸಂಪರ್ಕ ವಿಶೇಷ ರೈಲುಗಳನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಸಂಚರಿಸುವಂತೆ ಮಾಡಲು ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿದೆ. ಕೆಲ ವಾರಗಳ ಹಿಂದೆ ಸಲ್ಲಿಸಿರುವ ಪ್ರಸ್ತಾವನೆಗೆ ಹಸಿರು ನಿಶಾನೆ ಸಿಗಬೇಕಿದೆ.

published on : 11th August 2020

ಮಂಗಳೂರು: ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನ!

ರಾಜ್ಯದಲ್ಲಿ ಮಳೆ ಅವಾಂತರ ಸರಣಿ ಮುಂದುವರೆದಿದ್ದು, ವಿದ್ಯುತ್ ತಂತಿ ತುಳಿದು ಬೈಕ್ ಸವಾರ ಸಜೀವ ದಹನವಾದ ಧಾರುಣ ಘಟನೆ ಮಂಗಳೂರಿನಲ್ಲಿ ನಡೆದಿದೆ.

published on : 11th August 2020

ಆಗಸ್ಟ್ 14 ರವರೆಗೂ ಭಾರೀ ಮಳೆ; ಇರಲಿ ಎಚ್ಚರ!

ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಆ.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

published on : 11th August 2020

ಬೆಳಗಾವಿಯಲ್ಲಿ ಧಾರಾಕಾರ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು; ಜನ-ಜಾನುವಾರುಗಳಿಗೆ ಸೂರು ನಿರ್ಮಾಣ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ ಈ ವರ್ಷವೂ ತುಂಬಿ ಹರಿಯುತ್ತಿದೆ, ನದಿಗಾಗಿ ನಿರ್ಮಿಸಿರುವ ಜಲಾಶಯಗಳು ಕೂಡ ತುಂಬಿವೆ.

published on : 11th August 2020

ಮೆದುಳಿನ ಶಸ್ತ್ರಚಿಕಿತ್ಸೆಯ ನಂತರ ವೆಂಟಿಲೇಟರ್ ಬೆಂಬಲ ಪಡೆದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಭಾರತದ ಮಾಜಿ ರಾಷ್ಟ್ರಪತಿ  ಪ್ರಣಬ್ ಮುಖರ್ಜಿ ದೆಹಲಿಯ ಆರ್ & ಆರ್ ಆಸ್ಪತ್ರೆಗೆ ದಾಖಲಾಗಿದ್ದು ಇದೀಗ ಅವರು ವೆಂಟಿಲೇಟರ್ ಬೆಂಬಲದಲ್ಲಿದ್ದಾರೆ. 

published on : 11th August 2020

ನೆರೆ: ರಾಜ್ಯದ ಜೊತೆಗೆ ಇಂದು ಪ್ರಧಾನಿ ಸಭೆ, ಸಿಎಂ ಗೈರು ಹಿನ್ನೆಲೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ಬೊಮ್ಮಾಯಿ, ಅಶೋಕ್ ಭಾಗಿ

ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಅತಿವೃಷ್ಠಿ ಹಾಗೂ ಪ್ರವಾಹ ಭೀತಿ ತಲೆದೋರಿರುವ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ರಾಜ್ಯ ಸರ್ಕಾರದೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ...

published on : 10th August 2020

ಭಾರೀ ಮಳೆ, ಹಲವೆಡೆ ಪ್ರವಾಹ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಸೋಮವಾರ ಭಾರೀ ಮಳೆಯಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

published on : 10th August 2020

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ: ಬಂಟ್ವಾಳದಲ್ಲಿ ರೆಡ್ ಆಲರ್ಟ್ ಘೋಷಣೆ

ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಮತ್ತು ಕುಮಾರ ಧಾರ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ.

published on : 9th August 2020

ಹೆದ್ದಾರಿಯಲ್ಲಿ ಕೃತಕ ನೆರೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರು ತಡೆದು ಸಾರ್ವಜನಿಕರ ಆಕ್ರೋಶ

ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ಮಳೆ ನೀರು ನಿಂತು ಹೊಳೆಯಂತಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರ ಕಾರು ತಡೆದು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರದ ಬಸ್ರೂರು ಬಳಿ ಮೂರುಕೈ ಜಂಕ್ಷನ್ ಬಳಿ ನಡೆದಿದೆ.

published on : 8th August 2020

ಧಾರವಾಡದಲ್ಲಿ ವರುಣನ ರೌದ್ರನರ್ತನ: ಗಂಜಿಗಟ್ಟಿ ಕೆರೆಯಲ್ಲಿ ಕೊಚ್ಚಿ ಹೋದ 8 ವರ್ಷದ ಬಾಲಕಿ

ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ‌ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

published on : 8th August 2020

ಭಾರೀ ಭೂಕುಸಿತ: ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಎರಡು ಬಂದ್!

ಭಾರೀ ಭೂಕುಸಿತ, ರಸ್ತೆ ಬಿರುಕು ಮತ್ತು ಭಾರೀ ಮಳೆಯಿಂದಾಗಿ ಮರಗಳು ಧರೆಗುಳಿದಿದ್ದರಿಂದ ಚಾರ್ಮಾಡಿ ಘಾಟ್‌ನಲ್ಲಿ(ಎನ್‌ಎಚ್ -73) ವಾಹನಗಳ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.

published on : 7th August 2020

ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರತೆ ಪಡೆದಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ರೆಡ್‍ ಅಲರ್ಟ್ ಘೋಷಿಸಲಾಗಿದೆ. 

published on : 7th August 2020

ಭೂ ಕುಸಿತ ಭೀತಿ: ಕೊಡಗು ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ

ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಅಲಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿಯೂ ಭೂ ಕುಸಿತ ಉಂಟಾಗುತ್ತಿದ್ದು, ಇದರಿಂದ ಕಚೇರಿಯನ್ನು ತಾತ್ಕಾಲಿಕ ಸ್ಥಳಾಂತರ ಮಾಡಲಾಗಿದೆ.

published on : 7th August 2020

ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ವರುಣನ ರೌದ್ರಾವತಾರ: ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆ, ಹಲವೆಡೆ ಭೂಕುಸಿತ

ಪಶ್ಚಿಮ ಘಟ್ಟ ಮತ್ತು ಮಲೆ ನಾಡಿನ ಹಲವು ತಾಲೂಕುಗಳಲ್ಲಿ ಭಾನುವಾರದಿಂದ ಗುರುವಾರದವರೆಗೂ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳು ,ಸೇತುವೆಗಳು ಹಾನಿಗೊಳಗಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.

published on : 7th August 2020

ರಾಜ್ಯದ ಹಲವೆಡೆ ಮುಂದುವರೆದ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ಥ

ಕೊಡಗು, ಮಲೆನಾಡು ಹಾಗೂ ಪಶ್ಚಿಮ ಘಟ್ಟ ಪ್ರದೇಶ ಸೇರಿದಂತೆ ರಾಜ್ಯದ ಹಲವೆಡೆ  ಧಾರಾಕಾರ ಮಳೆ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

published on : 7th August 2020
1 2 3 4 5 6 >